ಬೆಂಗಳೂರು: ರಮೇಶ್ ಜಾರಕಿಹೊಳಿ ಮತ್ತು ನಾನು ಹಲವಾರು ಕಾರ್ಯಕ್ರಮಗಳ ನಿಮಿತ್ಯ ಎರಡು ದಿನಗಳ ಕಾಲ ಜೊತೆಯಾಗಿದ್ದೇವೆ ಆದರೆ ಸಿಡಿ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೆ ರೀತಿಯ ಮಾತುಕತೆಯಾಗಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡಿರುವುದರಿಂದ ಯಾವುದೆ ಮಾತುಕತೆಗೆ ಸಮಯ ಸಿಕ್ಕಿಲ್ಲ. ಶಾಸಕ ರಮೇಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ವಿರುದ್ಧ ಹಲವಾರು ಅರೋಪಗಳನ್ನು ಮಾಡಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಾಗಿ ಹೇಳಿರುವ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತನ್ನ ಕೆಲಸ ಮಾಡುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


