ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವಿನ ಹಿನ್ನೆಲೆಯಲ್ಲಿ ಕೊರಟಗೆರೆ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು.

ಬಿಜೆಪಿ ಮುಖಂಡ ಬಿ.ಹೆಚ್. ಅನಿಲ್ ಕುಮಾರ್ ಹಾಗೂ ಜೆಡಿಎಸ್ ಮುಖಂಡ ನರಸಿಂಹರಾಜು ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು.
ಕೊರಟಗೆರೆ ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಪಾಂಚಜನ್ಯ ಕಛೇರಿಯವರೆಗೂ ಮುಖ್ಯ ರಸ್ತೆಯಲ್ಲಿ ಬೈಕ್ ರ್ಯಾಲಿ ನಡೆಸುವ ಮೂಲಕ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ನಂತರ ಪಾಂಚಜನ್ಯ ಕಛೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಮುಖಂಡ ಅನಿಲ್ ಕುಮಾರ್ ಹಾಗೂ ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನರಸಿಂಹರಾಜು, “ಈ ಬಾರಿ ನಾವು ಕೊರಟಗೆರೆ ಕ್ಷೇತ್ರದಿಂದ ಸುಮಾರು 25 ಸಾವಿರ ಅಂತರ ನೀಡಿದ್ದೇವೆ. ಇದೇ ರೀತಿ ನಾವು ಮುಂದಿನ ದಿನಗಳಲ್ಲಿ ಕೆಲಸ ಮಾಡಿದರೆ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಧೂಳಿಪಟ ಮಾಡುತ್ತೇವೆ. ಆದ್ದರಿಂದ ಇದೇ ರೀತಿ, ಎರಡೂ ಪಕ್ಷಗಳು ಪವಿತ್ರ ಮೈತ್ರಿ ಮಾಡಿಕೊಳ್ಳುವ ಮೂಲಕ ಸ್ಥಳೀಯ ಚುನಾವಣೆ ಯಲ್ಲಿ ಜಯಭೇರಿ ಬಾರಿಸುತ್ತೇವೆ. ಜಿಲ್ಲೆಯಲ್ಲಿ ನಾವು ಬಹಳ ಹೆಚ್ಚು ಅಂತರ ನೀಡಿದ್ದೇವೆ. ಇದು ಕಾಂಗ್ರೆಸ್ ಪಕ್ಷ ಊಹಿಸಲು ಸಾಧ್ಯವಿಲ್ಲದಷ್ಟು ನಾವು ಅಂತರ ನೀಡಿದ್ದೇವೆ” ಎಂದು ಹೇಳಿದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


