ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕಳೆದ 28 ದಿನಗಳಿಂದಲೂ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದ್ದು ಇಂದು ಕೂಡ ನಡೆಯಿತು.
ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕಿವಿಗೆ ಚೆಂಡು ಹೂ ಇಟ್ಟುಕೊಂಡು ರಸ್ತೆ ತಡೆ ನಡೆಸಿದರು.
ಕಾವೇರಿ ನೀರು ನಿರ್ವಹಣ ಪ್ರಾಧಿಕಾರ ಕನ್ನಡಿಗರಿಗೆ ಹೂವು ಮುಡಿಸಿದೆ, ಕರ್ನಾಟಕ ಸರ್ಕಾರ ನಿರಂತರವಾಗಿ ನೀರು ಹರಿಸುವ ಮೂಲಕ ರೈತರು, ಜನರ ಕಿವಿಗೆ ಹೂವು ಮುಡಿಸಿದೆ ಎಂದು ಆಕ್ರೋಶ ಹೊರಹಾಕಿದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸ್ಟಾಲಿನ್ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.


