ಕೊರಟಗೆರೆ: ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ, ಎಲ್ಲಿ ನೋಡಿದರೂ ಸಡಗರ ಸಂಭ್ರಮ ಕಂಡು ಬಂತು. ಪ್ರತಿಯೊಂದು ಮನೆಯಲ್ಲೂ ಅವರವರ ಅನುಕೂಲಕ್ಕೆ ತಕ್ಕಂತೆ ಭಕ್ತಾದಿಗಳು ವರಮಹಾಲಕ್ಷ್ಮಿ ಹಬ್ಬ ಆಚರಿಸಿದರು.
ಕರ್ನಾಟಕ ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಕಳೆಗಟ್ಟಿತು. ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ಅಲಂಕಾರ, ಪುಷ್ಪ ಅಲಂಕಾರದೊಂದಿಗೆ ತಾಯಿ ಮಹಾಲಕ್ಷ್ಮೀಗೆ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ, ಪಂಚಾಭಿಷೇಕ ನಡೆಯಿತು.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಕ್ಷೇತ್ರದಲ್ಲಿ ಮುಂಜಾನೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಆಗಮಿಸಿದ್ದರು. ಪುಣ್ಯಕ್ಷೇತ್ರಕ್ಕೆ ಆಗಮಿಸಿದ ಎಲೆ ರಾಂಪುರ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ತಾಯಿಯ ದರ್ಶನ ಪಡೆದರು.
ತಾಯಿಯ ದರ್ಶನವನ್ನು ಭಕ್ತಾದಿಗಳು ಕಣ್ತುಂಬಿಕೊಂಡರು. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಗ್ಗೆ 5ಯಿಂದ ಸಂಜೆ 9 ಗಂಟೆವರೆಗೆ ದರ್ಶನದ ವ್ಯವಸ್ಥೆಯನ್ನು ಆಡಳಿತ ಮಂಡಳಿ ಮಾಡಿದೆ.
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q