ಬೀದರ್: ಬೀದರ್ ಜಿಲ್ಲೆಯ 4 ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತಮ್ಮ ಠಾಣಾ ವ್ಯಾಪ್ತಿಯಲ್ಲಿ 5 ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾ ಜೂಜಾಟ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ.
ಮಟ್ಕಾ ಜೂಜಾಟದಲ್ಲಿ ತೊಡಗಿದವರ ಮೇಲೆ ದಾಳಿ ಮಾಡಿ ಮೊತ್ತ 4,480 ರೂಪಾಯಿಗಳನ್ನು ವಶ ಪಡಿಸಿಕೊಂಡು 6 ಜನ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆ ನಡೆಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx