ಕೊರಟಗೆರೆ: ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊರಟಗೆರೆ ತಾಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಲಗನಹಳ್ಳಿ ಗ್ರಾಮದ ಬಳಿ ನಡೆದಿದೆ.
ರೆಡ್ಡಿಹಳ್ಳಿ ಗ್ರಾಮದ ವೆಂಕಟಶಾಮಯ್ಯ ಎನ್ನುವರ ಪುತ್ರ ನವೀನ್ (28) ಮೃತಪಟ್ಟ ಯುವಕನಾಗಿದ್ದಾನೆ. ಕೊರಟಗೆರೆ ಮಾರ್ಗದಿಂದ ಅತಿವೇಗದಿಂದ ಬರುತ್ತಿದ್ದ ಲಾರಿ, ರೆಡ್ಡಿಹಳ್ಳಿ ಗ್ರಾಮದಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಲಾರಿಯಡಿಗೆ ಸಿಲುಕಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಲಾರಿ ಚಾಲಕನ ಅತೀಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತ ನವೀನ್ ವಿವಾಹವಾಗಿ ನಾಳೆಗೆ ಒಂದು ವರ್ಷವಾಗಲಿದೆ. ಈ ನಡುವೆ ನವೀನ್ ನನ್ನು ಕಳೆದುಕೊಂಡಿರುವ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದು, ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA