nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ತಿಪಟೂರಿನಲ್ಲಿ ಸಿ.ಬಿ.ಶಶಿಧರ್ ಟೂಡಾ ಏಕವ್ಯಕ್ತಿ ಪ್ರತಿಭಟನೆ
    ತಿಪಟೂರು January 25, 2026

    ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ತಿಪಟೂರಿನಲ್ಲಿ ಸಿ.ಬಿ.ಶಶಿಧರ್ ಟೂಡಾ ಏಕವ್ಯಕ್ತಿ ಪ್ರತಿಭಟನೆ

    By adminJanuary 25, 2026No Comments2 Mins Read
    c b shashidhar

    ತಿಪಟೂರು:  ರಾಜ್ಯಪಾಲರು ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ನಿರಾಕರಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಗಂಭೀರ ದಾಳಿ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಬಿ.ಶಶಿಧರ್ ಟೂಡಾ ಅವರು ತೀವ್ರವಾಗಿ ಖಂಡಿಸಿದರು.

    ತಿಪಟೂರು ನಗರಸಭೆ ವೃತ್ತದ ಎದುರು ಯಾವುದೇ ಪಕ್ಷದ ಧ್ವಜ, ವೇದಿಕೆ ಅಥವಾ ಮೈಕ್ ಇಲ್ಲದೆ, ಒಬ್ಬರೇ ಭಿತ್ತಿ ಪತ್ರ ಹಿಡಿದು ನಡೆಸಿದ ಏಕವ್ಯಕ್ತಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು“ನಾನು ಇಂದು ಇಲ್ಲಿ ಒಬ್ಬನೇ ನಿಂತಿದ್ದೇನೆ. ಆದರೆ ನನ್ನ ಹಿಂದೆ ಕರ್ನಾಟಕದ ಜನತೆಯ ಧ್ವನಿ ಇದೆ. ಇದು ಯಾವುದೇ ವ್ಯಕ್ತಿಯ ವಿರುದ್ಧದ ಹೋರಾಟವಲ್ಲ, ಯಾವುದೇ ಹುದ್ದೆಯ ವಿರುದ್ಧದ ಆಕ್ರೋಶವಲ್ಲ. ಇದು ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಆಕ್ರಮಣದ ವಿರುದ್ಧದ ಹೋರಾಟ” ಎಂದು ಹೇಳಿದರು.


    Provided by
    Provided by

    ರಾಜ್ಯಪಾಲರು ವಿಧಾನಸಭೆಯಲ್ಲಿ ಮಾತನಾಡಲು ನಿರಾಕರಿಸಿರುವುದು ಸಣ್ಣ ಅಥವಾ ತಾಂತ್ರಿಕ ವಿಚಾರವಲ್ಲ. ಅದು ಜನರಿಂದ ಆಯ್ಕೆಯಾದ ಸರ್ಕಾರದ ಧ್ವನಿಯನ್ನು ಮೌನಗೊಳಿಸುವ ಪ್ರಯತ್ನವಾಗಿದೆ. ಇದು ವಿಧಾನಸಭೆಯ ಗೌರವವನ್ನು ತುಳಿಯುವ ನಡೆ ಮತ್ತು ಪ್ರಜಾಪ್ರಭುತ್ವದ ಮೇಲೆ ನೇರ ದಾಳಿ ಎಂದು ಸಿಬಿ ಶಶಿಧರ್ ಕಿಡಿಕಾರಿದರು.

    “ರಾಜ್ಯಪಾಲರು ಮಾತನಾಡುವುದು ಅವರ ಆಯ್ಕೆಯಲ್ಲ. ಅದು ಅವರ ಸಂವಿಧಾನಾತ್ಮಕ ಕರ್ತವ್ಯ. ಆ ಕರ್ತವ್ಯವನ್ನು ನಿರಾಕರಿಸುವ ಹಕ್ಕು ಯಾರಿಗೂ ಇಲ್ಲ. ಈ ಸರ್ಕಾರವನ್ನು ದಿಲ್ಲಿ ನೇಮಿಸಿಲ್ಲ, ರಾಜಭವನ ನೇಮಿಸಿಲ್ಲ. ಈ ಸರ್ಕಾರವನ್ನು ಕನ್ನಡಿಗರು ತಮ್ಮ ಮತದ ಮೂಲಕ ಆಯ್ಕೆ ಮಾಡಿದ್ದಾರೆ. ಕೋಟ್ಯಾಂತರ ಜನರ ಮತದಿಂದ ಬಂದ ಸರ್ಕಾರದ ಮಾತನ್ನು ಒಂದು ಹುದ್ದೆ ತಳ್ಳಿಹಾಕಿದರೆ, ಅದು ಸರ್ಕಾರದ ಅವಮಾನವಲ್ಲ — ಜನತೆಯ ಅವಮಾನ” ಎಂದು ಅವರು ಹೇಳಿದರು.

    ಇಂದು ಮಾತನಾಡಲು ನಿರಾಕರಿಸಿದವರು ನಾಳೆ ಸರ್ಕಾರದ ತೀರ್ಮಾನಗಳಿಗೆ ಅಡ್ಡಿ ಮಾಡಬಹುದು, ಮುಂದಿನ ದಿನಗಳಲ್ಲಿ ವಿಧಾನಸಭೆಯನ್ನೇ ಅರ್ಥಹೀನಗೊಳಿಸುವ ಅಪಾಯಕಾರಿ ದಾರಿಯಿದು. ಇದು ಪ್ರಜಾಪ್ರಭುತ್ವವನ್ನು ನಿಧಾನವಾಗಿ ಕೊಲ್ಲುವ ದಾರಿ ಎಂದು ಎಚ್ಚರಿಸಿದರು.

    “ನಾನು ಇಲ್ಲಿ ನಿಂತಿರುವುದು ಗಲಾಟೆ ಮಾಡಲು ಅಲ್ಲ, ಯಾರನ್ನೂ ಕೆರಳಿಸಲು ಅಲ್ಲ. ಎಚ್ಚರಿಕೆ ನೀಡಲು. ನಾವು ಮೌನವಾಗಿದ್ದರೆ ಇದು ರೂಢಿಯಾಗುತ್ತದೆ. ನಾವು ಒಪ್ಪಿಕೊಂಡರೆ ಇದು ಕಾನೂನಾಗುತ್ತದೆ. ನಾನು ಒಬ್ಬನೇ ನಿಂತಿದ್ದೇನೆ ಅನ್ನಬಹುದು, ಆದರೆ ನನ್ನ ಜೊತೆ ಮತ ಹಾಕಿದ ರೈತ ಇದ್ದಾನೆ, ತೆರಿಗೆ ಕೊಡುವ ಕಾರ್ಮಿಕ ಇದ್ದಾನೆ, ಭವಿಷ್ಯ ಕನಸು ಕಟ್ಟಿದ ಯುವಕ ಇದ್ದಾನೆ, ಗೌರವದ ಬದುಕು ಬಯಸುವ ಮಹಿಳೆ ಇದ್ದಾಳೆ. ಇದು ಅವರ ಧ್ವನಿ” ಎಂದು ಹೇಳಿದರು.

    ರಾಜ್ಯಪಾಲರ ಹುದ್ದೆಗೆ ಅವಮಾನ ಮಾಡುವ ಉದ್ದೇಶ ನನಗಿಲ್ಲ. ಆದರೆ ಸಂವಿಧಾನ ಮೀರಿದ ನಡೆ. ಯಾರಿಂದ ಬಂದರೂ ಅದು ತಪ್ಪೇ. ಇದು ಪಕ್ಷ ರಾಜಕಾರಣದ ಪ್ರಶ್ನೆಯಲ್ಲ, ಅಧಿಕಾರದ ಪ್ರಶ್ನೆಯಲ್ಲ. ಇದು ನಮ್ಮ ಹಕ್ಕಿನ ಪ್ರಶ್ನೆ, ನಮ್ಮ ಪ್ರಜಾಪ್ರಭುತ್ವದ ಪ್ರಶ್ನೆ ಎಂದು ಸಿಬಿ ಶಶಿಧರ್ ಸ್ಪಷ್ಟಪಡಿಸಿದರು.

    ಪ್ರತಿಭಟನೆಯ ಅಂತ್ಯದಲ್ಲಿ ಅವರು, “ಪ್ರಜಾಪ್ರಭುತ್ವ ಭಿಕ್ಷೆಯಲ್ಲ. ಅದು ಜನರ ಹಕ್ಕು. ಆ ಹಕ್ಕಿನ ಮೇಲೆ ಯಾರೇ ಕೈ ಹಾಕಿದರು ನಾವು ಮೌನವಾಗಿರುವುದಿಲ್ಲ.  ಜೈ ಸಂವಿಧಾನ.  ಜೈ ಪ್ರಜಾಪ್ರಭುತ್ವ. ಜೈ ಕರ್ನಾಟಕ” ಎಂದು ಘೋಷಿಸಿದರು.

    ವರದಿ: ಆನಂದ್ ತಿಪ್ಟೂರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ

    March 12, 2026

    ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ

    March 3, 2026

    ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್

    February 24, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ…

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.