ಬೆಂಗಳೂರು: ಕಾವೇರಿ ನೀರು ಸಂಕಷ್ಟ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಯ ತಾಜ್ ಹೋಟೆಲ್ ನಲ್ಲಿ ಬುಧವಾರ ಕರ್ನಾಟಕದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ಜತೆ ಸಮಾಲೋಚನೆ ನಡೆಸಿದರು.
ರಾಜ್ಯದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಅಭಾವ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಅದೇಶಿಸಿರುವುದರಿಂದ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಡಿ ವಿ ಸದಾನಂದಗೌಡ, ನಳಿನ್ ಕುಮಾರ್ ಕಟೀಲ್, ಶ್ರೀ ವೀರೇಂದ್ರ ಹೆಗ್ಗಡೆ, ಡಿ ಕೆ ಸುರೇಶ್, ಪ್ರತಾಪ್ ಸಿಂಹ, ಪ್ರಜ್ವಲ್ ರೇವಣ್ಣ, ಸುಮಲತಾ ಅಂಬರೀಶ್, ತೇಜಸ್ವಿ ಸೂರ್ಯ, ಜಿ ಸಿ ಚಂದ್ರಶೇಖರ್, ರಾಜ್ಯದ ಸಚಿವರಾದ ಚಲುವರಾಯಸ್ವಾಮಿ, ಎಚ್ ಕೆ ಪಾಟೀಲ್, ಎಚ್ ಸಿ ಮಹದೇವಪ್ಪ, ದೆಹಲಿಯಲ್ಲಿ ಕರ್ನಾಟಕ ಸರಕಾರದ ಪ್ರತಿನಿಧಿ ಟಿ ಬಿ ಜಯಚಂದ್ರ ಸೇರಿದಂತೆ ಬಹುತೇಕ ಸಂಸದರು, ರಾಜ್ಯಸಭೆ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.


