ರಾಷ್ಟ್ರೀಯ ಸುದ್ದಿ Archives - nammatumakuru

ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿಯಲ್ಲಿ ಏಪ್ರಿಲ್ 14ರಂದು ನಡೆಯಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ‘ಅಂಬೇಡ್ಕರ್ ಹಾದಿಯಲ್ಲಿ ನಡಿಗೆ, ಸಂವಿಧಾನಕ್ಕಾಗಿ ನಡಿಗೆ’ ಎಂಬ ಮ್ಯಾರಥಾನ್‌ ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂವಿಧಾನವು ಭಾರತದ ಅಡಿಪಾಯವಾಗಿದೆ. ಸಂವಿಧಾನವಿಲ್ಲದಿದ್ದರೆ ಇಂದು ನಾವು ಭಾರತ ಎಂದು ಕರೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಮನಸ್ಥಿತಿಯ ಜನರು ಇದನ್ನು ಅಳಿಸಿಹಾಕಲು ಸಂಚು ರೂಪಿಸುತ್ತಿದ್ದಾರೆ ಎಂದು ರಾಹುಲ್ ಹೇಳಿದರು.

ಭಾರತದ ಪ್ರತಿಯೊಬ್ಬ ಪ್ರಜೆ ಸಮಾನವಾಗಿ ಬದುಕುವುದು ಬಿಜೆಪಿಗೆ ಇಷ್ಟವಿಲ್ಲ. ಅವರ ಒಳಸಂಚು ಸಂವಿಧಾನವನ್ನು ನಾಶಪಡಿಸುವುದೇ ಆಗಿದೆ. ಅವರು ಅಂಬೇಡ್ಕರ್ ಪ್ರತಿಮೆ ಮುಂದೆ ತಲೆಬಾಗಿದರೂ, ಅವರ ಮನಸ್ಸಿನಲ್ಲಿ ಸಂವಿಧಾನದ ವಿರೋಧಿ ನೀತಿಗಳಿವೆ ಎಂದು ಟೀಕಿಸಿದರು.

ಸಂವಿಧಾನವನ್ನು ರಕ್ಷಿಸುವುದು ಮತ್ತು ಬಲಪಡಿಸುವುದು ನಮ್ಮ ಗುರಿಯಾಗಿದೆ. ಸಾಂವಿಧಾನಿಕ ಮೌಲ್ಯಗಳ ಮೇಲೆ ದಾಳಿ ನಡೆಯುತ್ತಿರುವ ಈ ಸಮಯದಲ್ಲಿ, ಅನ್ಯಾಯ ಮತ್ತು ತಾರತಮ್ಯದ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಅವರು ಕರೆ ನೀಡಿದರು.

ಈ ಕುರಿತು ತಮ್ಮ ಫೇಸ್‌ ಬುಕ್ ಪುಟದಲ್ಲೂ ಬರೆದುಕೊಂಡಿರುವ ರಾಹುಲ್ ಗಾಂಧಿ, ಅಂಬೇಡ್ಕರ್ ಅವರ ಸಂಕಲ್ಪದೊಂದಿಗೆ ಸಂವಿಧಾನ ರಕ್ಷಣೆಗಾಗಿ ನಿಲ್ಲುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ appeared first on nammatumakuru.

ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
ಭಾರತೀಯ ಚಿತ್ರರಂಗದ ದಂತಕಥೆ, ಸುಮಧುರ ಧ್ವನಿಯ ಗಾಯಕಿ ಆಶಾ ಭೋಂಸ್ಲೆ (92) ಅವರು ಭಾನುವಾರ (ಏಪ್ರಿಲ್ 12, 2026) ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆ ಮತ್ತು ಎದೆಯ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಆಶಾ ಭೋಂಸ್ಲೆ ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಆನಂದ್ ಭೋಂಸ್ಲೆ ಖಚಿತಪಡಿಸಿದ್ದಾರೆ. ಈ ಸುದ್ದಿಯು ಸಂಗೀತ ಲೋಕದಲ್ಲಿ ಕಾರ್ಮೋಡ ಕವಿಯುವಂತೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಸೋಮವಾರ ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

1933ರಲ್ಲಿ ಜನಿಸಿದ ಆಶಾ ಅವರು ತಮ್ಮ 9ನೇ ವಯಸ್ಸಿನಲ್ಲೇ ಗಾಯನ ವೃತ್ತಿ ಆರಂಭಿಸಿದ್ದರು. ಸಪ್ತ ದಶಕಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, ಕನ್ನಡ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಭಾಷೆಗಳಲ್ಲಿ 12,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಮೆಲೋಡಿ, ಪಾಪ್, ಗಜಲ್ ಮತ್ತು ಜಾನಪದ ಸೇರಿದಂತೆ ಎಲ್ಲಾ ಪ್ರಕಾರದ ಹಾಡುಗಳಿಗೂ ತಮ್ಮ ಧ್ವನಿಯ ಮೂಲಕ ಜೀವ ತುಂಬಿದ್ದರು.

ಸಂಗೀತ ಕ್ಷೇತ್ರಕ್ಕೆ ಅವರು ನೀಡಿದ ಅಪಾರ ಕೊಡುಗೆಗಾಗಿ ಭಾರತ ಸರ್ಕಾರವು ಅವರಿಗೆ ‘ಪದ್ಮವಿಭೂಷಣ’ ಮತ್ತು ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ನೀಡಿ ಗೌರವಿಸಿದೆ. ಗಿನ್ನೆಸ್ ದಾಖಲೆಯಲ್ಲೂ ಸ್ಥಾನ ಪಡೆದಿದ್ದ ಆಶಾ ಭೋಂಸ್ಲೆ ಅವರ ನಿಧನವು ಭಾರತೀಯ ಸಂಗೀತದ ಒಂದು ಸುವರ್ಣ ಯುಗದ ಅಂತ್ಯವಾಗಿದೆ. ಅವರ ಧ್ವನಿಯು ಎಂದೆಂದಿಗೂ ಅಮರವಾಗಿರುತ್ತದೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ appeared first on nammatumakuru.

ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ದೇಶದಲ್ಲಿ ಎಲ್‌ಪಿಜಿ (LPG) ಕೊರತೆ ಉಂಟಾಗುತ್ತಿದ್ದು, ಕೇಂದ್ರ ಸರ್ಕಾರ ತಕ್ಷಣವೇ ತನ್ನ ವಿದೇಶಾಂಗ ನೀತಿಯಲ್ಲಿ ಬದಲಾವಣೆ ತಂದು ಇತರ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಲು ಮುಂದಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಎಲ್‌ ಪಿಜಿ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸಾಮಾನ್ಯ ಜನರ ಮೇಲೆ ಹೊರೆ: ಗ್ಯಾಸ್ ಕೊರತೆಯಿಂದಾಗಿ ಈಗಾಗಲೇ ಸಣ್ಣ ಹೋಟೆಲ್‌ ಗಳು ಮತ್ತು ಅನೇಕ ಕಾರ್ಖಾನೆಗಳು ಮುಚ್ಚುವ ಹಂತಕ್ಕೆ ತಲುಪಿವೆ. ಇದು ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ.  ಮಧ್ಯಪ್ರಾಚ್ಯದ ಯುದ್ಧದ ಪರಿಸ್ಥಿತಿಯಿಂದಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಆದ್ದರಿಂದ ಸರ್ಕಾರವು ಪರ್ಯಾಯ ಮಾರ್ಗಗಳನ್ನು ಹುಡುಕಬೇಕು ಮತ್ತು ಇತರ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಿ ಅನಿಲ ಆಮದು ಮಾಡಿಕೊಳ್ಳುವ ಮೂಲಕ ಸಮಸ್ಯೆಯನ್ನು ಪರಿಹರಿಸಬೇಕು ಅಂತಾ ಅವರು ಒತ್ತಾಯ ಮಾಡಿದರು.

ಈ ಗಂಭೀರ ವಿಷಯದ ಬಗ್ಗೆ ನಿಯಮ 176ರ ಅಡಿಯಲ್ಲಿ ಸಂಸತ್ತಿನಲ್ಲಿ ಚರ್ಚಿಸಲು ತಾವು ಸಮಯ ಕೋರಿದ್ದರೂ, ಅದಕ್ಕೆ ಸರ್ಕಾರ ಅವಕಾಶ ನೀಡಿಲ್ಲ ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ಈ ವಿಷಯವನ್ನು ಎರಡು ಬಾರಿ ಪ್ರಸ್ತಾಪಿಸಿದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದರು.

ಅನಿಲ ಕೊರತೆಯನ್ನು ಸರಿಯಾಗಿ ನಿರ್ವಹಿಸದಿದ್ದರೆ ದೇಶದ ಆರ್ಥಿಕತೆಗೆ ದೊಡ್ಡ ಮಟ್ಟದ ಹೊಡೆತ ಬೀಳಲಿದೆ ಎಂದು ಅವರು ಎಚ್ಚರಿಸಿದರು. ಗ್ಯಾಸ್ ಲಭ್ಯವಿಲ್ಲದಿದ್ದರೂ ಇದೆ ಎಂದು ಸುಳ್ಳು ಹೇಳುವ ಬದಲು, ವಾಸ್ತವವನ್ನು ಒಪ್ಪಿಕೊಂಡು ಸರಿಪಡಿಸುವ ಕೆಲಸವಾಗಬೇಕು ಎಂದು ಅವರು ಹೇಳಿದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ appeared first on nammatumakuru.

ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವು ಈ ವರ್ಷದ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಮುಂದಿನ ವರ್ಷದಿಂದ ಅವರು ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರ ‘ಅನ್‌ ಲೈಕ್ಲಿ ಪ್ಯಾರಡೈಸ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಜ್ರಿವಾಲ್ ಅವರ ರಾಜಕೀಯ ವಿಶ್ಲೇಷಣೆಯ ಪ್ರಕಾರ, ಇನ್ನು ಕೆಲವೇ ದಿನಗಳಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲಿದ್ದಾರೆ.

ಕೇಂದ್ರದ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರದ ಪ್ರಾಬಲ್ಯ ಕುಸಿಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಟೀಕೆ ಮಾಡಿದವರನ್ನು ಜೈಲಿಗೆ ಕಳುಹಿಸಲಾಗುತ್ತಿತ್ತು, ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಚುನಾವಣೆಗಳಲ್ಲಿ ಗೆಲ್ಲುತ್ತಿರುವುದಕ್ಕೆ ಚುನಾವಣಾ ಆಯೋಗವೇ ಕಾರಣ ಎಂದು ಆರೋಪಿಸಿದ ಕೇಜ್ರಿವಾಲ್, ಮುಂಬರುವ ದಿನಗಳಲ್ಲಿ ಬಂಗಾಳ ಮತ್ತು ಉತ್ತರ ಪ್ರದೇಶದ (2027) ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ appeared first on nammatumakuru.

ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ಒಟ್ಟು 8,931 ದಿನಗಳನ್ನು ಪೂರೈಸುವ ಮೂಲಕ ದೇಶದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಹೊಸ ದಾಖಲೆ ನಿರ್ಮಿಸಿದ್ದಾರೆ.

ಈ ಹಿಂದೆ ಸಿಕ್ಕಿಂ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರು 8,930 ದಿನಗಳ ಕಾಲ ಅಧಿಕಾರ ನಡೆಸುವ ಮೂಲಕ ಈ ದಾಖಲೆ ಹೊಂದಿದ್ದರು. ಇದೀಗ ಪ್ರಧಾನಿ ಮೋದಿ ಅವರು ಚಾಮ್ಲಿಂಗ್ ಅವರ ದಾಖಲೆಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ಮೋದಿ ಅವರ ರಾಜಕೀಯ ಪಯಣದ ಮೈಲುಗಲ್ಲುಗಳು:

7 ಅಕ್ಟೋಬರ್ 2001: ಮೊದಲ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.

ಮೂರು ಬಾರಿ: ಗುಜರಾತ್ ಮುಖ್ಯಮಂತ್ರಿಯಾಗಿ ಸತತ ಸೇವೆ.

26 ಮೇ 2014: ಮೊದಲ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ.

ಪ್ರಸ್ತುತ: ಸತತ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಣೆ.

ಈ ಐತಿಹಾಸಿಕ ಸಾಧನೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಶ್ಲಾಘಿಸಿದ್ದಾರೆ. “ಕಳೆದ 24 ವರ್ಷಗಳಿಂದ ಯಾವುದೇ ರಜೆ ತೆಗೆದುಕೊಳ್ಳದೆ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವ ಮೋದಿ ಅವರ ಬದ್ಧತೆ ಅನನ್ಯವಾದುದು. ಇದು ಅವರಿಗೆ ಜನರ ಮೇಲಿರುವ ಪ್ರೀತಿ ಮತ್ತು ಸಮರ್ಪಣಾ ಭಾವವನ್ನು ತೋರಿಸುತ್ತದೆ” ಎಂದು ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಡವರಿಗೆ ಹಕ್ಕುಗಳನ್ನು ಒದಗಿಸುವುದು, ಅಭಿವೃದ್ಧಿಯ ಹೊಸ ಮೈಲುಗಲ್ಲುಗಳನ್ನು ಸ್ಥಾಪಿಸುವುದು ಮತ್ತು ಜಾಗತಿಕ ವೇದಿಕೆಯಲ್ಲಿ ಭಾರತದ ಘನತೆಯನ್ನು ಹೆಚ್ಚಿಸುವಲ್ಲಿ ಮೋದಿ ಅವರ ಆಡಳಿತ ಪ್ರಮುಖ ಪಾತ್ರ ವಹಿಸಿದೆ ಎಂದು ಬಿಜೆಪಿ ನಾಯಕರು ಅಭಿನಂದಿಸಿದ್ದಾರೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ appeared first on nammatumakuru.

ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ
ನವದೆಹಲಿ: ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, “ಅವರಿಬ್ಬರಿಗೂ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ವಿಶಾಲ ಹೃದಯವಿರಲಿಲ್ಲ” ಎಂದು ಟೀಕಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಪಕ್ಷವು ಜಾತ್ಯತೀತ ತತ್ವಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ದೇವೇಗೌಡರನ್ನು ಪ್ರಧಾನಿಯನ್ನಾಗಿ ಮತ್ತು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ನಮ್ಮ ಪಕ್ಷ ಅವರಿಗೆ ಎಲ್ಲಾ ರೀತಿಯ ಅವಕಾಶಗಳನ್ನು ನೀಡಿತ್ತು. ಆದರೆ, ತಮಗೆ ಸಿಕ್ಕ ಅಧಿಕಾರ ಮತ್ತು ಸ್ಥಾನಮಾನಗಳನ್ನು ನಿಭಾಯಿಸುವ ಸಾಮರ್ಥ್ಯ ಹಾಗೂ ಧೈರ್ಯ ಅವರಿಬ್ಬರಲ್ಲೂ ಇರಲಿಲ್ಲ ಎಂದು ಕಿಡಿಕಾರಿದರು.

“ಮೈತ್ರಿ ಸರ್ಕಾರವನ್ನು ತಾಳ್ಮೆ ಮತ್ತು ಸಂತೋಷದಿಂದ ಮುನ್ನಡೆಸುವುದು ಅವರ ಜವಾಬ್ದಾರಿಯಾಗಿತ್ತು. ಆದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗದ ಕಾರಣಕ್ಕಾಗಿಯೇ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು” ಎಂದು ಶಿವಕುಮಾರ್ ವಿಶ್ಲೇಷಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಎರಡು–ಮೂರು ದಿನಗಳಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ಪ್ರಕಟಿಸಲಿದೆ ಎಂದು ಮಾಹಿತಿ ನೀಡಿದರು. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಸಂಸದರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ವರದಿ ಸಿದ್ಧಪಡಿಸಲಾಗಿದೆ ಎಂದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ appeared first on nammatumakuru.

ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ರಾಜ್ಯಸಭೆಯ ನಿರ್ಗಮಿತ ಸದಸ್ಯರಿಗೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಬುಧವಾರದಂದು ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ರಾಜಕೀಯ ಪಲ್ಲಟಗಳನ್ನು ವ್ಯಂಗ್ಯವಾಗಿ ಟೀಕಿಸುವ ಮೂಲಕ ಎಲ್ಲರ ಗಮನ ಸೆಳೆದರು.

“ನಾನು ದೇವೇಗೌಡರನ್ನು ಕಳೆದ 54 ವರ್ಷಗಳಿಂದ ಬಲ್ಲೆ. ಅವರ ಜೊತೆಗೂಡಿ ಸಾಕಷ್ಟು ಕೆಲಸ ಮಾಡಿದ್ದೇನೆ. ಆದರೆ ಆಮೇಲೆ ಏನಾಯಿತು ಎಂಬುದು ನನಗೆ ತಿಳಿದಿಲ್ಲ. ಅವರು ನಮ್ಮನ್ನು ಪ್ರೇಮಿಸಿದರು (Mohabbat), ಆದರೆ ಮದುವೆಯಾಗಿದ್ದು ಮಾತ್ರ ಪ್ರಧಾನಿ ಮೋದಿ ಅವರನ್ನು,” ಎಂದು ಖರ್ಗೆ ಲಘು ಧಾಟಿಯಲ್ಲಿ ಕುಟುಕಿದರು. ಖರ್ಗೆ ಅವರ ಈ ಮಾತಿಗೆ ರಾಜ್ಯಸಭೆಯಲ್ಲಿ ನಗುವಿನ ಅಲೆ ಎದ್ದಿತು. ಈ ವೇಳೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ನಗುಮುಖದಿಂದಲೇ ಪ್ರತಿಕ್ರಿಯಿಸಿದರು.

ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ದೇಶಸೇವೆ ಮಾಡುವ ಉತ್ಸಾಹ ಎಂದಿಗೂ ಕುಂದುವುದಿಲ್ಲ. ಸಾರ್ವಜನಿಕ ಬದುಕಿನಲ್ಲಿರುವವರಿಗೆ ನಿವೃತ್ತಿ ಎಂಬುದೇ ಇರುವುದಿಲ್ಲ ಎಂದು ಖರ್ಗೆ ಪ್ರತಿಪಾದಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, “ದೇವೇಗೌಡರು, ಮಲ್ಲಿಕಾರ್ಜುನ ಖರ್ಗೆ ಮತ್ತು ಶರದ್ ಪವಾರ್ ಅವರಂತಹ ನಾಯಕರು ತಮ್ಮ ಬದುಕಿನ ಬಹುಭಾಗವನ್ನು ಸಂಸದೀಯ ವ್ಯವಹಾರಗಳಲ್ಲಿ ಕಳೆದಿದ್ದಾರೆ. ಹೊಸದಾಗಿ ಆಯ್ಕೆಯಾದ ಸಂಸದರು ಇಂತಹ ಹಿರಿಯ ನಾಯಕರಿಂದ ಸಾಕಷ್ಟು ಕಲಿಯಬೇಕಿದೆ,” ಎಂದು ಸಲಹೆ ನೀಡಿದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ appeared first on nammatumakuru.

ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ ಗಂಭೀರ ಪರಿಸ್ಥಿತಿಯಲ್ಲೂ ಕಾಂಗ್ರೆಸ್ ಪಕ್ಷವು ಜನರಲ್ಲಿ ಭೀತಿ ಹುಟ್ಟಿಸುವ ಮೂಲಕ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ಅಸ್ಸಾಂನ ಸಿಲ್ಚಾರ್‌ನಲ್ಲಿ ಸುಮಾರು 23,550 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಜಗತ್ತಿನಲ್ಲಿ ನಡೆಯುತ್ತಿರುವ ಯುದ್ಧಗಳ ತಾಪ ದೇಶದ ಜನರ ಮೇಲೆ ತಟ್ಟದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ವಹಿಸುತ್ತಿದೆ. ಆದರೆ ಪ್ರತಿಪಕ್ಷ ಕಾಂಗ್ರೆಸ್ ಜನರಲ್ಲಿ ಭಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಮೋದಿ ಟೀಕಿಸಿದರು.

“ಕಾಂಗ್ರೆಸ್‌ಗೆ ದೇಶದ ಅಥವಾ ಅಸ್ಸಾಂನ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಯಿಲ್ಲ. ಅವರಿಗೆ ಗೊತ್ತಿರುವುದು ಮೋದಿಯನ್ನು ನಿಂದಿಸುವುದು ಮತ್ತು ವದಂತಿಗಳನ್ನು ಹರಡಿ ಜನರನ್ನು ದಾರಿ ತಪ್ಪಿಸುವುದು ಮಾತ್ರ” ಎಂದು ಕಿಡಿಕಾರಿದರು.

ಸ್ವಾತಂತ್ರ್ಯಾನಂತರ ದಶಕಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್, ಬರಾಕ್ ಕಣಿವೆಯ ಅಭಿವೃದ್ಧಿಯನ್ನು ಕಡೆಗಣಿಸಿತ್ತು. ಆದರೆ ಬಿಜೆಪಿ ಸರ್ಕಾರವು ಈಗ ಈ ಭಾಗವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ ಎಂದು ಅವರು ತಿಳಿಸಿದರು.

22,864 ಕೋಟಿ ರೂ. ವೆಚ್ಚದ 166 ಕಿ.ಮೀ ಉದ್ದದ ಸಿಲ್ಚಾರ್-ಶಿಲ್ಲಾಂಗ್ ಎಕ್ಸ್‌ಪ್ರೆಸ್‌ವೇಗೆ ಭೂಮಿ ಪೂಜೆ ನೆರವೇರಿಸಿದರು. ಇದು ಗುವಾಹಟಿ ಮತ್ತು ಸಿಲ್ಚಾರ್ ನಡುವಿನ ಪ್ರಯಾಣದ ಸಮಯವನ್ನು 8.5 ಗಂಟೆಯಿಂದ 5 ಗಂಟೆಗೆ ಇಳಿಸಲಿದೆ ಎಂದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ appeared first on nammatumakuru.

LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
ಫರೂಕಾಬಾದ್ (ಉತ್ತರ ಪ್ರದೇಶ): ಅಡುಗೆ ಅನಿಲ (LPG) ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ 75 ವರ್ಷದ ವೃದ್ಧರೊಬ್ಬರು ತಲೆತಿರುಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಮೊಹಲ್ಲಾ ಮಣಿಹರಿಯ ನಿವಾಸಿ ಮುಖ್ತಾರ್ ಅನ್ಸಾರಿ ಎಂದು ಗುರುತಿಸಲಾಗಿದೆ. ಇವರು ಶುಕ್ರವಾರ ಬೆಳಗ್ಗೆ ಲಾಲ್ ಸರಾಯ್‌ನಲ್ಲಿರುವ ಗ್ಯಾಸ್ ಏಜೆನ್ಸಿಯ ಗೋದಾಮಿನ ಮುಂದೆ ಸಿಲಿಂಡರ್ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಏಕಾಏಕಿ ತಲೆತಿರುಗಿ ಬಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಮುಖ್ತಾರ್ ಅನ್ಸಾರಿ ಅವರು ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ.

ಈ ಘಟನೆಯ ಕುರಿತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಿಲಿಂಡರ್‌ಗಾಗಿ ಸಾಲಿನಲ್ಲಿ ನಿಂತು ವೃದ್ಧರೊಬ್ಬರು ಸಾವನ್ನಪ್ಪಿರುವುದು ಅತ್ಯಂತ ದುರದೃಷ್ಟಕರ. ಬಿಜೆಪಿ ನಾಯಕರು ತಮ್ಮ ಸರ್ಕಾರದ ತಪ್ಪುಗಳಿಂದ ಜನರ ಜೀವ ಹೋಗುತ್ತಿರುವುದನ್ನು ಒಪ್ಪಿಕೊಳ್ಳಬೇಕು” ಎಂದು ಅವರು ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಜಿಲ್ಲಾ ಗ್ಯಾಸ್ ಸರಬರಾಜು ಅಧಿಕಾರಿ ಸುರೇಂದ್ರ ಯಾದವ್ ಅವರು ಪ್ರತಿಕ್ರಿಯಿಸಿ, “ಜಿಲ್ಲೆಯಲ್ಲಿ ಗ್ಯಾಸ್ ಕೊರತೆಯಿಲ್ಲ, ಪೂರೈಕೆ ಸ್ಥಿರವಾಗಿದೆ. ಆ ಏಜೆನ್ಸಿಯಲ್ಲಿ ಹೆಚ್ಚಿನ ಪ್ರಮಾಣದ ಬುಕಿಂಗ್ ಇರುವುದರಿಂದ ವಿತರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯರು ಸಿಲಿಂಡರ್ ಪಡೆಯಲು ತೀವ್ರ ತೊಂದರೆ ಅನುಭವಿಸುತ್ತಿರುವುದಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು! appeared first on nammatumakuru.

ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
ತೆಲಂಗಾಣ: ಭಾರತೀಯ ಸಂಸ್ಕೃತಿಯಲ್ಲಿ ‘ಅತಿಥಿ ದೇವೋ ಭವ’ ಎಂಬ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಕಾಲಘಟ್ಟ ಮತ್ತು ಹೆಚ್ಚುತ್ತಿರುವ ಖರ್ಚು ವೆಚ್ಚಗಳಿಂದಾಗಿ ಮದುವೆ ಸಮಾರಂಭಗಳಲ್ಲಿ ಕರೆಯದೇ ಬರುವ ಅತಿಥಿಗಳು ಆಯೋಜಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದಾರೆ. ಇದೀಗ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಕಲ್ಯಾಣ ಮಂಟಪವೊಂದರ ಮುಂದೆ ಹಾಕಲಾಗಿರುವ ಬೋರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮಹಬೂಬಾಬಾದ್‌ ನ ಕಲ್ಯಾಣ ಮಂಟಪವೊಂದರ ಪ್ರವೇಶ ದ್ವಾರದಲ್ಲಿ ತೆಲುಗು ಭಾಷೆಯ ಎಚ್ಚರಿಕೆ ಫಲಕವೊಂದನ್ನು ಹಾಕಲಾಗಿದೆ. ಇದರಲ್ಲಿ, “ಆಹ್ವಾನವಿಲ್ಲದೇ ಮದುವೆ ಅಥವಾ ಶುಭ ಸಮಾರಂಭಗಳಿಗೆ ಬಂದು ಊಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಬರೆಯಲಾಗಿದೆ.

ಈ ಎಚ್ಚರಿಕೆ ಫಲಕದ ಪ್ರಕಾರ, ಆಹ್ವಾನವಿಲ್ಲದೆ ಬರುವವರಿಗೆ 3 ತಿಂಗಳ ಜೈಲು ಶಿಕ್ಷೆ, 5,000 ರೂಪಾಯಿ ದಂಡ ವಿಧಿಸಲಾಗುವುದು ಅಂತಾ ಬರೆಯಲಾಗಿದೆ.  ಇದನ್ನು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 329 (ಹಳೆಯ ಐಪಿಸಿ ಸೆಕ್ಷನ್ 441 — ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ಜಾರಿಗೆ ತರಲಾಗುವುದು ಎಂದು ಎಚ್ಚರಿಸಲಾಗಿದೆ.

ಸಮಾರಂಭಗಳಿಗೆ ಸಂಬಂಧವಿಲ್ಲದ ನೂರಾರು ಜನರು ಬಂದು ಊಟ ಮಾಡುವುದರಿಂದ, ಆಹ್ವಾನಿತ ಅತಿಥಿಗಳಿಗೆ ಆಹಾರದ ಕೊರತೆಯಾಗುತ್ತಿದೆ. ಅಲ್ಲದೆ, ಇದರಿಂದ ಕಾರ್ಯಕ್ರಮದ ಆಯೋಜಕರಿಗೆ ಆರ್ಥಿಕ ನಷ್ಟವೂ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ತಡೆಗಟ್ಟಲು ಕಲ್ಯಾಣ ಮಂಟಪದ ವ್ಯವಸ್ಥಾಪಕರು ಈ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಈ ಪೋಸ್ಟರ್ ಫೋಟೋ ಇಂಟರ್ನೆಟ್‌ ನಲ್ಲಿ ವೈರಲ್ ಆಗುತ್ತಿದ್ದು, ಕೆಲವರು ಇದು ಸರಿಯಾದ ಕ್ರಮ ಎಂದು ಬೆಂಬಲಿಸಿದರೆ, ಇನ್ನೂ ಕೆಲವರು ಮದುವೆಯಂತಹ ಸಮಾರಂಭಗಳಲ್ಲಿ ಹೀಗೆ ಮಾಡುವುದು ಅತಿಥಿ ಸತ್ಕಾರಕ್ಕೆ ವಿರುದ್ಧ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್ appeared first on nammatumakuru.