nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ವಿರುದ್ಧ ಜಾತಿ ನಿಂದನೆ ಪ್ರಕರಣ: ಕ್ರಮಕ್ಕೆ ಅರಣ್ಯ ಸಚಿವರಿಗೆ ಮನವಿ
    ಜಿಲ್ಲಾ ಸುದ್ದಿ October 2, 2025

    ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ವಿರುದ್ಧ ಜಾತಿ ನಿಂದನೆ ಪ್ರಕರಣ: ಕ್ರಮಕ್ಕೆ ಅರಣ್ಯ ಸಚಿವರಿಗೆ ಮನವಿ

    By adminOctober 2, 2025No Comments3 Mins Read
    eshwar khandre

    ಸರಗೂರು: ಹೆಡಿಯಾಲ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಮೇಲೆ ಈಗಾಗಲೇ ಜಾತಿನಿಂದನೆ ಪ್ರಕರಣ ದಾಖಲಾಗಿದೆ, ಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಯಿಂದ ಅರಣ್ಯ ಸಚಿವರಾದ ಈಶ್ವರ ಬಿ. ಖಂಡ್ರೆ ಅವರಿಗೆ ಎಂದು ಮನವಿ ಸಲ್ಲಿಸಲಾಯಿತು.

    ನಂತರ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರು, ಡಿಸಿಎಫ್ ಅಧಿಕಾರಿಗಳಿಗೆ ಪರಿಶೀಲನೆ ನಡೆಸಿ ಹೆಡಿಯಾಲ ವಲಯದ ಸಹಾಯಕ ಸಂರಕ್ಷಣಾಧಿಕಾರಿ ಎ ವಿ ಸತೀಶ್ ರವರನ್ನು ಸೂಕ್ತ ಕಾನೂನು ಕ್ರಮ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು.

    ಬಂಡೀಪುರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಹಚಾರ ಚೆನ್ನಾಗಿ ಇಲ್ಲ ಎಂಬುವುದಕ್ಕೆ ಮತ್ತೊಂದು ತಾಜಾ ಉದಾಹರಣೆ ಮತ್ತೊಬ್ಬ ಅಧಿಕಾರಿ ಮೇಲೆ ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಕಳೆದ ಹದಿನೈದು ದಿನಗಳ ಹಿಂದೆ ಬಂಡೀಪುರ ಅರಣ್ಯ ಇಲಾಖೆಯ 15 ಅಧಿಕಾರಿಗಳು ಮೇಲೆ ಪ್ರಕರಣ ದಾಖಲಾಗಿತ್ತು. ಇದು ಮಾಸುವ ಮುನ್ನ ಎಸಿ.ಎಫ್ ಒಬ್ಬರ ಮೇಲೆ ಎ ಎಫ್ ಆರ್ ದಾಖಲು ಮಾಡಿದರೂ ರಾಜಕೀಯ ನಾಯಕರ ಕೈವಾಡದಿಂದ ಎಸ್ಸಿ ಎಸ್ಟಿ ಜನಾಂಗದವರಿಗೆ ನ್ಯಾಯ ಸಿಕ್ಕುತ್ತಿಲ್ಲ ಎನ್ನುವ ಆಕ್ರೋಶ ಕೇಳಿಬಂದಿದೆ

    ಎಸಿಎಫ್ ಸತೀಶ್ ರವರನ್ನು ವರ್ಗಾವಣೆ ಮಾಡಿ ನ್ಯಾಯ ಸಿಕ್ಕುವ ನಿಟ್ಟಿನಲ್ಲಿ ಕೆಲಸ ಮಾಡುವ ಬದಲು ರಾಜಕೀಯ ನಾಯಕರು ಸೇರಿದಂತೆ ಮುಖಂಡರು ಒತ್ತಡ ತಂದು ಅರಣ್ಯ ಇಲಾಖೆಯಲ್ಲಿ ಶ್ರದ್ಧೆಯಿಂದ ಕೆಲಸ ಮಾಡುವ ಅಧಿಕಾರಿಗಳ ಮೇಲೆ ವರ್ಗಾವಣೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪೀಯ ಹೆಡಿಯಾಲ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್, ಎ.ವಿ ಅವರ ಮೇಲೆ ಅರಣ್ಯ ಇಲಾಖೆ ಹಾಗೂ ಸಿಬ್ಬಂದಿಯೊಬ್ಬರು ಸರಗೂರು ಪೋಲಿಸ್ ಠಾಣೆಯಲ್ಲಿ ಜಾತಿನಿಂದನೆ ಮಾಡಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಸರಗೂರು ಪೋಲಿಸ್ ಠಾಣೆಯಲ್ಲಿ 0117 /2025 ಬಿ ಎನ್ ಎಸ್.352,351(2) ಎಸ್ಸಿ ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ

    ಪ್ರಕರಣ ಹಿನ್ನೆಲೆ :

    ಹೆಡಿಯಾಲ ಉಪವಿಭಾಗದ ಐನೂರು ಮಾರಿಗುಡಿ ವಲಯದಲ್ಲಿಅರಣ್ಯ ವೀಕ್ಷಕರಾಗಿ (ಹೊರಗುತ್ತಿಗೆ) ನೌಕರರಾಗಿ ಕೆಲಸ ಮಾಡುತ್ತಿದ್ದು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿ.ವಿ.ಸತೀಶ್ ರವರು ದಿನಾಂಕ 30/08/20255 ಅರಣ್ಯ ಪ್ರದೇಶದಲ್ಲಿ ಕೆಸರಿನಿಂದ ಕೂಡಿದೆ ಟೈಗರ್ ರಸ್ತೆಯಲಿ ಇಲಾಖಾ ವಾಹನಗಳು ಓಡಾಡಲು ಅನೂಕೂಲವಾಗುವಂತೆ ಆ ಜಾಗಕ್ಕೆ ಕಲ್ಲಾಗಿರುವ ಸಿಮೆಂಟ್ ಮೂಟೆಗಳನ್ನು ಹಾಕಲು ತಿಳಿಸಿರುತ್ತಾರೆ. ಅದರಂತೆ ನಾನು ಮತ್ತು ನಮ್ಮ ಇಲಾಖಾ ಸಿಬ್ಬಂದಿಗಳ ಜೊತೆಗೂಡಿ ಕೆಲಸ  ಮಾಡುತ್ತಿರುವ ಸಂದರ್ಭದಲ್ಲಿ ಸಮಯ ಮಧ್ಯಾಹ್ನ 12.30 ಕ್ಕೆ ಎ.ಸಿ.ಎಫ್ ಎ ವಿ ಸತೀಶ್ ರವರು ಅಲ್ಲಿಗೆ ಬಂದರು ಅಲ್ಲಿಯ ಕೆಲಸವನ್ನು ನೋಡಿ ಇನ್ನೂ ಹೆಚ್ಚಿನ ಸಿಬ್ಬಂದಿಯು ಬೇಕಾಗಿರುವುದರಿಂದ ಹೊರಗುತ್ತಿಗೆದಾರರಾದ ಅರಣ್ಯ ಪರಿವೀಕ್ಷಕರಾದ ಗಣೇಶ್ ಬಿನ್ ಹೆತ್ತಯ್ಯ ರವರಿಗೆ ತಿಳಿಸಿದಾಗ ಸಿಬ್ಬಂದಿಗಳನ್ನು ಕರೆತರಲು ವಾಹನವಿಲ್ಲವೆಂದು ತಿಳಿಸಿದಾಗ ಶ್ರೀಕಂಠ, ಗಣೇಶ, ಕಿರುಮಾರ ಲೋಪರ್, ನನ್ನ ಮಕ್ಕಳ ಬೋಳಿ ಮಕ್ಕಳ, ಸೂಳೆ ಮಕ್ಕಳ, ಶ್ಯಾ* ತರಿಯಕ್ಕೆ ಲಾಯಕ್ಕು ನಿಮಗೆ ಸರಿಯಾದ ರೀತಿಯಲ್ಲಿ ಕೆಲಸ ಮಾಡಲು ಬರುವುದಿಲ್ಲ ನೀವು ನನ್ನ ಉಚ್ಚೆ ಕುಡಿಯಕ್ಕೆ ಲಾಯಕ್ಕು. ಬನ್ನಿ ನೀವು ನೀವು ಈ ಕೊಚ್ಚೆ ತೊಳೆಯೋಕೆ ಲಾಯಕ್ಕು ಎಂದು ಅವಾಚ್ಯ ಪದಗಳಿಂದ ಕೀಳು ಜಾತಿಯವರೆದೆಂದು ಮಾನಸಿಕವಾಗಿ ಕಿರುಕುಳ ನಮಗೆ ಹಿಂಸೆಯನ್ನು ನೀಡುತ್ತಿದ್ದಾರೆ. ನಮ್ಮ ಜೊತೆ ಸಿಬ್ಬಂದಿಗಳಾದ ಡ್ರೈವರ್ ಸೇಟು, ಆರ್.ಎಫ್ ರಾಮಾಂಜನೇಯ, ಲಕ್ಷ್ಮಣ ಇರುತ್ತಾರೆ.

