ಕೊರಟಗೆರೆ: ಕರ್ನಾಟಕ ರಾಜ್ಯ ಸರಕಾರದಿಂದ ಸೆ.22ರಿಂದ 15 ದಿನಗಳ ಕಾಲ ನಡೆಯುವ ಹಿಂದುಳಿದ ವರ್ಗಗಳ ಆಯೋಗದ ಶೈಕ್ಷಣಿಕ, ಸಾಮಾಜಿಕ, ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಕಾಡುಗೊಲ್ಲ ಜನಾಂಗ ಎಂದೇ ನಮೂದಿಸುವಂತೆ ಕಾಡುಗೊಲ್ಲ ಯುವ ಸೈನ್ಯ ತಾಲೂಕು ಅಧ್ಯಕ್ಷರು ಮುತ್ತುರಾಜ್ ಹೊಸಕೋಟೆ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಾತಿ ಗಣತಿ ಸಂಬಂಧ ಮುಂಬರುವ ಸಮೀಕ್ಷೆಯಲ್ಲಿ ಜಾತಿ ಕಾಲಂನಲ್ಲಿ ಕಾಡುಗೊಲ್ಲ ಎಂದೇ ನಮೂದಿಸಬೇಕು. ಉಪ ಜಾತಿ ಕಾಲಂನಲ್ಲಿ ಉಪ ಪಂಗಡ ಬಗ್ಗೆ ಮಾಹಿತಿ ಇದೇ ನಮೂದಿಸಬೇಕು, ಇಲ್ಲದಿದ್ದರೆ ಕಾಡುಗೊಲ್ಲ ಎಂದು ನಮೂದಿಸಬೇಕು, ಯಾದವ ಎಂಬುದು ಇತ್ತೀಚಿಗೆ ಬಳಕೆಯಾಗುತ್ತಿದೆ ಅದು ನಮೂದಿಸುವುದು ಬೇಡ, ಕಾಡುಗೊಲ್ಲರಲ್ಲಿ ನಾನಾ ಪಂಗಡಗಳು ಬರುತ್ತದೆ ಎಲ್ಲರೂ ಕಾಡುಗೊಲ್ಲ ಎಂದು ನಮೂದಿಸಬೇಕು,ಜಾತಿ ಸಮೀಕ್ಷೆ ಜನಾಂಗದ ಸರ್ವತೋಮುಖ ಅಭಿವೃದ್ಧಿಗಾಗಿ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿಯನ್ನು ಪಡೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡಬೇಕು. ಪ್ರತಿ ಗ್ರಾಮಕ್ಕೂ ಈ ಮಾಹಿತಿಯನ್ನು ನೀಡುವ ಜವಾಬ್ದಾರಿಯನ್ನು ನಮ್ಮ ಸಮುದಾಯದ ಮುಖಂಡರುಗಳು ಸ್ವಯಂ ಪ್ರೇರಿತವಾಗಿ ಮಾಡಬೇಕು ಹಾಗೂ ಈ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC