ರಾಜ್ಯ ಸುದ್ದಿ Archives - nammatumakuru

ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. “ಒಳ ಮೀಸಲಾತಿ ಜಾರಿಯ ಸಂದರ್ಭದಲ್ಲಿ ಸಣ್ಣ ಪ್ರಮಾಣದ ಶೇಕಡಾವಾರು ವ್ಯತ್ಯಾಸಗಳ ಬಗ್ಗೆ ಜಗಳವಾಡುವುದು ಅನಾವಶ್ಯಕ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮೀಸಲಾತಿ ಎಂಬುದು ಕಾಂಗ್ರೆಸ್ ಪಕ್ಷದ ಮೂಲ ಕಾರ್ಯಕ್ರಮವಾಗಿದೆ. ಸಮಾಜದಲ್ಲಿ ಶೋಷಿತರಿಗೆ ಗೌರವ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಡಲು ಇದನ್ನು ರೂಪಿಸಲಾಗಿದೆ ಎಂದು ಡಿಕೆಶಿ ಪ್ರತಿಪಾದಿಸಿದರು.

ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಸುಮಾರು 80,000 ಕೋಟಿ ರೂ. ನೀಡಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರವೊಂದೇ ಎಸ್‌ ಟಿಪಿ (SCP) ಮತ್ತು ಟಿಎಸ್‌ಪಿ (TSP) ಕಾಯ್ದೆಗಳಡಿ 29,000 ಕೋಟಿ ರೂ.ಗಳ ಬೃಹತ್ ಅನುದಾನ ನೀಡಿದೆ ಎಂದು ಅವರು ಮಾಹಿತಿ ನೀಡಿದರು.

ಒಳ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ. ಈ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಂಡಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ ಎಂದು ಅವರು ಟೀಕಿಸಿದರು.

ಸೋನಿಯಾ ಗಾಂಧಿ ಅವರು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ್ದರಿಂದ ಇಂದು ಮಹಿಳೆಯರಿಗೆ ನಾಯಕತ್ವದ ಅವಕಾಶ ಸಿಕ್ಕಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಶೇ.50ರಷ್ಟು ಮೀಸಲಾತಿ ತಂದಿದ್ದು ಕಾಂಗ್ರೆಸ್ ಸಾಧನೆ ಎಂದು ಅವರು ಸ್ಮರಿಸಿದರು.

“ಇತಿಹಾಸ ಮರೆತವರು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ” ಎಂಬ ಅಂಬೇಡ್ಕರ್ ಅವರ ಮಾತುಗಳನ್ನು ಹೇಳಿದ ಅವರು, ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಗಳನ್ನು ಕೊಂಡಾಡಿದರು.

ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸ್ವಪಕ್ಷದ ನಾಯಕರಲ್ಲೇ ಭಿನ್ನಾಭಿಪ್ರಾಯಗಳು ಮೂಡಿರುವ ಬೆನ್ನಲ್ಲೇ, ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಸಮತೋಲನ ಸಾಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಕಸರತ್ತು ನಡೆಸುತ್ತಿರುವುದು ಈ ಹೇಳಿಕೆಯಿಂದ ಸ್ಪಷ್ಟವಾಗಿದೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್ appeared first on nammatumakuru.

‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
ಬೆಂಗಳೂರು: “ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಮಾನವೀಯತೆ ಇಲ್ಲದಿದ್ದರೆ ಅದು ನಿಜವಾದ ಶಿಕ್ಷಣವಲ್ಲ, ಅದು ಕೇವಲ ಬದುಕುವ ದಾರಿಯಷ್ಟೇ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ ನಲ್ಲಿ ಆಯೋಜಿಸಿದ್ದ “ಕನ್ನಡ ಸಾಮರಸ್ಯ ನೆಲೆಗಳು” ಸರಣಿಯ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು. ಕರ್ನಾಟಕದ ಬಹುಮುಖ ಪರಂಪರೆಯನ್ನು ಬಿಂಬಿಸುವ ಈ ಯೋಜನೆಯಡಿ ಒಟ್ಟು 100 ಪುಸ್ತಕಗಳನ್ನು ಹೊರತರಲು ಉದ್ದೇಶಿಸಲಾಗಿದ್ದು, ಇಂದು ಮೊದಲ ಹಂತದಲ್ಲಿ 41 ಪುಸ್ತಕಗಳು ಬಿಡುಗಡೆಯಾದವು. ಉಳಿದ 59 ಪುಸ್ತಕಗಳು ಶೀಘ್ರದಲ್ಲೇ ಲೋಕಾರ್ಪಣೆಯಾಗಲಿವೆ ಎಂದು ಅವರು ತಿಳಿಸಿದರು.

“ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಅವರು ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ಸಂವಿಧಾನ ಜಾರಿಯಾದ ನಂತರ ಸುಧಾರಣೆಯ ವೇಗ ಹೆಚ್ಚಿದೆಯಾದರೂ, ಸಾಮಾಜಿಕ ವ್ಯವಸ್ಥೆ ಇಂದಿಗೂ ಸಂಪೂರ್ಣವಾಗಿ ಬದಲಾಗಿಲ್ಲ. ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ಲಭಿಸಬೇಕು,” ಎಂದು ಸಿಎಂ ಪ್ರತಿಪಾದಿಸಿದರು.

ಬಿಡುಗಡೆಯಾಗಿರುವ ಈ ಪುಸ್ತಕಗಳು ಕೇವಲ ಮುದ್ರಣಕ್ಕೆ ಸೀಮಿತವಾಗದೆ ಯುವಜನರನ್ನು ತಲುಪಬೇಕು. ಯುವಕರಲ್ಲಿ ಮಾನವೀಯತೆ ಮತ್ತು ವೈಚಾರಿಕ ಪ್ರಜ್ಞೆ ಮೂಡಿದಾಗ ಮಾತ್ರ ಈ ಯೋಜನೆಯ ಉದ್ದೇಶ ಸಫಲವಾಗುತ್ತದೆ. ಪಂಪ, ಕನಕದಾಸ, ಬಸವಣ್ಣ ಮತ್ತು ಕುವೆಂಪು ಅವರ ವಿಚಾರಧಾರೆಗಳನ್ನು ಇಂದಿನ ಪೀಳಿಗೆ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದರು.

“ಬಸವಣ್ಣನವರ ‘ಇವ ನಮ್ಮವ’ ಎನ್ನುವ ಭಾವನೆ ಎಲ್ಲರಲ್ಲೂ ಮೂಡಬೇಕು. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಆಶಯಗಳನ್ನು ಸರಿಯಾಗಿ ಅರ್ಥೈಸಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಕುವೆಂಪು ಅವರು ಹೇಳಿದಂತೆ ಗುಡಿ, ಚರ್ಚ್, ಮಸೀದಿಗಳನ್ನು ಬಿಟ್ಟು ಹೊರಬಂದು ಮನುಷ್ಯತ್ವವನ್ನು ಪೂಜಿಸಬೇಕು,” ಎಂದು ಅವರು ಕರೆ ನೀಡಿದರು.

ಭಾರತವು ಅನೇಕ ಭಾಷೆ, ಧರ್ಮ ಮತ್ತು ಸಂಸ್ಕೃತಿಗಳ ಬೀಡಾಗಿದ್ದು, ಕರ್ನಾಟಕದಲ್ಲೂ ಅಂತಹದ್ದೇ ವೈವಿಧ್ಯತೆ ಇದೆ. ಈ ವೈವಿಧ್ಯತೆಯ ನಡುವೆಯೂ ನಾವು ಏಕತೆಯನ್ನು ಸಾಧಿಸಿದ್ದೇವೆ. ಈ ಸಾಮರಸ್ಯದ ನೆಲೆಯನ್ನು ಗಟ್ಟಿಗೊಳಿಸಲು ಇಂತಹ ಸಾಹಿತ್ಯಿಕ ಪ್ರಯತ್ನಗಳು ಪೂರಕವಾಗಿವೆ ಎಂದು ಸಿದ್ದರಾಮಯ್ಯನವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪದಾಧಿಕಾರಿಗಳು, ಸಾಹಿತಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ appeared first on nammatumakuru.

ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
ಬೆಂಗಳೂರು: ಕೇಂದ್ರ ಸರ್ಕಾರವು ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡಲು ಕೈಗೊಂಡಿರುವ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ನಗರದ ಟೌನ್‌ಹಾಲ್‌ನಲ್ಲಿ ಆಯೋಜಿಸಲಾಗಿದ್ದ ‘ನಾರಿ ಶಕ್ತಿ ವಂದನ ಕಾಯ್ದೆ – 2026’ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದ ಜನಸಂಖ್ಯೆಯಲ್ಲಿ ಮಹಿಳೆಯರು ಅರ್ಧದಷ್ಟಿದ್ದಾರೆ. ಅವರಿಗೆ ರಾಜಕೀಯದಲ್ಲಿ ಶೇ. 33ರಷ್ಟು ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ ಎಂದು ವಿಜಯೇಂದ್ರ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ನಾರಿ ಶಕ್ತಿಯ ಮೇಲೆ ಅಪಾರ ನಂಬಿಕೆ ಇಟ್ಟಿದ್ದಾರೆ. ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ ಎಂಬುದನ್ನು ಈ ಕಾಯ್ದೆ ಸಾಬೀತುಪಡಿಸಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಈ ಕಾಯ್ದೆಯು ಜಾರಿಗೆ ಬಂದ ನಂತರ ದೇಶದಲ್ಲಿ ಮಹಿಳೆಯರ ನೇತೃತ್ವದ ಅಭಿವೃದ್ಧಿ (Women–led development) ಹೊಸ ವೇಗವನ್ನು ಪಡೆದುಕೊಳ್ಳಲಿದೆ ಎಂದು ತಿಳಿಸಿದರು.

ನಾರಿ ಶಕ್ತಿ ವಂದನ ಕಾಯ್ದೆಯನ್ನು ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು. ಇದಕ್ಕಾಗಿ 96671 73333 ಸಂಖ್ಯೆಗೆ ಮಿಸ್‌ಡ್ ಕಾಲ್ ನೀಡುವ ಮೂಲಕ ತಮ್ಮ ಬೆಂಬಲ ಸೂಚಿಸಲು ಮಹಿಳೆಯರಿಗೆ ಪ್ರೋತ್ಸಾಹಿಸಲಾಯಿತು.

ಪದ್ಮಶ್ರೀ ಪುರಸ್ಕೃತ ಸಾಮಾಜಿಕ ಕಾರ್ಯಕರ್ತೆ ಡಾ. ಸುಶೀಲಮ್ಮ ಅವರು ಮಾತನಾಡಿ, ಪಂಚಾಯತ್ ಮಟ್ಟದಲ್ಲಿ ಮಹಿಳೆಯರಿಗೆ ಸಿಕ್ಕಿರುವ ಮೀಸಲಾತಿಯಂತೆ, ಈ ಹೊಸ ಮಸೂದೆಯು ಕೂಡ ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದು ಬೆಂಬಲ ವ್ಯಕ್ತಪಡಿಸಿದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ appeared first on nammatumakuru.

ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
ತುಮಕೂರು: ಶಿಕ್ಷಣ, ಆರೋಗ್ಯ ಸೇವೆಗೆ ಹೆಚ್ಚು ಒತ್ತು ನೀಡುತ್ತಿರುವ ರಾಜ್ಯ ಒಕ್ಕಲಿಗರ ಸಂಘವು ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಸಮುದಾಯಕ್ಕೆ ಶಕ್ತಿ ತುಂಬ ಬೇಕು. ತುಮಕೂರಿನಲ್ಲಿ ಸಂಘದಿಂದ ಆಸ್ಪತ್ರೆ ಸ್ಥಾಪನೆ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಸಲಹೆ ಮಾಡಿದರು.

ನಗರದ ಮೇಲಕೋಟೆಯ ರಾಜ್ಯ ಒಕ್ಕಲಿಗರ ಸಂಘದ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯದ 2 ಮತ್ತು 3ನೇ ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಈ ಹಾಸ್ಟೆಲ್ ಪಕ್ಕದಲ್ಲಿ ಸಂಘದ ನಿವೇಶನವಿದೆ, ಸಾರ್ವಜನಿಕರ ಉಪಯೋಗಕ್ಕಾಗಿ ಆಸ್ಪತ್ರೆ ಸ್ಥಾಪನೆ ಮಾಡಬೇಕು. ಈ ಕಾರ್ಯ ಶೀಘ್ರವಾಗಿ ಆರಂಭಗೊಳ್ಳಲು ಒಕ್ಕಲಿಗರ ಸಂಘದ ಪದಾಧಿಕಾರಿಗಳು ನಿರ್ಧಾರ ಮಾಡಬೇಕು ಎಂದರು.

ಕುಣಿಗಲ್ ಅರೆಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ ಮಾತನಾಡಿ, ಸಾಂಘಿಕ ಶಕ್ತಿ ನಿಜವಾದ ಸಮುದಾಯದ ಶಕ್ತಿ. ರಾಜಕೀಯ, ಆರ್ಥಿಕ ಶಕ್ತಿ ಹೆಚ್ಚಿಸಿಕೊಳ್ಳಲು ರಾಜ್ಯ ಒಕ್ಕಲಿಗರ ಸಂಘ ಆಗಿಂದಾಗ್ಗೆ ಸಮುದಾಯದ ಸಮಾವೇಶಗಳನ್ನು ಮಾಡಿ ಜಾಗೃತಿ ಮೂಡಿಸಬೇಕು. ಸಮುದಾಯದ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು. ಅದಕ್ಕಾಗಿ ಒಕ್ಕಲಿಗರ ಸಂಘವು ವೈದ್ಯಕೀಯ ಕಾಲೇಜು ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆ ಮಾಡಬೇಕು ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ್ ಮಾತನಾಡಿ, ರಾಜ್ಯ ಒಕ್ಕಲಿಗರ ಸಂಘ ಸಮುದ್ರವಿದ್ದಂತೆ, ಆರ್ಥಿಕವಾಗಿಯೂ ಸದೃಢವಾಗಿದೆ. ಸಂಘದಿಂದ ಸಮುದಾಯಕ್ಕೆ ಆಗಬೇಕಾಗಿರುವ ಕೆಲಸಗಳನ್ನು ಬದ್ಧತೆಯಿಂದ ಮಾಡಬೇಕು ಎಂದರು.

ಸಂಘದ ಗೌರವಾಧ್ಯಕ್ಷ ಬಿ.ಕೆಂಚಪ್ಪಗೌಡ ಮಾತನಾಡಿ, ಸಮುದಾಯದ ಕೆಲಸ ಕಾರ್ಯಗಳಿಗಾಗಿ ಆಸ್ತಿ ನಿರ್ಮಾಣ ಮಾಡಲು ಸಂಘ ತೀರ್ಮಾನ ಮಾಡಿದೆ. ಎಲ್ಲಾ ಜಿಲ್ಲೆಗಳಲ್ಲೂ ಆದ್ಯತೆ ಮೇಲೆ ವಿದ್ಯಾರ್ಥಿನಿಲಯ ಸ್ಥಾಪನೆ ಮಾಡಲಾಗುವುದು ಎಂದರು.

ಸಂಘದ ನಿರ್ದೇಶಕರು, ಭೂ ಖರೀದಿ ಸಮಿತಿ ಅಧ್ಯಕ್ಷರೂ ಆದ ಆರ್. ಹನುಮಂತರಾಯಪ್ಪ ಮಾತನಾಡಿ, ಈ ವಿದ್ಯಾರ್ಥಿ ನಿಲಯಕ್ಕೆ ಬೇಡಿಕೆ ಹೆಚ್ಚಾಗಿದೆ. ಹೆಣ್ಣುಮಕ್ಕಳಿಗೆ ಸ್ಥಳಾವಕಾಶವಿಲ್ಲದೆ ಸಮಸ್ಯೆಯಾಗಿದೆ. ಸುಮಾರು ಆರು ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಎರಡು ಅಂತಸ್ತಿನ ಕಟ್ಟಡ ನಿರ್ಮಿಸಲಾಗುವುದು ಎಂದು ಹೇಳಿದರು. ಸಂಘದ ನಿರ್ದೇಶಕರೂ, ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯ ಅಧ್ಯಕ್ಷರಾದ ಲೋಕೇಶ್ ನಾಗರಾಜಯ್ಯ ಮಾತನಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ. ಗಂಗಾಧರ್, ಹಾಸ್ಟೆಲ್ ಸಮಿತಿ ಅಧ್ಯಕ್ಷ ವೆಂಕಟರಾಮೇಗೌಡ, ನಗರಪಾಲಿಕೆ ಮಾಜಿ ಉಪಮೇಯರ್ ಟಿ.ಆರ್.ನಾಗರಾಜು, ಮಾಜಿ ಸದಸ್ಯರಾದ ಧರಣೇಂದ್ರಕುಮಾರ್, ಶ್ರೀನಿವಾಸ್, ಮನೋಹರಗೌಡ, ತುಡಾ ಮಾಜಿ ಅಧ್ಯಕ್ಷ ದೇವಗೌಡ, ವಿವಿಧ ಸಂಘಸಂಸ್ಥೆಗಳ ಮುಖಂಡರಾದ ಲಕ್ಷ್ಮಗೌಡ, ಭೈರವ ಗಿರೀಶ್, ಮಂಜುನಾಥ್, ನಟೇಶ್, ಜಯಮ್ಮ, ನಾಗಮಣಿ ಕಾಮೇಶ್, ಪುಟ್ಟಸ್ವಾಮಿ, ರಂಗಪ್ಪ, ನರಸಿಂಹಮೂರ್ತಿ, ಉಪ್ಪಾರಹಳ್ಳಿ ಕುಮಾರ್, ಪ್ರೊ.ವೀರಯ್ಯ, ಮುನಿಸ್ವಾಮಿಗೌಡ, ಲೀಲಾವತಿ, ಮಂಜುಳಾ ಮೊದಲಾದವರು ಭಾಗವಹಿಸಿದ್ದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ appeared first on nammatumakuru.

ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ ದೆಹಲಿಗೆ ಪ್ರಯಾಣ ಬೆಳೆಸಿದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮಂಡಿಸಲು ಈ ಶಾಸಕರು ನಿರ್ಧರಿಸಿದ್ದಾರೆ.

ಸಚಿವ ಸಂಪುಟದಲ್ಲಿರುವ ಸುಮಾರು 20 ಹಿರಿಯ ಸಚಿವರನ್ನು ಕೈಬಿಟ್ಟು, ಹೊಸಬರಿಗೆ ಮತ್ತು ಸತತವಾಗಿ ಗೆಲ್ಲುತ್ತಿರುವ ಶಾಸಕರಿಗೆ ಅವಕಾಶ ನೀಡಬೇಕು ಎಂಬುದು ದೆಹಲಿಗೆ ತೆರಳಿರುವ ಶಾಸಕರ ಪ್ರಮುಖ ಬೇಡಿಕೆಯಾಗಿದೆ.

ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮತ್ತು ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರ ನೇತೃತ್ವದಲ್ಲಿ ಶಾಸಕರು ದೆಹಲಿಗೆ ತೆರಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಲು ಶಾಸಕರು ಸಮಯ ಕೇಳಿದ್ದಾರೆ.

ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಕ್ಕೆ ಚುರುಕು ಮುಟ್ಟಿಸಲು ಸಂಪುಟ ಪುನರ್‌ ರಚನೆ ಅನಿವಾರ್ಯ ಎಂಬುದು ಅತೃಪ್ತ ಶಾಸಕರ ವಾದ. ಇದು ಕೇವಲ ಸಚಿವ ಸ್ಥಾನದ ಬೇಡಿಕೆಯಾಗಿದ್ದು, ನಾಯಕತ್ವ ಬದಲಾವಣೆಯ ಪ್ರಶ್ನೆಯಲ್ಲ ಎಂದು ಅಶೋಕ ಪಟ್ಟಣ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪಿಲ್ಲ. ಸಂಪುಟ ಪುನರ್‌ ರಚನೆ ಕುರಿತ ಅಂತಿಮ ನಿರ್ಧಾರವನ್ನು ವರಿಷ್ಠರೇ ಕೈಗೊಳ್ಳಲಿದ್ದಾರೆ,” ಎಂದು ತಿಳಿಸಿದ್ದಾರೆ.

ಲಕ್ಷ್ಮಣ ಸವದಿ, ಪಿ.ಎಂ. ನರೇಂದ್ರ ಸ್ವಾಮಿ, ವಿನಯ್ ಕುಲಕರ್ಣಿ, ಪುಟ್ಟರಂಗಶೆಟ್ಟಿ, ಎಂ.ವೈ. ಪಾಟೀಲ್, ರಿಜ್ವಾನ್ ಅರ್ಷದ್ ಸೇರಿದಂತೆ 25ಕ್ಕೂ ಹೆಚ್ಚು ಶಾಸಕರು ಈ ತಂಡದಲ್ಲಿದ್ದಾರೆ.

ಮುಂಬರುವ ಮೂರ್ನಾಲ್ಕು ದಿನಗಳ ಕಾಲ ದೆಹಲಿಯಲ್ಲೇ ಬೀಡುಬಿಡಲಿರುವ ಈ ಶಾಸಕರ ನಡೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು appeared first on nammatumakuru.

ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
ಬೆಂಗಳೂರು: ಮಹಿಳೆಯರಿಗೆ ಮೀಸಲಾದ ‘ಶಕ್ತಿ ಯೋಜನೆ’ಯನ್ನು ದುರುಪಯೋಗಪಡಿಸಿಕೊಂಡು ಸಂಸ್ಥೆಗೆ ವಂಚಿಸುತ್ತಿದ್ದ ಬಿಎಂಟಿಸಿಯ ಐವರು ಕಂಡಕ್ಟರ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪುರುಷ ಪ್ರಯಾಣಿಕರಿಗೆ ಉಚಿತ ಟಿಕೆಟ್ ನೀಡಿ, ಅವರಿಂದ ಹಣ ಪಡೆದು ವೈಯಕ್ತಿಕವಾಗಿ ಜೇಬಿಗಿಳಿಸಿಕೊಳ್ಳುತ್ತಿದ್ದ ಗಂಭೀರ ಆರೋಪ ಇವರ ಮೇಲೆ ಸಾಬೀತಾಗಿದೆ.

ಬಿಎಂಟಿಸಿ ಸೆಕ್ಯೂರಿಟಿ ಅಧಿಕಾರಿಗಳ ತಪಾಸಣೆ ವೇಳೆ ಈ ಭಾರಿ ದಂಧೆ ಬಯಲಿಗೆ ಬಂದಿದೆ.  ನಿಗಮಕ್ಕೆ ಸಲ್ಲಬೇಕಿದ್ದ ಟಿಕೆಟ್ ಹಣವನ್ನು ಪ್ರಯಾಣಿಕರಿಂದ ಪಡೆಯಲು ಕಂಡಕ್ಟರ್‌ ಗಳು ತಮ್ಮ ವೈಯಕ್ತಿಕ ಯುಪಿಐ (UPI) ಕ್ಯೂಆರ್ ಕೋಡ್‌ ಗಳನ್ನು ಬಳಸುತ್ತಿದ್ದರು. ಈ ಹಣ ನೇರವಾಗಿ ಅವರ ವೈಯಕ್ತಿಕ ಖಾತೆಗೆ ಜಮೆಯಾಗುತ್ತಿತ್ತು.

ಕನ್ನಡ ಓದಲು ಬಾರದ ಅಥವಾ ಯೋಜನೆಯ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಪ್ರಯಾಣಿಕರನ್ನೇ ಈ ತಂಡ ಗುರಿಯಾಗಿಸಿಕೊಂಡಿತ್ತು. ಪುರುಷರಿಗೆ ಶಕ್ತಿ ಯೋಜನೆಯ ‘ಶೂನ್ಯ ದರದ’ ಟಿಕೆಟ್ ನೀಡಿ, ಅವರಿಂದ ಪೂರ್ಣ ಪ್ರಮಾಣದ ಹಣ ವಸೂಲಿ ಮಾಡುತ್ತಿದ್ದರು. ಅಧಿಕಾರಿಗಳ ತನಿಖೆಯ ವೇಳೆ ಆರೋಪಿಗಳ ಖಾತೆಯಲ್ಲಿ ಸಾವಿರಾರು ರೂಪಾಯಿ ಪತ್ತೆಯಾಗಿದ್ದು, ಒಟ್ಟು 1,82,568 ರೂಪಾಯಿ ಬಿಎಂಟಿಸಿಗೆ ವಂಚಿಸಿರುವುದು ದೃಢಪಟ್ಟಿದೆ.

