ಬೆಂಗಳೂರು: ಜಾತಿ ಜನಗಣತಿ ವರದಿ ಸಿದ್ದರಾಮಯ್ಯಗೆ ಮರಣ ಶಾಸನ ಆಗಬಹುದು, ಅವರ ಪಕ್ಷದವರೇ ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಜಾತಿ ಜನಗಣತಿ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಈ ವರದಿ ಸಿದ್ದರಾಮಯ್ಯಗೇ ಮರಣ ಶಾಸನ ಆಗಬಹುದು. ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡ್ತಿದ್ದಾರೆ. ಈ ವರದಿ ಜಾರಿಯಾದರೆ ಸಿದ್ದರಾಮಯ್ಯ ರಾಜ್ಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಖಳನಾಯಕ ಆಗ್ತಾರೆ ಎಂದರು.
ಸಿದ್ದರಾಮಯ್ಯ ಅವರಿಗೆ ಪೂರ್ಣ ಸತ್ಯ ಗೊತ್ತಿದೆ. ಆದ್ರೆ ಅವರು ಅವರ ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಮೊನ್ನೆ ಮೊನ್ನೆ ಅವರ ಹೈಕಮಾಂಡ್ ನಾಯಕರು ಅವರನ್ನು ಕರೆದು ಹೇಳಿದ್ದಾರೆ, ಸಿದ್ದರಾಮಯ್ಯ ಅವರ ಇವತ್ತಿನ ಪರಿಸ್ಥಿತಿ ನೋಡಿದ್ರೆ, ಈ ಮಟ್ಟಕ್ಕೂ ಅವರು ಬಂದಿದ್ದಾರಾ ಅನ್ನೋ ನೋವು ಕಾಡುತ್ತೆ ನನಗೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW