ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರ, ಕನ್ನಡಪರ ಸಂಘಟನೆಗಳ ದಂಡು. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಬಂದ್ ನಡೆಯುತ್ತಿದೆ. ಆದರೆ ಸುಮಾರು 175 ಸಂಘಟನೆಗಳು ಬಂದ್ ಗೆ ಬೆಂಬಲ ಘೋಷಿಸಿವೆ.
ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸೋಮವಾರ ಮಧ್ಯರಾತ್ರಿಯಿಂದ 24 ಗಂಟೆಗಳ ಕರ್ಫ್ಯೂ ಘೋಷಿಸಲಾಗಿದೆ. ನೀರು ಬಿಟ್ಟರೆ ಕರ್ನಾಟಕದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ರೈತ ಸಂಘಟನೆಗಳು ಹೇಳುತ್ತಿವೆ. ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿ 29ರಂದು ಕರ್ನಾಟಕ ಬಂದ್ ಆಚರಿಸಲು ನಿರ್ಧರಿಸಿದ್ದಾರೆ.


