ತುರುವೇಕೆರೆ Archives - nammatumakuru

ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
ತುರುವೇಕೆರೆ: ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ದಲಿತ ಸಂಘರ್ಷ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಅವರ ಜಯಂತಿಗಳನ್ನು ಆಚರಿಸುವ ನೈತಿಕ ಅರ್ಹತೆ ಇಲ್ಲ ಎಂದು ಸಮಿತಿಯ ಮುಖಂಡರು ಕಿಡಿಕಾರಿದ್ದಾರೆ.

ಪಟ್ಟಣದ ದಲಿತ ಸಂಘರ್ಷ ಸಮಿತಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಬಾಬು ಜಗಜೀವನ್ ರಾಂ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್, ಸರ್ಕಾರದ ಧೋರಣೆಯನ್ನು ಖಂಡಿಸಿದರು.

ಹಾವನೂರು, ಕಾಂತರಾಜು, ನಾಗಮೋಹನ್ ದಾಸ್ ಹಾಗೂ ಎ.ಜೆ.ಸದಾಶಿವ ಆಯೋಗದ ವರದಿಗಳ ಪ್ರಕಾರ ರಾಜ್ಯದಲ್ಲಿ ಮಾದಿಗ ಸಮುದಾಯದವರು ಬಹುಸಂಖ್ಯಾತರಾಗಿದ್ದಾರೆ. ಸರ್ಕಾರ ಒಳ ಮೀಸಲಾತಿ ಜಾರಿಗೆ ತರುವುದಾಗಿ ಭರವಸೆ ನೀಡಿದ್ದರೂ, ಕೆಲವು ಸಚಿವರ ಹಿತಾಸಕ್ತಿ ಮತ್ತು ವಿರೋಧದಿಂದಾಗಿ ಪ್ರಕ್ರಿಯೆ ತಡೆಹಿಡಿಯಲಾಗಿದೆ ಎಂದು ಅವರು ದೂರಿದರು.

ಒಳ ಮೀಸಲಾತಿ ಜಾರಿಯಾಗದ ಕಾರಣ ಸುಮಾರು 56,419 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕುಂಠಿತಗೊಂಡಿದ್ದು, ಅರ್ಹ ಸಮುದಾಯದ ಜನರಿಗೆ ಭಾರಿ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿದ ಮುಖಂಡರು, ಕೂಡಲೇ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಪುರಸಭೆಯ ಮಾಜಿ ಸದಸ್ಯ ಚಿದಾನಂದ್, ಡಿಎಸ್‌ಎಸ್ ತಾಲ್ಲೂಕು ಸಂಚಾಲಕ ಮಲ್ಲೂರು ತಿಮ್ಮೇಶ್, ಮತ್ತು ಸಮಿತಿಯ ಪ್ರಮುಖರಾದ ಗುರುದತ್, ಕೃಷ್ಣಣ್ಣ, ಗೋವಿಂದರಾಜು, ಬಸವರಾಜು, ಕೆಂಪಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ appeared first on nammatumakuru.

ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ
ತುರುವೇಕೆರೆ: ಮಾ. 24 ರಂದು ಮಂಗಳವಾರ ಜಿಲ್ಲಾಧಿಕಾರಿಗಳು ತಾಲೂಕಿಗೆ ಆಗಮಿಸಲಿದ್ದಾರೆ ಎಂದು ತಹಶೀಲ್ದಾರ್ ಎಸ್.ಎ.ಕುಂಞಿ ಅಹಮದ್  ತಿಳಿಸಿದ್ದಾರೆ.

ಮಾ. 24 ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಾಲೂಕಿನ ದಬ್ಬೇಘಟ್ಟ ಹೋಬಳಿಯ ಮಾವಿನಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಗಮಿಸಿ, ಸಾರ್ವಜನಿಕರ ಕುಂದು ಕೊರತೆ ಆಲಿಸಲಿದ್ದಾರೆ ಅಂತಾ ಅವರು ತಿಳಿಸಿದರು.

ಅದೇ ದಿನ ಮಧ್ಯಾಹ್ನ 2.30 ರಿಂದ 5.30 ರವರೆಗೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಜನ ಸಂಪರ್ಕ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪಾಲ್ಗೊಳ್ಳಲಿದ್ದಾರೆ ಎಂದರು.

ಸದರಿ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ಯಾವುದೇ ಸಮಸ್ಯೆ ಅಥವಾ ಕುಂದು ಕೊರತೆಗಳಿದ್ದಲ್ಲಿ ಆಗಮಿಸಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲು ತಿಳಿಸಲಾಗಿದೆ. ಈ ಸದಾವಕಾಶವನ್ನು ತಾಲೂಕಿನ ಜನತೆ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ವಿನಂತಿಸಿದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ appeared first on nammatumakuru.

ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
ತುರುವೇಕೆರೆ: ಒಳಮೀಸಲಾತಿಯನ್ನು ಜಾರಿಗೆ ತರದೆ ರಾಜ್ಯ ಸರ್ಕಾರವು ಏಕಾಏಕಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಖಂಡಿಸಿ, ಮಾದಿಗ ಸಮುದಾಯದ ಮುಖಂಡರು ತುರುವೇಕೆರೆ ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.

ಒಳಮೀಸಲಾತಿ ಅನ್ವಯ ಮಾಡದೆಯೇ ಸುಮಾರು 15 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಮಾದಿಗ ಸಮುದಾಯಕ್ಕೆ ಭಾರೀ ಅನ್ಯಾಯವಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಮುದಾಯದ ಹಿತರಕ್ಷಣೆ ಮಾಡಲು ವಿಫಲರಾಗಿರುವ ಮಾದಿಗ ಸಮುದಾಯದ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬೀದಿಗೆ ಬಂದು ಹೋರಾಟ ಮಾಡಬೇಕು ಎಂದು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್‌ ಒತ್ತಾಯಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾದಿಗ ಸಮುದಾಯವು ಕಾಂಗ್ರೆಸ್‌ಗೆ ಪೂರ್ಣ ಬೆಂಬಲ ನೀಡಿತ್ತು. ಆದರೆ ಈಗ ಸರ್ಕಾರವು ಸಮುದಾಯವನ್ನು ಕಡೆಗಣಿಸುತ್ತಿದೆ. ಸಚಿವರಾದ ಜಿ. ಪರಮೇಶ್ವರ ಹಾಗೂ ಎಚ್.ಸಿ. ಮಹದೇವಪ್ಪ ಅವರು ಮುಖ್ಯಮಂತ್ರಿಗಳ ಕೈಗೊಂಬೆಯಾಗಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಒಳಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಹೊಸ ನೇಮಕಾತಿ ಪ್ರಕ್ರಿಯೆ ನಡೆಸಬಾರದು ಎಂದು ಆಗ್ರಹಿಸಿ ಗ್ರೇಡ್‌–2 ತಹಶೀಲ್ದಾರ್‌ ಸುಮತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಬೆಂಗಳೂರಿನಲ್ಲಿ ನಡೆಯಲಿರುವ ಮುಂದಿನ ಬೃಹತ್ ಪ್ರತಿಭಟನೆಗೆ ತಾಲ್ಲೂಕಿನ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಲಾಯಿತು.

ಪ್ರತಿಭಟನೆಯಲ್ಲಿ ಮಲ್ಲೂರು ತಿಮ್ಮೇಶ್, ತೊರೆಮಾವಿನಹಳ್ಳಿ ಚಂದ್ರಯ್ಯ, ಲಕ್ಷ್ಮೀದೇವಮ್ಮ ಸೇರಿದಂತೆ ಸಮುದಾಯದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ appeared first on nammatumakuru.

ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ಹಂಪಲಾಪುರ ಸಮೀಪದ ಜಮೀನಿನಲ್ಲಿ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಉಳುಮೆ ಮಾಡಲು ಬಿಡದೆ, ತಾಲ್ಲೂಕು ಆಡಳಿತ ಹಾಗೂ ಪೊಲೀಸರು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ದಲಿತ ರೈತರು ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದು, ಮಂಜೂರಾತಿ ಪತ್ರವನ್ನೂ ಹೊಂದಿದ್ದಾರೆ. ಆದರೆ, ಈ ಜಮೀನು ಅರಣ್ಯ ಇಲಾಖೆಗೆ ಸೇರಿದ್ದೆಂದು ಹೇಳಿ ತಾಲ್ಲೂಕು ಆಡಳಿತ ರೈತರನ್ನು ಅಲ್ಲಿಂದ ತೆರವುಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡಲು ಬಂದಿದ್ದ ಟ್ರ್ಯಾಕ್ಟರ್‌ಗಳನ್ನು ದಂಡಿನಶಿವರ ಪೊಲೀಸರು ವಾಪಸ್ ಕಳುಹಿಸುವ ಮೂಲಕ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಮೇಲ್ವರ್ಗದವರು ಉಳುಮೆ ಮಾಡುವಾಗ ಯಾವುದೇ ಅಡ್ಡಿಪಡಿಸದ ಆಡಳಿತ, ದಲಿತರ ವಿಷಯದಲ್ಲಿ ಮಾತ್ರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಲಾಗಿದೆ.

ಸರ್ಕಾರ ದಲಿತರಿಗೆ ಮಂಜೂರಾದ ಜಮೀನಿನ ರಕ್ಷಣೆಗೆ ಆದೇಶ ನೀಡಿದ್ದರೂ ಸ್ಥಳೀಯ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ. ನ್ಯಾಯ ಸಿಗುವವರೆಗೂ ಜಮೀನಿನಲ್ಲಿಯೇ ಅಹೋರಾತ್ರಿ ಪ್ರತಿಭಟನೆ ಮುಂದುವರಿಸುವುದಾಗಿ ರೈತರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಡಿಎಸ್‌ಎಸ್ ಮುಖಂಡ ಕುಣಿಕೇನಹಳ್ಳಿ ಜಗದೀಶ್, ಜಿಲ್ಲಾ ಸಂಚಾಲಕ ರಾಮಾಂಜನಯ್ಯ ಹಾಗೂ ಹಂಪಲಾಪುರ ಭಾಗದ ನೂರಾರು ದಲಿತ ರೈತರು ಉಪಸ್ಥಿತರಿದ್ದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ appeared first on nammatumakuru.

ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
ತುರುವೇಕೆರೆ: ತಾಲೂಕಿನ ಎಪಿಎಂಸಿ ಆವರಣದಲ್ಲಿ ಆರಂಭವಾಗಿರುವ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಲು ರೈತರು ಮುಗಿಬಿದ್ದಿದ್ದು, ರಸ್ತೆ ಬದಿಯಲ್ಲಿ ನೂರಾರು ಟ್ರ್ಯಾಕ್ಟರ್‌ ಗಳು ಸಾಲುಗಟ್ಟಿ ನಿಂತಿವೆ.

ಭಾನುವಾರ ಖರೀದಿ ಕೇಂದ್ರಕ್ಕೆ ರಜೆ ಇದ್ದ ಕಾರಣ, ಸೋಮವಾರ ಮುಂಜಾನೆಯೇ ರೈತರು ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳೊಂದಿಗೆ ಆಗಮಿಸಿ ದಬ್ಬೇಘಟ್ಟ ರಸ್ತೆಯ ಬದಿಯಲ್ಲಿ ದೀರ್ಘ ಸರತಿ ಸಾಲಿನಲ್ಲಿ ನಿಂತಿದ್ದರು.

ಪ್ರಸ್ತುತ ಈ ಕೇಂದ್ರದಲ್ಲಿ ಪ್ರತಿದಿನ 60 ಟ್ರ್ಯಾಕ್ಟರ್‌ಗಳಂತೆ ಸುಮಾರು 2,500 ಕ್ವಿಂಟಲ್ ರಾಗಿಯನ್ನು ಖರೀದಿಸಲಾಗುತ್ತಿದೆ.

ಅಧಿಕಾರಿಗಳ ಅಸಮಾಧಾನ: ನೋಂದಾಯಿತ ರೈತರಿಗೆ ನಿರ್ದಿಷ್ಟ ದಿನಾಂಕಗಳನ್ನು ನೀಡಲಾಗಿದ್ದರೂ, ದಿನಾಂಕ ಸಿಗದ ರೈತರೂ ಸಹ ಟ್ರ್ಯಾಕ್ಟರ್‌ಗಳೊಂದಿಗೆ ಆಗಮಿಸಿ ರಸ್ತೆ ಬದಿ ನಿಲ್ಲಿಸುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಖರೀದಿ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಕ್ರಮಬದ್ಧವಾಗಿ ಬಂದ ರೈತರಿಗೆ ತೊಂದರೆಯಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚುವರಿ ಕೌಂಟರ್ ಭರವಸೆ: ಸದ್ಯ 3 ಕೌಂಟರ್‌ಗಳ ಮೂಲಕ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. ರೈತರ ಒತ್ತಡವನ್ನು ಕಡಿಮೆ ಮಾಡಲು ಇನ್ನು ಎರಡು ದಿನಗಳಲ್ಲಿ ಮತ್ತೆರಡು ಕೌಂಟರ್‌ ಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಸುಮಾರು 600 ರೈತರಿಂದ 18 ಸಾವಿರ ಕ್ವಿಂಟಲ್ ರಾಗಿ ಖರೀದಿಸಲಾಗಿದೆ.

ರೈತರ ಅಳಲು: ಖರೀದಿ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ರಾತ್ರಿಯಿಡೀ ರಸ್ತೆಯಲ್ಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಟ್ರ್ಯಾಕ್ಟರ್ ಬಾಡಿಗೆ ಹೆಚ್ಚಾಗುತ್ತಿರುವುದು ರೈತರಿಗೆ ಆರ್ಥಿಕ ಹೊರೆಯಾಗುತ್ತಿದೆ. ಆದ್ದರಿಂದ ಕೂಡಲೇ ಸಿಬ್ಬಂದಿ ಸಂಖ್ಯೆ ಹೆಚ್ಚಿಸಿ ವೇಗವಾಗಿ ಖರೀದಿ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಒಟ್ಟಾರೆಯಾಗಿ, ರಾಗಿ ಖರೀದಿ ಪ್ರಕ್ರಿಯೆ ಚುರುಕುಗೊಳಿಸುವಂತೆ ಮತ್ತು ವ್ಯವಸ್ಥಿತವಾಗಿ ನಿರ್ವಹಿಸುವಂತೆ ರೈತ ಸಮುದಾಯ ಒತ್ತಾಯಿಸಿದೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ! appeared first on nammatumakuru.

ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
ತುರುವೇಕೆರೆ: ಮುಂಬರುವ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ನಾನೇ ಅಭ್ಯರ್ಥಿ ಇದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು  ತುರುವೇಕೆರೆ ಮಾಜಿ ಶಾಸಕ ಮಸಾಲ ಜಯರಾಮ್ ಹೇಳಿದ್ದಾರೆ.

ತುರುವೇಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಮುಂಬರುವ ವಿಧಾನ ಸಭಾ ಕ್ಷೇತ್ರ ಚುನಾವಣೆ ಟಿಕೆಟ್ ಗಾಗಿ ಈಗಲೇ ಸ್ಪರ್ಧೆ ಆರಂಭಗೊಂಡಿದೆ. ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಜೆಡಿಎಸ್  ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೊಡ್ಡಘಟ್ಟ ಚಂದ್ರೇಶ್ ನಡುವೆ ಬಿಜೆಪಿ –ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸ್ಪರ್ಧೆ ಸೃಷ್ಟಿಯಾದ ಬೆನ್ನಲ್ಲೇ ತುರುವೇಕೆರೆ ಮಾಜಿ ಶಾಸಕ ಮಸಾಲ ಜಯರಾಮ್ ಕೂಡ ಅಖಾಡಕ್ಕಿಳಿದಿದ್ದು,  ತುರುವೇಕೆರೆ ತಾಲೂಕಿನ ಮಾಯಸಂದ್ರ ರಸ್ತೆಯಲ್ಲಿರುವ ಚಿಕ್ಕೋನಹಳ್ಳಿ ಗೇಟ್ ಬಳಿಯಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಎಲ್ಲರಿಗೂ ತಿಳಿದಿರುವ ವಿಚಾರ, ಆದರೆ ಕೆಲವರು ತಾಲೂಕಿನಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಸ್ವಯಂ ಘೋಷಿತ ಹೇಳಿಕೆಯನ್ನು ನೀಡುತ್ತಿದ್ದಾರೆ, ನಾನು ಕೂಡ ಈಗಾಗಲೇ ಈ ಹಿಂದೆ ನಡೆದ ಚುನಾವಣೆಯಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ಮತ  ಪಡೆದಿದ್ದೇನೆ, ತಾಲೂಕಿನಲ್ಲಿ ನಾನು ಸಹ ರಾಜಕಾರಣ ಮಾಡಲು ಇರುವುದು,  ಭಾರತೀಯ ಜನತಾ ಪಾರ್ಟಿಯಲ್ಲಿ ಪಕ್ಷ ಸಂಘಟನೆ ಮಾಡಿಕೊಂಡು ಬಂದಿದ್ದೇನೆ ಜೊತೆಗೆ ಒಂದು ಬಾರಿ ಶಾಸಕನಾಗಿಯೂ ಸಹ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಈ ಬಾರಿ ಕೆಲವು ಅಡಚಣೆಯಿಂದಾಗಿ ಕಡಿಮೆ ಅಂತರದಲ್ಲಿ ಸೋತಿರಬಹುದು ಆದರೆ ನಾನು ನನ್ನ ಪಕ್ಷದಲ್ಲಿ ನಿಷ್ಠೆಯಿಂದ ಈಗಲೂ ಸಹ ಪಕ್ಷ ಸಂಘಟನೆ ಮಾಡುತ್ತಿದ್ದು ಮೊದಲಿಗಿಂತಲೂ ನನ್ನ ಕಾರ್ಯಕರ್ತರು ಈ ಬಾರಿ ಹೆಚ್ಚಾಗಿದ್ದು ಕಾರ್ಯಕರ್ತರು ಸಹ ಪಕ್ಷ ಸಂಘಟನೆಯಲ್ಲಿ ನಿಷ್ಠೆಯಿಂದ ತೊಡಗಿದ್ದಾರೆ ಜೊತೆಗೆ ಈಗಾಗಲೇ ಕೇಂದ್ರದ ಹಿರಿಯ ನಾಯಕರು ಹೆಚ್ಚಿನ ಪಕ್ಷ ಸಂಘಟನೆಯನ್ನು ಮಾಡಲು ಸೂಚಿಸಿದ್ದು ಮುಂದೆಯೂ ಸಹ ಸಂಘಟನೆಯಲ್ಲಿ ತೊಡಗಲಿದ್ದೇನೆ  ಎಂದರು.

ಯಾವುದೇ ಕಾರಣಕ್ಕೂ ಹಿಂಜರಿಯುವ ಮಾತೇ ಇಲ್ಲ ಮುಂಬರುವ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ನಾನೇ ಅಭ್ಯರ್ಥಿ, ಇದನ್ನು ಯಾರು ತಡೆಯಲು ಸಾಧ್ಯವಿಲ್ಲ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ನಾನು ಕೂಡ ಬಿಜೆಪಿಯಿಂದ ಅಭ್ಯರ್ಥಿಯಾಗುವುದು ಅಷ್ಟೇ ಸತ್ಯ. ಈಗಾಗಲೇ ನನ್ನ ಪಕ್ಷದ ಹಿರಿಯ ನಾಯಕರು ಸಹ ನನಗೆ ಟಿಕೆಟ್ ಭರವಸೆ ನೀಡಿದ್ದು ಎನ್ ಡಿ ಎ ಮೈತ್ರಿಯಿಂದ ಮುಂದಿನ ಅಭ್ಯರ್ಥಿ ನಾನೇ ಎಂದು ಸ್ಪಷ್ಟನೆ ನೀಡಿದರು.

ತಾಲೂಕಿನಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಮತ್ತು ಕಾರ್ಯಕರ್ತರು ಸಹ ಮುಂದಿನ ಅಭ್ಯರ್ಥಿ ನೀವೇ ಹಾಗೆ ನಿಮ್ಮ ಪರವಾಗಿ ನಾವುಗಳು ಸದಾ ಜೊತೆ ಇರುತ್ತೇವೆ ಎಂದು ಹೆಚ್ಚಿನ ಭರವಸೆ ನೀಡಿದ್ದು, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ, ತಾಲೂಕಿನಲ್ಲಿ ಜೆಡಿಎಸ್ ಪಕ್ಷದ ಹಾಲಿ ಶಾಸಕರಾದ ಎಂ.ಟಿ.ಕೃಷ್ಣಪ್ಪ  ಮುಂದಿನ ಅಭ್ಯರ್ಥಿ ನಾನೇ ಎಂದು ಹೇಳಿಕೆ ನೀಡಿರುವುದು ಕೆಲವು ಮಾಧ್ಯಮದ ಮೂಲಕ ತಿಳಿದಿದ್ದೇನೆ, ಬಹುಶಃ ಜೆಡಿಎಸ್ ಬಿಜೆಪಿ ಮೈತ್ರಿ ಇರುವುದರಿಂದ ಮುಂಬರುವ ಚುನಾವಣೆಯಲ್ಲಿ ಹಾಲಿ ಶಾಸಕರು ನನ್ನನ್ನೇ ಅಭ್ಯರ್ಥಿಯನ್ನಾಗಿಸಿ ಗೆಲ್ಲಿಸಬಹುದೇನೋ, ಕಾರ್ಯಕರ್ತರು ಯಾವುದೇ ಕಾರಣಕ್ಕೂ ಗೊಂದಲಕ್ಕೆ ಒಳಗಾಗದೆ ನೀವುಗಳು ನಿಷ್ಠೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಿ ಟಿಕೆಟ್ ತರುವುದು ನನಗೆ ಬಿಡಿ ಎಂದರು.

ಇದೇ ಸಂದರ್ಭದಲ್ಲಿ ತಾಲೂಕಿನ ಬಿಜೆಪಿ ಅಧ್ಯಕ್ಷ ಪ್ರಕಾಶ್ ಯಾದವ್, ಪ್ರಧಾನ ಕಾರ್ಯದರ್ಶಿ ಮಹೇಶ್, ಜಿಪಂ ಮಾಜಿ ಸದಸ್ಯ ಉಗ್ರಯ್ಯ, ಮುಖಂಡರಾದ ಕಡೆಹಳ್ಳಿ ಸಿದ್ದಯ್ಯ, ಅಂಜನ್ ಕುಮಾರ್, ಸೋಮೇನಹಳ್ಳಿ ಜಗದೀಶ್, ಚಿದಾನಂದ್, ಭುಗುಡನಹಳ್ಳಿ ಕೃಷ್ಣಮೂರ್ತಿ, ಮಂಜಣ್ಣ, ಇನ್ನು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ! appeared first on nammatumakuru.

ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
ತುರುವೇಕೆರೆ: ಕಂದಾಯ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ತುರುವೇಕೆರೆ ತಾಲೂಕಿನ ತಹಶೀಲ್ದಾರ್ ಕುಂಞಿ ಅಹಮದ್ ಹಾಗೂ ಭೂ ದಾಖಲೆಗಳ ಸಹಾಯಕ ನಿರ್ದೇಶಕ (ADLR) ಸಿ. ಜಗದೀಶ್ ಅವರು ರಾಜ್ಯ ಸರ್ಕಾರದ ಅಭಿನಂದನಾ ಪತ್ರಕ್ಕೆ ಭಾಜನರಾಗಿದ್ದಾರೆ.

ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಣೆ, ದರಖಾಸ್ತು ಪೋಡಿ (1.5) ತಂತ್ರಾಂಶದ ಬಳಕೆ ಹಾಗೂ ಇ-ಪೌತಿ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವವನ್ನು ನೀಡಿದೆ. ರಾಜ್ಯಾದ್ಯಂತ ಆಯ್ದ ಅಧಿಕಾರಿಗಳ ಪಟ್ಟಿಯಲ್ಲಿ ತುರುವೇಕೆರೆ ತಾಲೂಕಿನ ಈ ಇಬ್ಬರು ಅಧಿಕಾರಿಗಳ ಹೆಸರು ಪ್ರಕಟವಾಗಿರುವುದು ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ.

ಅಧಿಕಾರಿಗಳ ಈ ಸಾಧನೆಗೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರುದ್ರೇಶ್ ಎಚ್.ಡಿ. ಹಾಗೂ ತುರುವೇಕೆರೆ ತಾಲೂಕು ಅಧ್ಯಕ್ಷ ದೊರೆಸ್ವಾಮಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಅಭಿನಂದನಾ ಪತ್ರಕ್ಕೆ ಆಯ್ಕೆಯಾದ ತಹಶೀಲ್ದಾರ್ ಕುಂಞಿ ಅಹಮದ್ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕ ಸಿ. ಜಗದೀಶ್ ಅವರಿಗೆ ವೇದಿಕೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸಾರ್ವಜನಿಕ ಕೆಲಸಗಳನ್ನು ತ್ವರಿತವಾಗಿ ಮತ್ತು ಪಾರದರ್ಶಕವಾಗಿ ಮಾಡುವ ಇಂತಹ ಅಧಿಕಾರಿಗಳ ಸೇವೆ ಇತರರಿಗೆ ಮಾದರಿಯಾಗಲಿ ಎಂದು ಅವರು ಆಶಿಸಿದ್ದಾರೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ appeared first on nammatumakuru.

ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
ತುರುವೇಕೆರೆ: ಮುಂಬರುವ 2028ರ ವಿಧಾನಸಭೆ ಚುನಾವಣೆಗೆ ನಾನೂ ಸಹ ತುರುವೇಕೆರೆ ಕ್ಷೇತ್ರದಿಂದ ಸ್ಪರ್ಧಾಕಾಂಕ್ಷಿಯಾಗಿದ್ದೇನೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೊಡ್ಡಘಟ್ಟ ಚಂದ್ರೇಶ್ ಹೇಳಿಕೆ ನೀಡಿದ್ದು, ಈ ಮೂಲಕ ತುರುವೇಕೆರೆ ಕ್ಷೇತ್ರದಲ್ಲಿ ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ಪ್ರತಿಸ್ಪರ್ಧೆ ಸ್ವಪಕ್ಷದಲ್ಲೇ ಸೃಷ್ಟಿಯಾಗಿದೆ.

ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಕೇಂದ್ರ ರೈಲ್ವೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಕೃಪಾಶೀರ್ವಾದ ಹಾಗೂ ಅವರ ಮಾರ್ಗದರ್ಶನದೊಂದಿಗೆ ಈ ಕ್ಷೇತ್ರದಲ್ಲಿ ಜನಪರ ಸೇವಾಕಾರ್ಯಗಳನ್ನು ಮಾಡುವ ಮೂಲಕ ತಾಲ್ಲೂಕಿನ ಜನಮನ್ನಣೆಯನ್ನು ಗಳಿಸಿದ್ದೇನೆ. ಸುಮಾರು ದಶಕಗಳಿಂದ ತಾಲ್ಲೂಕಿನಲ್ಲಿ ಜನಸೇವೆ ಮಾಡುತ್ತಾ ಜೆಡಿಎಸ್ ಪಕ್ಷವನ್ನು ಸಂಘಟಿಸುತ್ತಾ ಬಂದಿದ್ದೇನೆ. ಇದೀಗ ತಾಲ್ಲೂಕಿನ ಜನರ ಅಪೇಕ್ಷೆಯಂತೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾನೂ ಸಹಾ ಆಕಾಂಕ್ಷಿಯಾಗಿದ್ದೇನೆ ಎಂದು ಅವರು ಘೋಷಿಸಿದ್ದಾರೆ.

ಎಂ.ಟಿ.ಕೃಷ್ಣಪ್ಪ ಹೇಳಿಕೆಗೆ ಬೇಸರ:

ನಮ್ಮ ಹಿರಿಯ ನಾಯಕರಾದ ಎಂ.ಟಿ.ಕೃಷ್ಣಪ್ಪನವರು ನಾಲ್ಕು ಬಾರಿ ಶಾಸಕರಾಗಿದ್ದು ನನ್ನ ಹೆಸರನ್ನು ಜೆಡಿಎಸ್ ಕಾರ್ಯಕರ್ತರ ಸಭೆಗಳಲ್ಲಿ ಪ್ರಸ್ತಾಪಿಸಿ ನಾನು ಜೆಡಿಎಸ್ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿರುವುದಾಗಿ ಹೇಳಿಕೊಳ್ಳುತ್ತಿರುವುದು ನನ್ನ ಮನಸ್ಸಿಗೆ ಬೇಸರವಾಗುತ್ತಿದೆ. ನಾನು ನಿಷ್ಠಾವಂತನಾಗಿ ಜೆಡಿಎಸ್ ಪಕ್ಷದಲ್ಲಿ ಕೆಲಸ ಮಾಡುತ್ತಾ ನನ್ನ ಕೈಲಾದ ಸೇವೆಯನ್ನು ತಾಲ್ಲೂಕಿನ ಜನತೆಗೆ ನೀಡುತ್ತಿದ್ದೇನೆ. ಹೆಚ್.ಡಿ.ಕುಮಾರಣ್ಣನವರು ರಾಜ್ಯದ ಮುಖ್ಯಮಂತ್ರಿ ಆಗುವರೆಂಬ ಆಶಾಭಾವನೆಯಿಂದ ಕಳೆದ ಮೂರು ಚುನಾವಣೆಗಳಲ್ಲಿಯೂ ಎಂ.ಟಿ.ಕೃಷ್ಣಪ್ಪನವರ ಪರವಾಗಿ ಶಕ್ತಿಮೀರಿ ಪಕ್ಷ ಸಂಘಟನೆಯೊಂದಿಗೆ ಕೆಲಸ ಮಾಡಿದ್ದೇನೆ. ಆದರೂ ಶಾಸಕರು ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ. ಅವರು ಹಲವು ಸಂದರ್ಭಗಳಲ್ಲಿ ನನ್ನ ಬಗ್ಗೆ ಕೆಲವು ಮಾತುಗಳನ್ನಾಡಿರುವುದು ನನಗೆ ನೋವುಂಟು ಮಾಡಿದೆ ಎಂದರು.

“ಅಭ್ಯರ್ಥಿ ಆಯ್ಕೆ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ಸಮೀಕ್ಷೆ ಆಧಾರದ ಮೇಲೆ ಟಿಕೆಟ್ ನಿರ್ಧಾರವಾಗುತ್ತದೆ. ವರಿಷ್ಠರ ಆದೇಶದಂತೆ ಜೆಡಿಎಸ್ ನಿಂದ ಯಾರನ್ನು ಆಯ್ಕೆ ಮಾಡಿದರೂ ನಾನು ನಮ್ಮ ಪಕ್ಷದ ಪರವಾಗಿ ಕೆಲಸ ಮಾಡಲು ಸಿದ್ದನಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ನಿಂದ ಎಂ.ಟಿ.ಕೃಷ್ಣಪ್ಪನವರಿಗೆ ಕುಮಾರಣ್ಣನವರು ಟಿಕೆಟ್ ನೀಡಿದಲ್ಲಿ ಖಂಡಿತ ಅವರ ಪರವಾಗಿ ನಿಸ್ಸಂಕೋಚವಾಗಿ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ನನಗೂ ಸ್ಪರ್ಧೆಗೆ ಅವಕಾಶವಿದ್ದು ನಾನೂ ಸಹ ಜೆಡಿಎಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯಾಗಿದ್ದೇನೆ”. ಮುಂದೆ ವರಿಷ್ಠರ ತೀರ್ಮಾನದಂತೆ ನಡೆಯುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಹಾಗೂ ವಿವಿಧ ಪದಾಧಿಕಾರಿಗಳಾದ ಡಾ.ನಂಜಪ್ಪ, ಶಿವಲಿಂಗೇಗೌಡ, ರವಿಕುಮಾರ್, ಶಿವಲಿಂಗೇಗೌಡ, ಜೈಗಿರಿಸುಂದರ್, ನಾಗರಾಜಪ್ಪ, ರವಿ, ರಾಜಣ್ಣ, ನವೀನ್, ರಾಜು, ಬೋರೇಗೌಡ, ಹರೀಶ್, ಮಹೇಶ್, ಯದುಕುಮಾರ್, ಪ್ರಕಾಶ್ ಸೇರಿದಂತೆ ಇತರರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್ appeared first on nammatumakuru.

ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
ತುರುವೇಕೆರೆ: ಜೆಡಿಎಸ್ ಪಕ್ಷದಿಂದ ದೊಡ್ಡಘಟ್ಟ ಚಂದ್ರೇಶ್ ಟಿಕೆಟ್ ಕೇಳಲಿ ಅಭ್ಯಂತರವಿಲ್ಲ, ಅದನ್ನು ಬಿಟ್ಟು ಕಾರ್ಯಕ್ರಮದ ನೆಪದಲ್ಲಿ ಕಾರ್ಯಕರ್ತರ ನಡುವೆ ಜೆಡಿಎಸ್‌ ನಲ್ಲಿ ಗುಂಪುಗಾರಿಕೆ ಮಾಡಬಾರದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ ನೀಡಿದ್ದಾರೆ.

ಪಟ್ಟಣದ  ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದಿಂದ ಆಯೋಜಿಸಿದ್ದ ಜೆ.ಡಿ.ಎಸ್ ಕಾರ್ಯಕರ್ತರ ಸಭೆ ಹಾಗೂ ಎಸ್‌ ಬಿಆರ್ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ನಾನು ಜೆಡಿಎಸ್ ಪಕ್ಷಕ್ಕೆ ಬಂದಾಗ ತಾಲೂಕಿನಲ್ಲಿ 7 ಸಾವಿರ ಮತಗಳು ಪಕ್ಷಕ್ಕೆ ಬಂದಿದ್ದವು. ಸುಮಾರು ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿ ಈಗ 70 ಸಾವಿರಕ್ಕೂ ಹೆಚ್ಚು ಮತಗಳು ಬರುವ ಹಾಗೆ ಸಂಘಟನೆ ಮಾಡಿದ್ದೇನೆ. ಜೆಡಿಎಸ್ ಪಕ್ಷದಿಂದ ನಾಲ್ಕು ಬಾರಿ ಶಾಸಕನಾಗಿ, ಮೂರು ಬಾರಿ ಸೋತಿದ್ದೇನೆ. ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಹಾಲಿ ಶಾಸಕರಿಗೆ ಮುಂದಿನ ವಿಧಾನ ಸಭಾ ಚುನಾವಣೆಗೆ ಟಿಕೆಟ್ ನೀಡುವಂತೆ ಮಾತುಕತೆಯಾಗಿದೆ. ಚುನಾವಣೆ ಇನ್ನೂ 2 ವರ್ಷ ಇದೆ, ಅಭ್ಯರ್ಥಿ ವಿಚಾರ ಅಪ್ರಸ್ತುತ. ಆದರೂ ತಾಲೂಕಿನಲ್ಲಿ ಚಂದ್ರೇಶ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂಬ ಮಾತುಗಳನ್ನು ಮುಖಂಡರು ಪ್ರಸ್ತಾಪಿಸಿದ್ದಾರೆ. ಟಿಕೆಟ್ ವಿಚಾರವಾಗಿ ನನಗೆ ಹಾಗೂ ಬಿಜೆಪಿ ಮಾಜಿ ಶಾಸಕ ಮಸಾಲ ಜಯರಾಮ್ ನಡುವೆ ಪೈಪೋಟಿ ಇದೆಯೇ ಹೊರತು ಚಂದ್ರೇಶ್ ರೊಂದಿಗೆ ಅಲ್ಲ, ಇದನ್ನು ಕಾರ್ಯಕರ್ತರು ಅರ್ಥಮಾಡಿಕೊಳ್ಳಿ ಎಂದರು.

ಎಸ್‌ ಬಿಆರ್ ಬಗ್ಗೆ ಆತಂಕ ಬೇಡ: ನಂತರ ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌.ಬಿ.ಆರ್ ಬಗ್ಗೆ ಮಾತನಾಡಿ, 18 ವರ್ಷ ಪೂರ್ಣಗೊಳಿಸಿದ ನಾಗರಿಕರು, ಹೊಸ ಮತದಾರರು, ಹಿಂದೆ ಪಟ್ಟಿಯಿಂದ ತಪ್ಪಿಸಿಕೊಂಡವರು, ಅರ್ಹವಲ್ಲದ ಹೆಸರುಗಳನ್ನು ತೆಗೆದುಹಾಕುವುದು, ಮೃತ ವ್ಯಕ್ತಿಗಳ ಹೆಸರುಗಳು, ಎರಡು ಸ್ಥಳಗಳಲ್ಲಿ ನೋಂದಣಿಗಳು, ಶಾಶ್ವತವಾಗಿ ಸ್ಥಳಾಂತರ ಗೊಂಡವರ ಹೆಸರುಗಳು, ದೋಷಗಳನ್ನು ಸರಿಪಡಿಸುವುದು. ನ್ಯಾಯ ಸಮ್ಮತ ಚುನಾವಣೆಯನ್ನು ಮತ್ತು ನಕಲಿ ಮತದಾನ ತಡೆಯುವುದು ಹಾಗೂ ಮತದಾರರ ವಿಶ್ವಾಸವನ್ನು ಹೆಚ್ಚಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ಕಳೆದ ವಿಧಾನಸಭಾ ಚುನಾವಣೆಯ ಕಡೆ ಎಂದು ರಾಜಕೀಯ ನಿವೃತ್ತಿಗೆ ನಿರ್ಧರಿಸಿದ್ದೆ. ಆದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರ ಬಳಿ ಕರೆದುಕೊಂಡು ಹೋಗಿ, ಎನ್.ಡಿ.ಎ. ಮೈತ್ರಿಯಾಗಿದ್ದು ಮುಂದೆ ರಾಜ್ಯದಲ್ಲಿ ಎನ್.ಡಿ.ಎ. ಸರ್ಕಾರ ಬಂದರೆ ಮಂತ್ರಿಯಾಗುವ ಅವಕಾಶ ಇದೆ. ಆದ್ದರಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಸೂಚಿಸಿದರು. ನಾನು ತಾಲೂಕು ಜೆಡಿಎಸ್‌ ನ ಅಘೋಷಿತ ನಾಯಕ. ನನಗೆ ಪಕ್ಷ ಟಿಕೆಟ್ ನೀಡುವುದು ನಿಮಗೆ ಗೊಂದಲವಿದ್ದರೆ, ಕೇಂದ್ರ ಸಚಿವ ಕುಮಾರಸ್ವಾಮಿಯಿಂದ ಹೇಳಿಕೆ ಕೊಡಿಸುತ್ತೇನೆ ಎಂದರು.

