10 ಮತ್ತು 12ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ತರ ತೀರ್ಪು ನೀಡಿದೆ. . 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE Exam Latest Update) ನಡೆಸಲಿರುವ 10 ಮತ್ತು 12 ನೇ ತರಗತಿಯ ‘ಆಫ್‌ಲೈನ್’ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಐಸಿಎಸ್‌ಇ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ನಡೆಸುವ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೂಡಾ ನ್ಯಾಯಾಲಯ ವಜಾಗೊಳಿಸಿದೆ.
ಆನ್‌ಲೈನ್ ಪರೀಕ್ಷೆ ನಡೆಸುವಂತೆ ಅರ್ಜಿಗಳನ್ನು ಸಲ್ಲಿಸಲಾಗಿತ್ತು:
10 ಮತ್ತು 12ನೇ ತರಗತಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ (Supreme court)ಅರ್ಜಿ ಸಲ್ಲಿಸಲಾಗಿದ್ದು, ಆನ್‌ಲೈನ್‌ನಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಒತ್ತಾಯಿಸಲಾಗಿತ್ತು. ಕಳೆದ ವರ್ಷದಂತೆ ಪರೀಕ್ಷೆ ನಡೆಸಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು (CBSE Exam Latest Update). ಈ ಅರ್ಜಿಗಳು ವಿದ್ಯಾರ್ಥಿಗಳ ಹಾಡಿ ತಪ್ಪಿಸುತ್ತಿವೆ ಮಾತ್ರವಲ್ಲ ವಿದ್ಯಾರ್ಥಿಗಳಿಗೆ ಸುಳ್ಳು ಭರವಸೆ ನೀಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್, ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಸಿ.ಟಿ.ರವಿಕುಮಾರ್ ಅವರಿದ್ದ ಪೀಠವು ಈ ಅರ್ಜಿಯನ್ನು ಪರಿಗಣಿಸುವುದು ಎಂದರೆ ಇನ್ನಷ್ಟು ಗೊಂದಲವನ್ನು ಸೃಷ್ಟಿಸುತ್ತದೆ ಎಂದರ್ಥ ಎಂದು ಹೇಳಿದೆ. ಈಗಾಗಲೇ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೆಸರಿನಲ್ಲಿ ಈ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಮೂಡಿಸಿದ್ದಾಗಿದೆ ಎಂದು ಕೋರ್ಟ್ (Supreme court) ಹೇಳಿದೆ.
ಏಪ್ರಿಲ್ 26 ರಿಂದ ಪರೀಕ್ಷೆ ಪ್ರಾರಂಭ :
ಇತರೆ ವಿಧಾನಗಳ ಮೂಲಕ ಪರೀಕ್ಷೆ ನಡೆಸಲು CBSE ಹಾಗೂ ವಿವಿಧ ಶಿಕ್ಷಣ ಮಂಡಳಿಗಳಿಗೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿತ್ತು. CBSE ಮತ್ತು ಇತರ ಶಿಕ್ಷಣ ಮಂಡಳಿಗಳು 10 ನೇ ಮತ್ತು 12 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಆಫ್‌ಲೈನ್ ಮೋಡ್ ಮೂಲಕ ನಡೆಸಲು ಪ್ರಸ್ತಾಪಿಸಿವೆ. CBSE ಏಪ್ರಿಲ್ 26 ರಿಂದ 10 ಮತ್ತು 12 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB