ಬೆಂಗಳೂರು: ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡನೆಯಾಗಲಿದ್ದು, ನಂತರ ವಿಷಯಗಳನ್ನು ಸಾರ್ವಜನಿಕಗೊಳಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ವರದಿಯನ್ನು ಆಧರಿಸಿದ ಯಾವುದೇ ನಿರ್ಧಾರವು ಸರ್ಕಾರದ ವಿಶೇಷಾಧಿಕಾರವಾಗಿದ್ದು, ವಿಶ್ಲೇಷಿಸಿದ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ಅವರ ನೇತೃತ್ವದಲ್ಲಿ ಕಳೆದ ವರ್ಷ ಫೆಬ್ರವರಿ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಿತ್ತು, ಸಮಾಜದ ಕೆಲವು ವರ್ಗಗಳು ಮತ್ತು ಆಡಳಿತಾರೂಢ ಕಾಂಗ್ರೆಸ್ ನ ಕೆಲವರು ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದರು.
ವರದಿಯ ಮುಚ್ಚಿದ ಲಕೋಟೆಯನ್ನು ಸಂಪುಟದ ಮುಂದೆ ತೆರೆಯಲು ನಿರ್ಧರಿಸಲಾಗಿದೆ, ಇಲ್ಲದಿದ್ದರೆ ಅದು ಮಾಹಿತಿ ಸೋರಿಕೆಗೆ ಕಾರಣವಾಗಬಹುದು ಎಂದಿದ್ದಾರೆ. ಸಭೆಯಲ್ಲಿ ಇದರ ಬಗ್ಗೆ ಚರ್ಚೆ ನಡೆಯುತ್ತದೆಯೋ ಇಲ್ಲವೋ, ನಾನು ಈಗ ಅದರ ಬಗ್ಗೆ ಮಾತನಾಡಲು ಸಾಧ್ಯವಿಲ್ಲ, ಒಮ್ಮೆ ಮುಚ್ಚಿದ ಲಕೋಟೆ ತೆರೆದ ನಂತರ ಕನಿಷ್ಠ ಮಾಹಿತಿ ನಮಗೆ ತಿಳಿಯುತ್ತದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx