ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿಆರ್‍ಸೆಟಿ) ಬೆಳಗಾವಿಯಲ್ಲಿ, ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಪುರುಷ, ಮಹಿಳೆಯರಿಗೆ ಮತ್ತು ನಿರುದ್ಯೋಗಿಗಳಿಗೆ ಸುವರ್ಣಾವಕಾಶ.
ಸೆಪ್ಟೆಂಬರ್ ಮೊದಲನೇ ವಾರದಲ್ಲಿ 10 ದಿನಗಳ ಉಪ್ಪಿನಕಾಯಿ, ಹಪ್ಪಳ ಮತ್ತು ಮಸಾಲೆ ಪೌಡರ ತಯಾರಿಕೆ ತರಬೇತಿ, ಪೇಪರ ಬ್ಯಾಗ್, ಏನವೇಲಪ್ ಮತ್ತು ಪೈಲ್ ತಯಾರಿಕೆ ತರಬೇತಿಗಳನ್ನು ಹಮ್ಮಿಕೊಂಡಿದ್ದೇವೆ.
13 ದಿನಗಳ ತರಬೇತಿಗಳಾದ ಸಾಪ್ಟ ಟಾಯ್ಸ್ ಮೇಕಿಂಗ್, (ಚಿಕ್ಕ ಮಕ್ಕಳ ಆಟಿಕೆಗಳ ತಯಾರಿಕೆ) ಜೂಟ್ ಬ್ಯಾಗ್ ತಯಾರಿಕೆ ತರಬೇತಿ, ಕೊಸ್ಟೂಮ್ ಜ್ವೇಲರಿ ತಯಾರಿಕೆ ತರಬೇತಿ(ಕೃತಕ ಆಭರಣಗಳ ತಯಾರಿಕೆ ತರಬೇತಿ)ಗಳನ್ನು ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುವುದು. ಭಾಗವಹಿಸಲಿರುವ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿದ್ದು, 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು. ತರಬೇತಿ ಪಡೆದ ನಂತರ ಸ್ವ ಉದ್ಯೋಗ ಕೈಗೊಳ್ಳಲು ಸಿದ್ಧರಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು, ಬಿಳಿ ಹಾಳೆಯ ಮೇಲೆ ಅಥವಾ ನಮ್ಮ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ನಮೂನೆಯಲ್ಲಿ ತಮ್ಮ ಹೆಸರು, ವಿಳಾಸ, ವಿದ್ಯಾಭ್ಯಾಸ, ಮುಂತಾದ ಮಾಹಿತಿಗಳನ್ನು ಬರೆದು ಅರ್ಜಿಯ ಜೋತೆಗೆ ಬಿಪಿಎಲ್ ರೇಶನ್ ಕಾಾರ್ಡ್ ಜಾಬ್ ಕಾರ್ಡ, ಆಧಾರ ಕಾರ್ಡ, ಬ್ಯಾಂಕ್ ಪಾಸ್ ಬುಕ್ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಆ 31 ರೊಳಗಾಗಿ ಸಂಸ್ಥೆಗೆ ತಲುಪುವಂತೆ ಕಳಿಸಲು ಸೂಚಿಸಲಾಗಿದೆ. ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್‍ಸೆಟಿ), ಪ್ಲಾಟ ನಂ. ಸಿ ಎ -03 (ಪಾರ್ಟ) ಕಣಬರ್ಗಿ ಇಂಡಸ್ತ್ರಿಯಲ್ ಎರಿಯಾ, ಆಟೋ ನಗರ. ಬೆಳಗಾವಿ. ದೂರವಾಣಿ ಸಂಖ್ಯೆ 0831-2440644, 8296792166, 9845750043, 8867388906, 9449860564 ಸಮಯ ಬೆಳ್ಳಿಗ್ಗೆ 9.30ರಿಂದ ಸಾಯಂಕಾಲ 6.00 ವರೆಗೆ ಸಂಪರ್ಕಿಸಬಹುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


