nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸ್ಟೆಲ್ ಗೇಟ್ ಹತ್ತಿ ವಿದ್ಯಾರ್ಥಿನಿ ತೆರಳಿದ ಪ್ರಕರಣ: ಆಟೋ ಚಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ
    ಕೊರಟಗೆರೆ July 16, 2023

    ಹಾಸ್ಟೆಲ್ ಗೇಟ್ ಹತ್ತಿ ವಿದ್ಯಾರ್ಥಿನಿ ತೆರಳಿದ ಪ್ರಕರಣ: ಆಟೋ ಚಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ

    By adminJuly 16, 2023No Comments2 Mins Read
    koratagere
    • ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.

    ಕೊರಟಗೆರೆ: ಕಲ್ಪತರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ 102ಹಾಸ್ಟೆಲ್‍ನಲ್ಲಿ 40ಕಡೆ ಮಾತ್ರ ಖಾಯಂ ವಾರ್ಡನ್‍ಗಳ ನೇಮಕ.. ಬರೋಬ್ಬರಿ 62 ವಸತಿ ನಿಲಯಗಳ ವಾರ್ಡನ್ ಹುದ್ದೆಯೇ ಖಾಲಿ.. 102 ವಸತಿ ಶಾಲೆಗಳಿಗೆ ಕಾವಲುಗಾರನ ನೇಮಕ ಇದ್ರು ಭದ್ರತೆಯೇ ಮರೀಚಿಕೆ.. ನಿಲಯದ ಕಟ್ಟಡಗಳಲ್ಲಿ ನೆಪಮಾತ್ರಕ್ಕೆ ಸಿಸಿಟಿವಿ ಲಭ್ಯವಿದ್ರು ನಿರ್ವಹಣೆಯೇ ಇಲ್ಲದಾಗಿ ಭಯವೇ ಇಲ್ಲದಾಗಿದೆ.

    ತುಮಕೂರು ಜಿಲ್ಲೆಯ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಗುಬ್ಬಿ, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಕುಣಿಗಲ್ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ 102 ವಸತಿ ನಿಲಯಗಳಿವೆ. ಸರಕಾರಿ ಮೆಟ್ರಿಕ್ ನಂತರದ ಮತ್ತು ಪೂರ್ವದ 102 ವಸತಿ ಶಾಲೆಗಳಲ್ಲಿ 62 ಕಡೆ ಖಾಲಿಯಿವೆ. ವಾರ್ಡನ್ ಮತ್ತು ಕಾವಲಗಾರನ ಕೊರತೆಯಿಂದ ನಿರ್ವಹಣೆಗೆ ಸಮಸ್ಯೆಯಾಗಿದೆ.

    ವಾರ್ಡನ್ ಇಲ್ಲದಿರುವ ವಸತಿ ಶಾಲೆಗಳ ನಿರ್ವಹಣೆಗೆ ಎರಡು ಕಡೆ ಒಬ್ಬರಿಗೆ ಜವಾಬ್ದಾರಿ ನೀಡಲಾಗಿದೆ. ಇನ್ನೂ ಕೇಲವು ಕಡೆ ಇಲಾಖೆಯ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ವಾರ್ಡನ್ ನೇಮಕಾತಿ ಕೊರತೆಯಿಂದ ಸ್ಥಳೀಯವಾಗಿ ಪ್ರತಿನಿತ್ಯ ಸಮಸ್ಯೆಗಳ ಸರಮಾಲೆಯೇ ಉದ್ಬವಿಸುತ್ತಿವೆ. ಅಧಿಕಾರಿಗಳ ಭಯವೇ ವಿದ್ಯಾರ್ಥಿಗಳಿಗೆ ಇಲ್ಲದೇ ತಡರಾತ್ರಿ ಇಂತಹ ದುರ್ಘಟನೆ ನಡಿಯೋದು ಸರ್ವೇ ಸಾಮಾನ್ಯ ಎಂಬುದು ಸ್ಥಳೀಯರ ಮಾತಾಗಿದೆ.

    ಪೋಕ್ಸೋ ಖಾಯ್ದೆಯಡಿ ಪ್ರಕರಣ ದಾಖಲು..