    ಮುಂದುವರೆದೂ 13/09/2025 ರಾತ್ರಿ 7.30ಕ್ಕೆ ಕಲ್ಕರೆ ಐಬಿಗೆ ಅವರ ಸ್ನೇಹಿತರನ್ನು ಕರೆದುಕೊಂಡು ಬಂದು ಮದ್ಯಪಾನ ಸಿಗರೇಟ್ ಸರಬರಾಜು ಮಾಡುವಂತೆ ತಿಳಿಸಿದರು. ಆಗ ಸರ್ ನಾನು ಅರಣ್ಯ ಕಾಯಲು ಬಂದಿರುವುದು. ನಾನು ಇವುಗಳನ್ನು ತರಲು ಬರುವುದಿಲ್ಲ ಎಂದು ಹೇಳಿದಾಗ ಸೂಳೆ ಮಗನೇ ಎಂದು ನನ್ನನ್ನು ಮತ್ತೆ ಅವರ ಸ್ನೇಹಿತರ ಮುಂದೆ ಕೆಟ್ಟದಾಗಿ ಬೈದು ಮಾನಸಿಕ ಚಿತ್ರಹಿಂಸೆ ಮತ್ತು ಕಿರುಕುಳ ನೀಡಿರುತ್ತಾರೆ. ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳಾದ ರಾಜೇಶ್ ಎಸ್‌.ಡಿ ಸ್ಥಳದಲ್ಲಿ ಇರುತ್ತಾರೆ. ಆಗ ನಾನು ಹೊರಗಡೆ ಬಂದ ಸಂದರ್ಭದಲ್ಲಿ ನನ್ನ ಹಿಂದೆಯೇ ಬಂದು ಈ ಕೆಲಸವನ್ನು ನೀನು ಮಾಡದೇ ಇದ್ದರೆ ಕೆಲಸದಿಂದ ಕಿತ್ತು ಹಾಕುತ್ತೇನೆ ಹೆಚ್ಚಿಗೆ ಮಾತನಾಡಿದರೆ ಕಾಡಿನಲ್ಲಿಯೇ ನಿನ್ನನ್ನು ಹೊಡೆದು ಯಾರಿಗೂ ಗೊತ್ತಾಗಬಾರದ ರೀತಿ ಹೂತು ಹಾಕಿಸುತ್ತೇನೆ ಎಂದು ಕೊಲೆ ಬೆದರಿಕೆ ಹಾಕಿರುತ್ತಾರೆ. ನಂತರ ಮುಂಜಾನೆ ವೇಳೆಯಲ್ಲಿ ಅವರ ಸ್ನೇಹಿತರಿಗೆ ಬಿಸಿ ನೀರು ಕಾಯಿಸಲು ತಡವಾದಾಗ ಕೆಟ್ಟ ಮಾತುಗಳಿಂದ ಬೈದು ನೀವೆಲ್ಲಾ ನನ್ನ ಮೇಲ್ಜಾತಿಯವರ ಬೂಟು ನೆಕ್ಕುವುದಕ್ಕೆ ಲಾಯಕ್ಕು ಎಂದು ದರ್ಪ ತೋರಿರುತ್ತಾರೆ.

    ಈ ಹಿಂದೆ ಕೂಡ ಹಲವಾರು ಬಾರಿ ಯಾವುದೇ ಸಕಾರಣವಿಲ್ಲದೇ ವಿನಾಕಾರಣ ಅವಾಚ್ಯ ಪದಗಳ ಪ್ರಯೋಗ ಮಾಡಿ ನಮ್ಮನ್ನು ನಿಂದಿಸಿರುತ್ತಾರೆ. ಸದರಿಯವರ ಈ ವರ್ತನೆಯಿಂದ ಮಾನಸಿಕ ಕಿರುಕುಳ ಮತ್ತು ಆತ್ಮಸ್ಥೆರ್ಯ ಕುಗ್ಗಿರುತ್ತದೆ. ನಾವೆಲ್ಲರು ಎಸ್ಸಿ, ಎಸ್ಟಿ, ದಲಿತ ಜನಾಂಗದವರಾಗಿದ್ದು ವೈಯಕ್ತಿಕವಾಗಿ ಹಾಗೂ ದಲಿತ ಸಮುದಾಯಕ್ಕೆ ಮಾಡಿದ ಅಪಮಾನವಾಗಿದ್ದು, ಬಹಳ ಮಾನಸಿಕ ಹಿಂಸೆಯಾಗಿ ನೊಂದಿರುವ ಕಾರಣ ಸಹಾಯಕ ಅರಣ್ಯ ಸುರಕ್ಷಣಾಧಿಕಾರಿಯಾದ ಎ.ವಿ ಸತೀಶ್ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಾಗೂ ವಲಯದಿಂದ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

    ಎಸಿಎಫ್ ಸತೀಶ್ ರವರು ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿಲ್ಲ ಎಂದ ಮೇಲೆ ಎಸ್ಸಿ ಎಸ್ಟಿ ಸಮುದಾಯದ ಹಾಗೂ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಗುಂಡ್ಲುಪೇಟೆ ತಾಲ್ಲೂಕಿನ ರಾಘವಪುರ ಗ್ರಾಮದ ಶ್ರೀಕಂತ. ಸರಗೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿಸಿಕೊಂಡು ಮುಂದಿನ ಕ್ರಮಕ್ಕೆ ಡಿವೈಎಸ್ಪಿ ಹಾಗೂ ಎಸ್ಪಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.