ತುಮಕೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣದ ಕುರಿತು ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಹೈಕೋರ್ಟ್ ತೀರ್ಪನ್ನ ಸ್ವಾಗತಿಸುತ್ತೇನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅದು ಒಳ್ಳೆದಲ್ವಾ ನಾವು ಅದನ್ನೇ ಬಯಸಿದ್ವಿ.
ಹಿಂದೆ ಬಿಜೆಪಿ ಸರ್ಕಾರ ತಪ್ಪು ಮಾಡಿದ್ದರು. ಸ್ಪೀಕರ್ ಅನುಮತಿ ಇಲ್ಲದೆ ಪ್ರಕರಣ ಸಿಬಿಐಗೆ ಕೊಟ್ಟಿದ್ರು ಅಂತ ಕೇಸ್ ವಾಪಸ್ ಪಡೆದಿದ್ದೆವು ಎಂದರು.
ಸರ್ಕಾರದ ಆದೇಶವನ್ನು ಹೈಕೋರ್ಟ್ ಗೆ ಕಮ್ಯುನಿಕೇಟ್ ಮಾಡಿದ್ವಿ. ಅದಕ್ಕೆ ರಿಲೀಫ್ ಸಿಕ್ಕಿದೆ ಅಂದ್ರೆ, ಬಹಳ ಸಂತೋಷ ಎಂದರು.