nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    • ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
    • ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
    • ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
    • ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
    • ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರಿನ ಗ್ರಾಮೀಣ ಮಹಿಳಾ ಆರೋಗ್ಯಕ್ಕಾಗಿ ಪ್ರಾರಂಭವಾದ ನಮ್ಮ ಆರೋಗ್ಯ ಕೇಂದ್ರಗಳಿಗೆ ವರ್ಷದ ಸಂಭ್ರಮ
    ಜಿಲ್ಲಾ ಸುದ್ದಿ December 8, 2023

    ತಿಪಟೂರಿನ ಗ್ರಾಮೀಣ ಮಹಿಳಾ ಆರೋಗ್ಯಕ್ಕಾಗಿ ಪ್ರಾರಂಭವಾದ ನಮ್ಮ ಆರೋಗ್ಯ ಕೇಂದ್ರಗಳಿಗೆ ವರ್ಷದ ಸಂಭ್ರಮ

    By adminDecember 8, 2023No Comments3 Mins Read
    thipatooru

    ಗ್ರಾಮೀಣ ಮಹಿಳೆಯರಿಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ಸದುದ್ದೇಶದಿಂದ ತಿಪಟೂರಿನಲ್ಲಿ ಪ್ರಾರಂಭವಾಗಿರುವ ನಮ್ಮ ಆರೋಗ್ಯ ಕೇಂದ್ರಗಳಿಗೆ ಯಶಸ್ವಿ ಮೊದಲ ವರ್ಷದ ಹರ್ಷ. ನಮ್ಮ ಆರೋಗ್ಯ ಕೇಂದ್ರಗಳು ಆರಂಭವಾಗಿ ಇಂದಿಗೆ ಒಂದು ವರ್ಷ ಪೂರೈಸಿದೆ. ಈ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳುವುದಕ್ಕೆ ನಾವು ನಿಜಕ್ಕೂ ಹೆಮ್ಮೆಪಡುತ್ತೇವೆ.

    ತಿಪಟೂರಿನ ಹಾಲ್ಕುರಿಕೆ ಗ್ರಾಮದಲ್ಲಿ ಮೊದಲ ಬಾರಿಗೆ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲಾಯಿತು. ನಂತರ ಕೆ.ಬಿ ಕ್ರಾಸ್ ನಲ್ಲಿ ಇನ್ನೊಂದು ಆರೋಗ್ಯ ಕೇಂದ್ರದ ಘಟಕವನ್ನು ಆರಂಭಿಸಲಾಯಿತು. ಈ ಎರಡು ಘಟಕಗಳು ನೂರಾರು ಮಹಿಳೆಯರ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವಾರು ರೀತಿಯಲ್ಲಿ ಇಂದು ವರ್ಷದಿಂದ ಯಶಸ್ವಿಯಾಗಿ ಮತ್ತು ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಇದು ತುಮಕೂರು ಜಿಲ್ಲೆಯಲ್ಲಿಯೇ ಮೊದಲ ಖಾಸಗಿ ಯೋಜನೆಯಾಗಿದೆ ಎಂಬುದು ನಮ್ಮ ಹೆಮ್ಮೆ.


    Provided by
    Provided by

    ‘ನಮ್ಮ ಆರೋಗ್ಯ ಕೇಂದ್ರ’ ಸ್ಥಾಪಿಸಿದ ಕೀರ್ತಿ ಜನಸ್ಪಂದನ ಟ್ರಸ್ಟ್ ಗೆ ಸಲ್ಲುತ್ತದೆ. ಜನಸ್ಪಂದನ ಟ್ರಸ್ಟ್ ಮುಖ್ಯಸ್ಥ ಮತ್ತು ಕಾಂಗ್ರೆಸ್ ಮುಖಂಡ ಸಿ.ಬಿ. ಶಶಿಧರ್ ಟುಡ, ನಮ್ಮ ಆರೋಗ್ಯ ಕೇಂದ್ರದ ಸಹ ಸಂಸ್ಥಾಪಕರು ಮತ್ತು ಆರ್ಟಿಸ್ಟ್ ಫಾರ್ ಹರ್ ನ ಸಿಇಒ ಡಾ.ಹೇಮಾ ದಿವಾಕರ್, ಎಂಜೆಎಸ್ಪಿಆರ್ ನ ಮುಖ್ಯಸ್ಥ ಮತ್ತು ನಮ್ಮ ಆರೋಗ್ಯ ಕೇಂದ್ರದ ಸಹ ಸಂಸ್ಥಾಪಕ ಹಾಗೂ ಜನಸ್ಪಂದನ ಟ್ರಸ್ಟ್ ನ ಟ್ರಸ್ಟಿಯಾದ ಶ್ರೀ ಎಂ. ಜೆ. ಶ್ರೀಕಾಂತ್ ಅವರು ನಮ್ಮ ಆರೋಗ್ಯ ಕೇಂದ್ರದ ಸ್ಥಾಪನೆಯ ನೇತೃತ್ವ ವಹಿಸಿದ್ದರು.

    ನಮ್ಮ ಆರೋಗ್ಯ ಕೇಂದ್ರವು ಸೋಮವಾರ- ಶುಕ್ರವಾರದಿಂದ 3 ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತದೆ. ನಮ್ಮ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಬಿಪಿ, ಶುಗರ್ ಪರೀಕ್ಷೆ, ಜ್ವರ ತಪಾಸಣೆ ಮಾಡಲಾಗುತ್ತದೆ. ಆರೋಗ್ಯ ಸಖಿಯರು ‘ಹೆಲ್ತ್ ಫಾರ್ ಹರ್’ ಆ್ಯಪ್ ಮೂಲಕ ರೋಗಿಗಳನ್ನು ಒಬಿಜಿ ತಜ್ಞರೊಂದಿಗೆ ಸಂಪರ್ಕಿಸಿ ಪರಿಹಾರಗಳನ್ನು ಪಡೆಯಲು ನೆರವಾಗುತ್ತಾರೆ. ವೈದ್ಯಕೀಯ ಸಹಾಯಕ್ಕಾಗಿ ನಮ್ಮ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವ ಮಹಿಳೆಯರು ಆರೋಗ್ಯ ಸಖಿಗಳಿಂದ ಮಾರ್ಗದರ್ಶನ ಮತ್ತು ಸಲಹೆಗಳನ್ನು ಪಡೆಯುತ್ತಾರೆ.

    ನಮ್ಮ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಆರೋಗ್ಯ ಸಖಿಯರು ಹೇಮಾ ದಿವಾಕರ್ ನೇತೃತ್ವದ ಆರ್ಟಿಸ್ಟ್ ಫಾರ್ ಹರ್ ಸಂಸ್ಥೆಯಿಂದ ತರಬೇತಿ ಪಡೆಯುತ್ತಿದ್ದಾರೆ. ಅಲ್ಲದೆ ಇವರು ತಾಂತ್ರಿಕ ಜ್ಞಾನವನ್ನು ಹೊಂದಿದ್ದಾರೆ. ಇವರು ಸುತ್ತ ಮುತ್ತ ಗ್ರಾಮಗಳ ಮನೆಗಳಿಗೆ ತೆರಳಿ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿ ಇರುವ ಕರಪತ್ರಗಳನ್ನು ಹಂಚುವ ಮೂಲಕ ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದಂತಹ ಎಲ್ಲಾ ರೀತಿಯ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. ಹಾಗೆಯೇ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿಯೂ ಸಹ ಹೆಣ್ಣು ಮಕ್ಕಳ ಆರೋಗ್ಯದ ಕುರಿತು ಜಾಗೃತಿಯನ್ನು ಮೂಡಿಸುತ್ತಾರೆ. ಅಷ್ಟೇ ಅಲ್ಲದೇ ನಮ್ಮ ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಮಹಿಳೆಯರಿಗೆ ಮನವರಿಕೆ ಮಾಡಿಸಿ, ಅವರನ್ನು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸುತ್ತಾರೆ.

