ತಿಪಟೂರು : ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ಜತೆಗೆ ಜ್ಞಾನ, ಅರಿವು ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಗ್ರಂಥಾಲಯಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ನಿವೃತ್ತ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಕುಮಾರಸ್ವಾಮಿ ತಿಳಿಸಿದರು.
ನಗರದ ಶಾಖಾ ಗ್ರಂಥಾಲಯದಲ್ಲಿ ಆಯೋಜಿಸಿದ್ದ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಓದಿಗೆ ಮಾತ್ರ ಸೀಮಿತವಾಗದೆ ದಿನಪತ್ರಿಕೆ, ಕಥೆ, ಕಾದಂಬರಿ, ಜೀವನ ಚರಿತ್ರೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಗ್ರಂಥಾಲಯಗಳನ್ನು ಸದ್ಬಳಕೆ ಮಾಡಿಕೊಂಡು ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಭಾರ ದಾರಕರಾದ ಡಿ.ಎಸ್. ಚಂದ್ರಶೇಖರ್, ಶೋಭಾ, ಕವಿತಾ ಸೇರಿದಂತೆ ಗ್ರಂಥಾಲಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
