nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026
    Facebook Twitter Instagram
    ಟ್ರೆಂಡಿಂಗ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    • ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ
    • ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    ಜಿಲ್ಲಾ ಸುದ್ದಿ August 13, 2025

    ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    By adminAugust 13, 2025No Comments2 Mins Read
    police

    ಸರಗೂರು: ಗಣೇಶ ಹಾಗೂ ಬಕ್ರೀದ್ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಬೇಕು. ದೇವರ ಹೆಸರಿನಲ್ಲಿ ಪೈಪೋಟಿ, ನಿಯಮಬಾಹಿರ ಧ್ವನಿ ವರ್ಧಕ ಅಳವಡಿಕೆ, ಇಸ್ಪೀಟ್, ಜೂಜಾಟ ಸೇರಿ ಯಾವುದೇ ಅಹಿತಕರ ಘಟನೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಂತಿಪಾಲನೆಗೆ ಸಾರ್ವಜನಿಕರು ಇಲಾಖೆಯೊಂದಿಗೆ ಕೈ ಜೋಡಿಸಬೇಕು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್  ಹೇಳಿದರು.

    ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಗೌರಿಗಣೇಶ ಹಾಗೂ ಬಕ್ರೀದ್ ಹಬ್ಬದ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಶಾಂತಿ ಸಭೆಯ ಉದ್ದೇಶಿಸಿ ಅವರು ಮಾತನಾಡಿದರು.


    Provided by
    Provided by

    25 ಮತ್ತು 26 ರಂದು ನಡೆಯುವ ಗೌರಿ–ಗಣೇಶ ಹಬ್ಬವನ್ನು ಎಲ್ಲರೂ ಶಾಂತಿ ಸೌಹಾರ್ದಯುತವಾಗಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಅನ್ಯೂನ್ಯತೆಯಿಂದ   ಹಬ್ಬ ಆಚರಿಸಬೇಕು,  ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಸ್ಥಳೀಯ ಆಡಳಿತದಲ್ಲಿ, ಅಗ್ನಿಶಾಮಕ ಠಾಣೆ, ವಿದ್ಯುತ್ ಇಲಾಖೆ ಹಾಗೂ ಧ್ವನಿವರ್ಧಕ ಅಳವಡಿಸಲು ತಹಶೀಲ್ದಾರ್ ಅನುಮತಿ ಪಡೆದು ಪೊಲೀಸರು ನೀಡುವ ಸಲಹೆ ಸೂಚನೆ ಪಾಲಿಸಬೇಕು. ಅನುಮತಿ ನೀಡಲಾಗುವ ಸಮಯದಲ್ಲಿ ಗಣಪತಿ ವಿಸರ್ಜನೆ ಮಾಡಬೇಕು. ಗ್ರಾಮಗಳಲ್ಲಿ ಯಾವುದೇ ಸಂದರ್ಭದಲ್ಲಿ ಡಿಜೆ ಬಳಸಬಾರದು’ ಎಂದು ತಿಳಿಸಿದರು.

    ಪಿಎಸ್‌ ಐ ಆರ್.ಕಿರಣ್ ಮಾತನಾಡಿ, ಠಾಣಾ ವ್ಯಾಪ್ತಿಯಲ್ಲಿ ಯಾವ ಊರುಗಳಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಮಾಡುತ್ತಾರೆ ಅನುಮತಿ ನೀಡಲಾಗುವುದು. ಕಡ್ಡಾಯವಾಗಿ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಂಡರು.

    ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ನಾಲ್ಕು ದಿನಗಳ ಮುಂಚಿತವಾಗಿ ಅನುಮತಿ ಪಡೆದುಕೊಳ್ಳಬೇಕು. ಅಂತಹ ಮೂರ್ತಿಗಳಿಗೆ ಮಾತ್ರ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಪೊಲೀಸ್ ಇಲಾಖೆ ಅನುಮತಿ ಪಡೆಯತಕ್ಕದ್ದು. ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ವಿದ್ಯುತ್ ಸಂಪರ್ಕಕ್ಕಾಗಿ ಕೆಇಬಿ ನಿಂದ ಪರವಾನಗಿ ಪಡೆಯಬೇಕು. ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು. ನಿಗದಿಪಡಿಸಿದ ದಿನದಂದು ಗಣೇಶ ವಿಸರ್ಜನೆ ಮಾಡಬೇಕು. ನಿಗದಿಪಡಿಸಿದ ರಸ್ತೆ ಮಾರ್ಗ ಬದಲಿಸಬಾರದು. ಖಾಸಗಿ ಬಾವಿಯಲ್ಲಿ ವಿಸರ್ಜನೆ ಮಾಡಬೇಕಾದರೆ, ಆ ಬಾವಿಯ ಮಾಲೀಕರ ಅನುಮತಿ ಪಡೆದಿರಬೇಕು. ಅಶ್ಲೀಲ ಹಾಡು, ನತ್ಯ ಕಾರ್ಯಕ್ರಮಗಳು ನಡೆದಲ್ಲಿ ಸಂಬಂಧಪಟ್ಟ ಸಂಘ–ಸಂಸ್ಥೆಯ ಪದಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಕೋಮುಸೌಹಾರ್ದತೆಗೆ ಧಕ್ಕೆ ತರುವ ಹಾಡುಗಳನ್ನು ಹಾಕಬಾರದು ಎಂದರು.

    ಈ ಸಂದರ್ಭದಲ್ಲಿ ಕ್ರೈಂ ಬ್ರಾಂಚ್ ಇನ್‌ ಸ್ಪೆಕ್ಟರ್ ಗೋಪಾಲ್, ಪಪಂ ಸದಸ್ಯ ಶ್ರೀನಿವಾಸ, ಪೊಲೀಸ್ ಠಾಣೆಯ ಸಿಬ್ಬಂದಿ ಪುರುಷೋತ್ತಮ್, ಕೃಷ್ಣಕುಮಾರ್, ಶಿವಕುಮಾರ್, ನಾರಾಯಣ, ಇಮ್ರಾನ್, ಜಗದೀಶ್, ಕೃಷ್ಣಯ್ಯ, ಶಿವರಾಜು, ದೇವರಾಜು, ಶೋಭಾ, ಉಷಾ, ಮಹಾದೇವಮ್ಮ, ಸುನೀಲ್, ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕಂಪನಿಯೊಂದರ ಲೆಟರ್ ಹೆಡ್, ಮೊಹರು, ಸಹಿ ನಕಲು ಮಾಡಿ ಸುಳ್ಳು ಅನುಭವ ಪ್ರಮಾಣ ಪತ್ರ ಪಡೆದ ಆರೋಪದ ಮೇರೆಗೆ…

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.