nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    ರಾಜ್ಯ ಸುದ್ದಿ July 31, 2026

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    By Ganesh TumkuruJuly 31, 2026No Comments2 Mins Read
    dk shivakumar

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಸಿ. ವಿಜಯ್ ಜೋಸೆಫ್ ಅವರ ಭೇಟಿಯನ್ನು ಮುಂದೂಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

    ಕಾವೇರಿ ನೀರು ಹಂಚಿಕೆ ಪ್ರಾಧಿಕಾರವು (CWMA) ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ನಿರ್ದೇಶನದಿಂದಾಗಿ ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಉದ್ವಿಗ್ನ ವಾತಾವರಣ ಹಾಗೂ ಪ್ರತಿಭಟನೆಗಳು ಹೆಚ್ಚಾಗಿವೆ. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅಭಿನಯದ ಇತ್ತೀಚಿನ ‘ಜನನಾಯಕನ್’ ಚಿತ್ರದ ಪೋಸ್ಟರ್ಗಳನ್ನು ಹರಿದುಹಾಕಿ, ಕೆಲವು ಕಡೆ ಪ್ರದರ್ಶನವನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ.

    “ಪರಿಸ್ಥಿತಿ ಸಂಪೂರ್ಣ ಶಾಂತವಾದ ಬಳಿಕ, ಉತ್ತಮ ವಾತಾವರಣದಲ್ಲಿ ಸ್ನೇಹಪೂರ್ವಕವಾಗಿ ಸಭೆ ನಡೆಸೋಣ. ಹಾಗಾಗಿ ತಾತ್ಕಾಲಿಕವಾಗಿ ತಮ್ಮ ಭೇಟಿಯನ್ನು ಮುಂದೂಡಬೇಕೆಂದು ತಮಿಳುನಾಡು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ”.  “ಕರ್ನಾಟಕವು ಎಂದಿಗೂ ಎಲ್ಲ ರಾಜ್ಯಗಳ ಜನರನ್ನು ಗೌರವದಿಂದ ಬರಮಾಡಿಕೊಂಡಿದೆ. ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸುವುದು ನಮ್ಮ ಸಂಸ್ಕೃತಿ, ಯಾರ ಭಾವನೆಗೂ ಧಕ್ಕೆ ಆಗಬಾರದು” ಎಂದು ಅವರು ಹೇಳಿದ್ದಾರೆ.

    ಕರ್ನಾಟಕವು ಶಾಂತಿಪ್ರಿಯ ರಾಜ್ಯವಾಗಿದ್ದು, ತಮಿಳುನಾಡಿನ ಸಾವಿರಾರು ಜನರು ಇಲ್ಲಿ ಉದ್ಯೋಗದಲ್ಲಿದ್ದಾರೆ ಹಾಗೂ ಕನ್ನಡಿಗರು ಸಹ ತಮಿಳುನಾಡಿನಲ್ಲಿದ್ದಾರೆ. ಭಾವೋದ್ವೇಗದ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.

    ಮೇಕೆದಾಟು ಸಮತೋಲನ ಜಲಾಶಯ, ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ತಿಳಿಸಿದ ಡಿ.ಕೆ. ಶಿವಕುಮಾರ್, ಇದು ಕೇವಲ 66 ಟಿಎಂಸಿ ಸಾಮರ್ಥ್ಯದ ಸಮತೋಲನ ಜಲಾಶಯವಾಗಿದ್ದು, ಇದರ ನೀರನ್ನು ಹೊಸ ನೀರಾವರಿ ಯೋಜನೆಗಳಿಗೆ ಬಳಸುವ ಅಧಿಕಾರ ಕರ್ನಾಟಕಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

    ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡುವ ಜವಾಬ್ದಾರಿಯನ್ನು ಪುನರುಚ್ಚರಿಸಿರುವ ಸುಪ್ರೀಂ ಕೋರ್ಟ್, ತನ್ನ ಭೂಪ್ರದೇಶದಲ್ಲಿ ಸಮತೋಲನ ಜಲಾಶಯ ನಿರ್ಮಿಸುವ ಹಕ್ಕನ್ನೂ ಕರ್ನಾಟಕಕ್ಕೆ ಮಾನ್ಯ ಮಾಡಿದೆ ಎಂದರು.

    ಮೇಕೆದಾಟು ಯೋಜನೆ ಕುರಿತು ಕೇಳಲಾದ ಕೆಲವು ಸ್ಪಷ್ಟೀಕರಣಗಳನ್ನು ಅಧ್ಯಯನ ಮಾಡಿ ಕಾನೂನು ವ್ಯಾಪ್ತಿಯಲ್ಲಿ ಅಗತ್ಯ ವಿವರಣೆ ಸಲ್ಲಿಸಲಾಗುವುದು ಹಾಗೂ ಕಾವೇರಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

    ಭಾನುವಾರ ರಾಜ್ಯದಲ್ಲಿ ಸರ್ವಪಕ್ಷ ಸಭೆ ನಿಗದಿಯಾಗಿದ್ದು, ಸಭೆಯ ಬಳಿಕ ರಾಜ್ಯದ ಪರಿಸ್ಥಿತಿ ಶಾಂತವಾದ ತಕ್ಷಣ ತಮಿಳುನಾಡು ಮುಖ್ಯಮಂತ್ರಿಯವರನ್ನು ಮಾತುಕತೆಗೆ ಮತ್ತೊಮ್ಮೆ ಆಹ್ವಾನಿಸುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

    September 13, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ…

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.