ಅಮಾನತುಗೊಂಡವರು:

ಬೊಮ್ಮಲಿಂಗೇಶ್ ಸಿ (ಡಿಪೋ- 18): ಇವರಿಂದ 16,404 ರೂಪಾಯಿ ವಂಚನೆ ಪತ್ತೆಯಾಗಿದೆ.

ಬ್ರಿಜೇಶ್ ಬಾಬು (ಡಿಪೋ- 51): ಇವರಿಂದ 9,795 ರೂಪಾಯಿ ವಂಚನೆ ಪತ್ತೆಯಾಗಿದೆ.

ಎನ್. ಪ್ರಕಾಶ್ (ಡಿಪೋ- 06): ಇವರಿಂದ 6,312 ರೂಪಾಯಿ ವಂಚನೆ ಪತ್ತೆಯಾಗಿದೆ.

ಸೂರ್ಯನಾರಾಯಣ (ಡಿಪೋ- 18): ಇವರಿಂದ 6,117 ರೂಪಾಯಿ ವಂಚನೆ ಪತ್ತೆಯಾಗಿದೆ.

ಮೋಹನ್ (ಡಿಪೋ- 18): ಇವರಿಂದಲೂ 6,117 ರೂಪಾಯಿ ವಂಚನೆ ಪತ್ತೆಯಾಗಿದೆ.

ಈ ಹಿಂದೆಯೂ ಇದೇ ರೀತಿಯ ಪ್ರಕರಣಗಳಲ್ಲಿ ಬಿಎಂಟಿಸಿ ಕೆಲವು ಸಿಬ್ಬಂದಿಯನ್ನು ಅಮಾನತು ಮಾಡಿತ್ತು. ಸದ್ಯ ಈ ಐವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದ್ದು, ಈ ಜಾಲದ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು appeared first on nammatumakuru.

ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
ಬೆಳಗಾವಿ: ಜಿಲ್ಲೆಯ ಅನಗೋಳದ ಬಾಬಲೇ ಗಲ್ಲಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಆಗಿದ್ದ ಅವಿನಾಶ್ ಸೂಪ್ಪಣ್ಣವರ (40) ಕೊಲೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಪತ್ನಿ ಲಕ್ಷ್ಮೀ ಸೂಪ್ಪಣ್ಣವರ ಮತ್ತು ಆಕೆಯ ಪ್ರಿಯಕರ ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಲಕ್ಷ್ಮೀ ಮತ್ತು ಕೈಲಾಶ್ ನಡುವೆ ಅನೈತಿಕ ಸಂಬಂಧವಿತ್ತು. ಈ ವಿಚಾರ ತಿಳಿದ ಪತಿ ಅವಿನಾಶ್ ಅವರು ಪತ್ನಿಗೆ ಎಚ್ಚರಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಲಕ್ಷ್ಮೀ, ಪತಿಯನ್ನು ಹತ್ಯೆ ಮಾಡಲು ಪ್ರಿಯಕರನ ಜೊತೆ ಸೇರಿ ಸಂಚು ರೂಪಿಸಿದ್ದಳು. ಮಾರ್ಚ್ 6ರಂದು ಅವಿನಾಶ್ ಅವರು ಕ್ಲಿನಿಕ್‌ಗೆ ಹೋದಾಗ, ಕೈಲಾಶ್ ಅಲ್ಲಿಗೆ ತೆರಳಿ ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ ಬೆರೆಸಿ ನೀಡಿದ್ದ.

ಅವಿನಾಶ್ ಅರೆಪ್ರಜ್ಞಾವಸ್ಥೆಗೆ ತಲುಪುತ್ತಿದ್ದಂತೆ, ಕೈಲಾಶ್ ಅಲ್ಲೇ ಇದ್ದ ಗ್ಯಾಸ್ ಸಿಲಿಂಡರ್‌ನಿಂದ ಅವರ ತಲೆ ಮತ್ತು ಎದೆಗೆ ಬಲವಾಗಿ ಹೊಡೆದು ಹತ್ಯೆ ಮಾಡಿದ್ದಾನೆ. ಈ ವೇಳೆ ಲಕ್ಷ್ಮೀ ವಿಡಿಯೋ ಕಾಲ್ ಮೂಲಕ ಕೊಲೆಯನ್ನು ಖಚಿತಪಡಿಸಿಕೊಂಡಿದ್ದಳು ಎನ್ನಲಾಗಿದೆ.

ಹತ್ಯೆಯ ಬಳಿಕ ಏನೂ ತಿಳಿಯದವಳಂತೆ ಕ್ಲಿನಿಕ್‌ಗೆ ಬಂದ ಲಕ್ಷ್ಮೀ, ಪತಿ ಶುಗರ್ ಹೆಚ್ಚಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ನಾಟಕವಾಡಿದ್ದಳು. ಆದರೆ ಮೃತನ ತಾಯಿ ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಂಡ ಟಿಳಕವಾಡಿ ಪೊಲೀಸರು, ಮೊಬೈಲ್ ಕರೆಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳು ಪೊಲೀಸ್ ವಶದಲ್ಲಿದ್ದು, ತನಿಖೆ ಮುಂದುವರಿದಿದೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ appeared first on nammatumakuru.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
ಬೀದರ್ : ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ? ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು.  ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ? ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು.  ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಬಸವಣ್ಣ ತಿರಸ್ಕರಿದ್ದ ಕರ್ಮಸಿದ್ಧಾಂತವನ್ನು ಪಾಲಿಸುವವರು ಈಗ ಹೆಚ್ಚಾಗಿದ್ದಾರೆ. ಈ ಮೌಡ್ಯ ಆಚರಿಸುವವರೆಲ್ಲಾ ವಿದ್ಯಾವಂತರೇ ಎನ್ನುವುದು ಬೇಸರದ ಸಂಗತಿ, ಆದ್ದರಿಂದ ವೈಚಾರಿಕತೆ ಇರುವ ವೈಜ್ಞಾನಿಕ ಶಿಕ್ಷಣ ಪದ್ಧತಿ ಅಗತ್ಯ. ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದರು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದ್ದೇವೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದರು.

ಜಾತಿ ಸಮಾಜ ಚಲನೆ ಇಲ್ಲದ್ದು.‌ ಸಮಾಜವನ್ನು ಚಲನಶೀಲಗೊಳಿಸಲು ವಸ್ತುನಿಷ್ಠವಾದ ವೃತ್ತಿಪರತೆಯನ್ನು ಪತ್ರಕರ್ತರು ಪಾಲಿಸಬೇಕು ಎಂದರು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌ ಎಂದರು.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ ಎಂದರು.

ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್  ಖಂಡ್ರೆ, ಸಚಿವರುಗಳಾದ ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ಆನಂದ್ ದೇವಪ್ಪ,  ಸಮ್ಮೇಳನದ ಪ್ರಧಾನ ಭಾಷಣಕಾರರಾಗಿರುವ ಹಿರಿಯ ಸಂಪಾದಕರಾದ ವಿಶ್ವೇಶ್ವರ ಭಟ್, ಸಂಸದರಾದ ಸಾಗರ್ ಖಂಡ್ರೆ, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.‌

ಹಾರಕುಡ ಹಿರೇಮಠ ಸಂಸ್ಥಾನದ ಡಾ.ಚನ್ನವೀರ ಶಿವಾಚಾರ್ಯರು, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರು ಇವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ರಾಜ್ಯ ಮತ್ತು‌ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.‌

ಉಚಿತ ಬಸ್ ಪಾಸ್ : ನಿಯಮಗಳ ತೊಂದರೆ ನಿವಾರಣೆ ; ಸಿಎಂ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

ವರದಿ: ಮಂಜುಸ್ವಾಮಿ ಎಂ.ಎನ್.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ appeared first on nammatumakuru.

‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
ತುಮಕೂರು: ಒಳ ಮೀಸಲಾತಿ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ ಅವರು ನೀಡಿರುವ ಇತ್ತೀಚಿನ ಹೇಳಿಕೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೈ.ಎಚ್. ಹುಚ್ಚಯ್ಯ ತೀವ್ರವಾಗಿ ಖಂಡಿಸಿದ್ದಾರೆ. ದಾವಣಗೆರೆ ವಿಧಾನಸಭಾ ಉಪಚುನಾವಣೆ ಸಂದರ್ಭದಲ್ಲಿ ನಡೆದ ಛಲವಾದಿ ಮಹಾಸಭಾ ಸಮಾವೇಶದಲ್ಲಿ ಪರಮೇಶ್ವರ ಅವರು ನೀಡಿದ್ದ ಹೇಳಿಕೆ ‘ದುರದೃಷ್ಟಕರ’ ಎಂದು ಅವರು ಬಣ್ಣಿಸಿದ್ದಾರೆ.

101 ಪರಿಶಿಷ್ಟ ಜಾತಿಗಳಿಗೆ ಇದ್ದ ಶೇ.24ರಷ್ಟು ಮೀಸಲಾತಿಯನ್ನು ಬಿಜೆಪಿ ಸರ್ಕಾರವು 6–6–5 ಅನುಪಾತದಲ್ಲಿ ಹಂಚಿಕೆ ಮಾಡಿ ಸಮುದಾಯವನ್ನು ಛಿದ್ರಗೊಳಿಸಿದೆ ಎಂದು ಪರಮೇಶ್ವರ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಹುಚ್ಚಯ್ಯ, ಸಚಿವರ ಈ ಮಾತುಗಳು ಅವರ ‘ಮನೋವಿಕಲತೆಗೆ’ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ ಅವರು, “ಪಕ್ಷ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಒಳ ಮೀಸಲಾತಿ ಜಾರಿ ಮಾಡಲಾಗುವುದು” ಎಂದು ಭರವಸೆ ನೀಡಿದ್ದರು. ಆದರೆ ಈಗ ಅಧಿಕಾರಕ್ಕೆ ಬಂದ ಮೇಲೆ ಅದನ್ನು ಮರೆತಿರುವುದು ಅವರ ಪ್ರಜ್ಞಾಹೀನ ಸ್ಥಿತಿಯನ್ನು ತೋರಿಸುತ್ತದೆ ಎಂದು ಹುಚ್ಚಯ್ಯ ಲೇವಡಿ ಮಾಡಿದ್ದಾರೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ appeared first on nammatumakuru.

ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
ಮಂಗಳೂರು: ಜೀವನದಲ್ಲಿ ಎದುರಾದ ಅತಿದೊಡ್ಡ ದುರಂತವನ್ನೇ ಮೆಟ್ಟಿ ನಿಂತು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿರುವ ದಿಶಾ ಅವರಿಗೆ ಪರೀಕ್ಷಾ ಸಮಯದಲ್ಲೇ ವಿಧಿಯ ಆಟ ಕ್ರೂರವಾಗಿತ್ತು. ಮೂರು ಪರೀಕ್ಷೆಗಳು ಮುಗಿದ ಬೆನ್ನಲ್ಲೇ ಅವರ ತಾಯಿ ಆಕಸ್ಮಿಕವಾಗಿ ಬಿದ್ದು ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದರು. ಇಡೀ ಕುಟುಂಬ ಶೋಕಸಾಗರದಲ್ಲಿ ಮುಳುಗಿದ್ದಾಗ, ದಿಶಾ ಅವರ ಮುಂದೆ ಕಣ್ಣೀರು ಮತ್ತು ಭವಿಷ್ಯದ ಪರೀಕ್ಷೆ ಎರಡೂ ಇತ್ತು.

ತಾಯಿಯ ಸಾವಿನ ದುಃಖ ಕಣ್ಣ ಮುಂದೆ ಇದ್ದರೂ, ಧೃತಿಗೆಡದ ದಿಶಾ ಅವರು ತಾಯಿಯ ಆಸೆಯನ್ನು ಪೂರೈಸಲೇಬೇಕೆಂದು ಪಣ ತೊಟ್ಟರು. “ನಾನು ನನ್ನ ಅಮ್ಮನನ್ನು ಕಳೆದುಕೊಂಡೆ, ಆದರೆ ನನ್ನ ಗುರಿಯನ್ನು ಕಳೆದುಕೊಳ್ಳಬಾರದು” ಎಂಬ ದೃಢ ನಿಶ್ಚಯದೊಂದಿಗೆ ಉಳಿದ ಮೂರು ಪರೀಕ್ಷೆಗಳನ್ನು ಬರೆದರು. ಅವರ ಈ ಅದ್ಭುತ ಸಾಧನೆಗೆ ಇಂದು ಇಡೀ ರಾಜ್ಯವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.

“ನನ್ನ ತಾಯಿ ಇಂದು ಬದುಕಿದ್ದಿದ್ದರೆ ತುಂಬಾ ಸಂತೋಷಪಡುತ್ತಿದ್ದರು. ಅವರ ಆಸೆಯೇ ನಾನು ಚೆನ್ನಾಗಿ ಓದಬೇಕು ಎನ್ನುವುದಾಗಿತ್ತು. ಅಮ್ಮನನ್ನು ಮನಸ್ಸಿನಲ್ಲಿಟ್ಟುಕೊಂಡು ಕಷ್ಟಪಟ್ಟು ಓದಿದ್ದಕ್ಕೆ ಈ ಫಲಿತಾಂಶ ಸಿಕ್ಕಿದೆ. ಈ ಸಾಧನೆಯಲ್ಲಿ ನನ್ನ ಕಾಲೇಜಿನ ಉಪನ್ಯಾಸಕರ ಬೆಂಬಲವೂ ದೊಡ್ಡದಿದೆ,” ಎಂದು ದಿಶಾ ಭಾವುಕರಾಗಿ ನುಡಿದಿದ್ದಾರೆ.

ದುಃಖವನ್ನು ಮೆಟ್ಟಿ ನಿಂತು ಸಾಧನೆಯ ಶಿಖರಕ್ಕೇರಿದ ಈ ಹೆಣ್ಣುಮಗಳ ಸಾಧನೆ ಎಲ್ಲರಿಗೂ ಸ್ಫೂರ್ತಿಯಾಗಿದೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ! appeared first on nammatumakuru.