    ಕೊರಟಗೆರೆ ಪಟ್ಪಣದ ಬಾಲಕಿಯರ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಯನ್ನ ತಡರಾತ್ರಿ ಆಟೋ ಹತ್ತಿಸಿಕೊಂಡು ಹೋಗಿದ್ದ ದುಗ್ಗೆನಹಳ್ಳಿಯ ಆಟೋ ಚಾಲಕ ಆರ್ಯಗೌಡ(24) ಬಂಧಿಸಲಾಗಿದೆ. ಆರೋಪಿಯ ಮೇಲೆ ಪೋಕ್ಸೋಕಾಯ್ದೆ ಮತ್ತು ಅಕ್ರಾಸಿಟಿ ಕಾಯ್ದೆಯಡಿ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ವೆಂಕಟೇಶನಾಯ್ಡು, ಕೊರಟಗೆರೆ ಪಿಎಸೈ ಚೇತನಗೌಡ ಬೇಟಿನೀಡಿ ತನಿಖೆಯನ್ನು ಇನ್ನಷ್ಟು ಚುರುಕು ಗೊಳಿಸಿದ್ದಾರೆ.

    ಹಾಸ್ಟೇಲ್‍ ಗೆ ಜಂಟಿ ನಿರ್ದೇಶಕ ಭೇಟಿ..

    ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಹಾಸ್ಟೇಲ್‍ಗೆ ಬೇಟಿನೀಡಿ ಮೆಟ್ರಿಕ್ ಪೂರ್ವ ಮತ್ತು ನಂತರದ ನಿಲಯದ ವಾರ್ಡನ್, ಕಾವಲುಗಾರಿಗೆ ನೋಟಿಸ್ ಜಾರಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಸ್ಟೆಲ್‍ನ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ ಸಿಸಿಟಿವಿ ನಿರ್ವಹಣೆ ಮತ್ತು ರಾತ್ರಿ ಪಾಳೇಯದ ಲೋಪಗಳ ಬಗ್ಗೆ ಮಾಹಿತಿ ಕಲೆಹಾಕಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

    358 ಜನ ವಿದ್ಯಾರ್ಥಿಗಳ ರಕ್ಷಣೆ ಯಾರದ್ದು..?

    ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ-50, ಬಾಲಕರ ವಿದ್ಯಾರ್ಥಿ ನಿಲಯ-70, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ-90, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ-90 ಮತ್ತು ಅಕ್ಕಿರಾಂಪುರದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ-58ಜನ ಸೇರಿ ಒಟ್ಟು 358ಜನ ವಿದ್ಯಾರ್ಥಿಗಳ ಬಳಿಯು ಮೊಬೈಲ್ ಸೌಲಭ್ಯವಿದೆ. ತಡರಾತ್ರಿ 1ಗಂಟೆವರೇಗೆ ವಿದ್ಯಾರ್ಥಿಗಳು ಮೊಬೈಲ್ ಬಳಸುತ್ತಿರುವ ಪರಿಣಾಮ ಇಂತಹ ಸಮಸ್ಯೆ ಸೃಷ್ಟಿ ಆಗುತ್ತೀವೆ. ಸರಕಾರ ಮತ್ತು ಇಲಾಖೆ ಇದರ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ.

    ನಿಲಯದ ಭದ್ರತೆ ಮತ್ತು ಕರ್ತವ್ಯ ಲೋಪ ಎಸಗಿದ ವಾರ್ಡನ್-ಕಾವಲುಗಾರ ಮೇಲೆ ಕ್ರಮ ಆಗತ್ತೇ. ಆರೋಪಿಯ ಮೇಲೆ ಪೋಕ್ಸೋ ಮತ್ತು ಅಕ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ನಿರ್ವಹಣೆ ಮತ್ತು ರಾತ್ರಿ ಪಾಳೇಯದ ಭದ್ರತೆಯ ಬಗ್ಗೆ ತನಿಖೆ ನಡೆಯುತ್ತೆ. ತುಮಕೂರು ಜಿಲ್ಲೆಯ 102ಹಾಸ್ಟೆಲ್‍ನಲ್ಲಿ 62ಕಡೆ ವಾರ್ಡನ್ ಹುದ್ದೆಯೇ ಖಾಲಿಯಿದೆ. ಹುದ್ದೆಭರ್ತಿಗೆ ಈಗಾಗಲೇ ಸರಕಾರಕ್ಕೆ ಮನವಿ ಮಾಡಲಾಗಿದೆ.

    –ಕೃಷ್ಣಪ್ಪ.ಎಸ್. ಜಂಟಿ ನಿರ್ದೇಶಕ. ಸಮಾಜ ಕಲ್ಯಾಣ ಇಲಾಖೆ.ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.