nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026
    Facebook Twitter Instagram
    ಟ್ರೆಂಡಿಂಗ್
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    ರಾಷ್ಟ್ರೀಯ ಸುದ್ದಿ September 24, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    By Ganesh TumkuruSeptember 24, 2026No Comments1 Min Read
    suprim court

    ನವದೆಹಲಿ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶದಂತೆ ನೀರು ಹರಿಸುವುದನ್ನು ಮುಂದುವರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ತಮಿಳುನಾಡಿನ ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಒಂದು ವಾರದೊಳಗೆ ಅಫಿಡವಿಟ್ ಸಲ್ಲಿಸುವಂತೆ ತಿಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿದೆ.

    ವಿಚಾರಣೆ ವೇಳೆ ರಾಜ್ಯದ ಪರ ವಾದ ಮಂಡಿಸಿದ ವಕೀಲರು, ಕರ್ನಾಟಕದಲ್ಲಿ ಮುಂಗಾರು ವಿಫಲವಾಗಿದ್ದು, ತೀವ್ರ ಬರ ಪರಿಸ್ಥಿತಿ ಎದುರಾಗಿದೆ ಎಂದು ಕೋರ್ಟ್ ಗಮನಕ್ಕೆ ತಂದರು. ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 81 ಟಿಎಂಸಿ ಅಷ್ಟು ನೀರಿದ್ದ ಜಲಾಶಯಗಳಲ್ಲಿ, ಈ ಬಾರಿ ನೀರಿನ ಒಳಹರಿವು ಬಹಳ ಕಡಿಮೆಯಿದೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗುವ ಆತಂಕವಿರುವ ಕಾರಣ, ಈ ಸಂಕಷ್ಟದ ಪರಿಸ್ಥಿತಿಯಲ್ಲಿ CWMA ಆದೇಶವನ್ನು ಸಂಪೂರ್ಣವಾಗಿ ಪಾಲಿಸುವುದು ಕಷ್ಟಸಾಧ್ಯ ಎಂದು ಕರ್ನಾಟಕ ವಿರೋಧ ವ್ಯಕ್ತಪಡಿಸಿದೆ. ಕಾವೇರಿ ಜಲಾನಯನ ಪ್ರದೇಶದಲ್ಲೇ ನೀರಿನ ಕೊರತೆ ಇರುವುದರಿಂದ, ತಮಿಳುನಾಡಿನ ಹೆಚ್ಚುವರಿ ನೀರಿನ ಬೇಡಿಕೆಯ ಅರ್ಜಿಯನ್ನು ವಜಾಗೊಳಿಸುವಂತೆಯೂ ಮನವಿ ಮಾಡಲಾಗಿದೆ.

    ಮತ್ತೊಂದೆಡೆ, ತಮಿಳುನಾಡಿನಲ್ಲಿ ನೀರಿನ ತೀವ್ರ ಕೊರತೆ ಇದ್ದು, ಅಂದಾಜು 4.5 ಲಕ್ಷ ಎಕರೆ ಬೆಳೆಗಳಿಗೆ ನೀರಿನ ತುರ್ತು ಅಗತ್ಯವಿದೆ ಎಂದು ತಮಿಳುನಾಡು ವಾದಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶಗಳನ್ನು ಕರ್ನಾಟಕ ಸಮರ್ಪಕವಾಗಿ ಪಾಲಿಸುತ್ತಿಲ್ಲ ಎಂದು ತಮಿಳುನಾಡು ಕಡೆಯಿಂದ ಆಕ್ಷೇಪ ವ್ಯಕ್ತಪಡಿಸಲಾಗಿದೆ. ನೀರಿನ ಕೊರತೆಯಿಂದಾಗಿ ನಾವು ಈಗಾಗಲೇ ಪೂರ್ವೈ ಬೆಳೆಯನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಿರುವ ತಮಿಳುನಾಡು, ನಿಗದಿತ ಪ್ರಮಾಣಾನುಗುಣವಾಗಿ ನೀರು ಬಿಡುಗಡೆ ಮಾಡುವಂತೆ ಆದೇಶಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    ಹಾವೇರಿ: ಹಾವೇರಿ ತಾಲೂಕಿನ ಹಳೇರಿತ್ತಿ ಬಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಮತ್ತು ಲಾರಿ ನಡುವೆ…

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.