    ನಮ್ಮ ಆರೋಗ್ಯ ಕೇಂದ್ರದಿಂದ ಮಹಿಳೆಯರಿಗೆ ಆಗುವ ಪ್ರಯೋಜನದ ಕುರಿತು ಮತ್ತು ಮಹಿಳೆಯರು ಪ್ರಸ್ತುತ ದಿನಗಳಲ್ಲಿ ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳಾದ ಬಂಜೆತನ, ಗರ್ಭಕೋಶ ಸಮಸ್ಯೆ, ಬಿಳಿಮುಟ್ಟು , ಅನೀಮಿಯಾ, ಮುಟ್ಟಿನ ಸಮಸ್ಯೆ, ಕಾಲುನೋವು, ಮಂಡಿನೋವು ಇನ್ನಿತರ ಯಾವುದೇ ವೈಯಕ್ತಿಕ ಸಮಸ್ಯೆಗಳ ಬಗ್ಗೆ ಮಹಿಳೆಯರಿಗೆ ಮಾಹಿತಿ ನೀಡುವ ಮೂಲಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವಂತೆ ಅವರಿಗೆ ಮನದಟ್ಟು ಮಾಡಿಸುತ್ತಾರೆ.

    ಮುಖ್ಯವಾಗಿ ಗ್ರಾಮೀಣ ಮಹಿಳೆಯರ ಉತ್ತಮ ಆರೋಗ್ಯಕ್ಕಾಗಿ ವಿಶೇಷವಾಗಿ, ಸ್ತ್ರೀರೋಗ ಸಮಸ್ಯೆಗಳನ್ನು ಸಮಾಲೋಚಿಸಲು ನಮ್ಮ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಮಹಿಳೆಯರು ಭೇಟಿ ನೀಡಿ ನುರಿತ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರೊಂದಿಗೆ ವರ್ಚುಯೆಲ್ ಕನ್ಸಲ್ಟೇಷನ್ ಮೂಲಕ ಮಹಿಳೆಯರು ತಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾಹಿತಿ ಪಡೆದುಕೊಳ್ಳುತ್ತಾರೆ.

    ನಮ್ಮ ಆರೋಗ್ಯ ಕೇಂದ್ರದ ಒಡಂಬಡಿಕೆಯ ಸಂಸ್ಥೆಗಳಾದ ಆರ್ಟಿಸ್ಟ್ ಫಾರ್ ಹರ್, ದಿವಾಕರ್ ಸ್ಪೆಷಾಲಿಟಿ ಆಸ್ಪತ್ರೆ, ಎಂಜೆಎಸ್ ಪಿಆರ್ ಸಂಸ್ಥೆ ಮತ್ತು ಜನಸ್ಪಂದನಾ ಟ್ರಸ್ಟ್ ವತಿಯಿಂದ ಕಾರ್ಯಾರಂಭ ಮಾಡಿರುವ ನಮ್ಮ ಆರೋಗ್ಯ ಕೇಂದ್ರಗಳು ತಿಪಟೂರು ತಾಲೂಕಿನ ಗ್ರಾಮೀಣ ಹೆಣ್ಣು ಮಕ್ಕಳ ಭವಿಷ್ಯದಲ್ಲಿ ತಮ್ಮದೇ ಆದ ಚಾಪು ಮೂಡಿಸಿವೆ. ಹೀಗಾಗಿ ಇಂದು ಈ ಆರೋಗ್ಯ ಕೇಂದ್ರಗಳು ತಮ್ಮ ಯಶಸ್ವಿ ಮೊದಲ ವರ್ಷವನ್ನು ಪೂರೈಸಿ ಹೆಣ್ಣುಮಕ್ಕಳ ಉತ್ತಮ ಆರೋಗ್ಯಕ್ಕಾಗಿ ವಿಶೇಷವಾಗಿ ಆರೋಗ್ಯ ಶಿಬಿರಗಳು ಹಾಗೂ ಆರೋಗ್ಯ ಮಾಹಿತಿ ಕುರಿತ ಕಾರ್ಯಗಾರಗಳನ್ನು ರೂಪಿಸುವುದರೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಹೀಗೆ ಸಾವಿರಾರು ಮಹಿಳೆಯರು ನಮ್ಮ ಆರೋಗ್ಯ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

    ತಿಪಟೂರಿನಲ್ಲಿ ದಶಕಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವ ಶಶಿಧರ್ ಅವರು ತಾಲೂಕಿನಾದ್ಯಂತ ನಮ್ಮ ಆರೋಗ್ಯ ಕೇಂದ್ರದ ಮೂಲಕ ನೀಡುತ್ತಿರುವ ಸೇವೆಯನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸುತ್ತಾರೆ.

    ಹೇಮಾ ದಿವಾಕರ್ ಮಾತನಾಡಿ, ನಮ್ಮ ಆರೋಗ್ಯ ಕೇಂದ್ರಗಳು ಡಿಜಿಟಲ್ ವೇದಿಕೆಗಳನ್ನು ಬಳಸಿಕೊಂಡು ವೈದ್ಯಕೀಯ ನೆರವು ಅಗತ್ಯವಿರುವ ಗ್ರಾಮೀಣ ಮಹಿಳೆಯರೊಂದಿಗೆ ಶಿಕ್ಷಣ ಮತ್ತು ಸಂವಹನ ನಡೆಸುತ್ತಿವೆ. ವರ್ಚುವಲ್ ಜಗತ್ತಿನಲ್ಲಿ 400 ಕ್ಕಿಂತ ಕಡಿಮೆಯಿಲ್ಲದ ವೈದ್ಯರೊಂದಿಗೆ ರೋಗಿಗಳು ಸುಲಭವಾಗಿ ಸಂಪರ್ಕ ಸಾಧಿಸುತ್ತಿದ್ದಾರೆ.

    ಎಂ.ಜೆ. ಶ್ರೀಕಾಂತ್ ಅವರ ಪ್ರಕಾರ, 2019ರ ಕೋವಿಡ್ ಸಾಂಕ್ರಾಮಿಕ ರೋಗವು ವಿಕೇಂದ್ರೀಕೃತ ವೈದ್ಯಕೀಯ ಆರೈಕೆ ಸೌಲಭ್ಯವನ್ನು ಹೊಂದುವ ಪ್ರಾಮುಖ್ಯತೆ ಸೇರಿದಂತೆ ಅನೇಕ ವಿಷಯಗಳನ್ನು ಕಲಿಸಿತು. ನಮ್ಮ ಆರೋಗ್ಯ ಕೇಂದ್ರವು ಈ ಉದ್ದೇಶವನ್ನು ಪೂರೈಸುತ್ತಿದೆ ಎಂದು ಹೇಳಿದರು.

    ವರದಿ: ಆನಂದ್ ತಿಪಟೂರು

    admin
    • Website

    Related Posts

    ಬೀದರ್: ‘ಅಕ್ಕ ಪಡೆ’ಯಿಂದ ಸಂಚಾರಿ ನಿಯಮ ಹಾಗೂ ಮಹಿಳಾ ಸುರಕ್ಷತೆಯ ವಿಶೇಷ ಅರಿವು ಕಾರ್ಯಕ್ರಮ

    May 18, 2026

    ನೀರು ಕೊಡಿ ಇಲ್ಲವೇ ಕುರ್ಚಿ ಬಿಡಿ: ಅಧಿಕಾರಿಗಳ ವಿರುದ್ಧ ಬಂಟಿ ದರ್ಬಾರೆ ಗುಡುಗು ! 

    May 18, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ವಿಶ್ವವಿದ್ಯಾನಿಲಯದ ಸಿರಾ ಸ್ನಾತಕೋತ್ತರ ಕೇಂದ್ರದಲ್ಲಿ 2026-27ನೇ ಸಾಲಿನ ಪ್ರಥಮ ಬಿ.ಸಿ.ಎ ಪದವಿಗಳಿಗೆ ಪ್ರವೇಶ ಕಲ್ಪಿಸಲು ಆನ್ ಲೈನ್ ಮೂಲಕ…

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ

    May 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.