ವಕೀಲರಾದ ಧನಪಾಲ್, ರಮೇಶ್‌ಗೌಡ, ಶಂಕರೇಗೌಡ, ವೆಂಕಟಾಪುರ ಯೋಗೇಶ್, ಚಂದ್ರೇಗೌಡ, ರಂಗನಾಥ್, ಮೂರ್ತಣ್ಣ ಸಿ.ಎಸ್.ಪುರ, ಲೀಲಾವತಿ ಗಿಡ್ಡಯ್ಯ, ನರಸೇಗೌಡ, ನಂಜೇಗೌಡ, ಜಯರಾಮ್, ತಿಮ್ಮೇಗೌಡ, ಎ.ಬಿ.ಜಗದೀಶ್ ಸೇರಿದಂತೆ ಇತರ ಕಾರ್ಯಕರ್ತರು ಇದ್ದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ appeared first on nammatumakuru.

ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
ತುರುವೇಕೆರೆ: ಸಮಾಜ ಸೇವೆಗೆ ಜಾತಿ ಮುಖ್ಯವಾಗಬಾರದು, ನಾವು ಮಾಡುವ ಸೇವೆ ಮುಖ್ಯವಾಗಬೇಕು ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನೋಳಂಬ ಲಿಂಗಾಯತ ಉಪ ಸಮಿತಿ ವತಿಯಿಂದ ಹಾಗೂ ಶಾಸಕ ಅನುದಾನ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನೂತನ ಗಣಪತಿ ಆಲಯ ಮತ್ತು ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಸಮುದಾಯ ಭವನಗಳಲ್ಲಿ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಉತ್ತಮವಾದ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಿ. ದಂಡಿನಶಿವಪ್ಪ ರಸ್ತೆಯ ಸಾರಿಗೆಹಳ್ಳಿ ಕೆರೆಕೋಡಿಗೆ ಸುಮಾರು 4 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ಬ್ರಿಡ್ಜ್ ನಿರ್ಮಾಣ ಮಾಡಲು ಅನುದಾನ ನೀಡಲಾಗಿದೆ. ಆದರೆ ಕೆಲವು ತಾಂತ್ರಿಕ ತೊಡಕುಗಳಿಂದ ಕಾಮಗಾರಿ ತಡವಾಗಿದ್ದು, ಸದ್ಯದಲ್ಲಿಯೇ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಬಿ.ಧರಣೇಶ್ ಹಾಗೂ ಪಿಎಲ್.ಡಿ ಬ್ಯಾಂಕ್ ನಿರ್ದೇಶಕ ಮಾಚೇನಹಳ್ಳಿ ಲೋಕೇಶ್‌ ರನ್ನು ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಅಧ್ಯಕ್ಷತೆಯನ್ನು ನೋಳಂಬ ಲಿಂಗಾಯತ ರಾಜ್ಯ ಸಂಘದ ಅಧ್ಯಕ್ಷ ಬಿ.ಕೆ.ಚಂದ್ರಶೇಖರ್, ಗೌರವ ಕಾರ್ಯದರ್ಶಿ ಕೆ.ಬಿ.ಶಶಿಧರ್, ನಿರ್ದೇಶಕರಾದ ಎಂ.ದೇವರಾಜು, ನೋಳಂಬ ಲಿಂಗಾಯತ ತಾಲ್ಲೂಕು ಸಂಘದ ಅಧ್ಯಕ್ಷ ಎಸ್.ಎಂ.ಕುಮಾರಸ್ವಾಮಿ, ಕಾರ್ಯದರ್ಶಿ ಶಿವಕುಮಾರ್, ಶೈಲೇಶ್, ತಾಂತ್ರಿಕ ಸಲಹೆಗಾರರು ಎಂ.ಎಸ್.ಪ್ರಸಾದ್, ಮುಖಂಡರಾದ ಹಟ್ಟಿಹಳ್ಳಿ ರಮೇಶ್, ಮಾಚೇನಹಳ್ಳಿ ಸಿದ್ದಬಸಪ್ಪ, ಹೆಡಗಿಹಳ್ಳಿ ವಿಶ್ವನಾಥ್, ರಾಮಡಿಹಳ್ಳಿ ದೇವರಾಜು, ವೆಂಕಟಾಪುರ ಯೋಗೇಶ್ ಸೇರಿದಂತೆ ಸಮಾಜದ ಮುಖಂಡರು ಇದ್ದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ appeared first on nammatumakuru.