ಬೆಂಗಳೂರು: ರಾಜ್ಯ ಸರ್ಕಾರ ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿಗಣತಿ ವಿಷಯದಲ್ಲಿ ತೀರ್ಮಾನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಗಣತಿದಾರ ಶಿಕ್ಷಕವೃಂದಕ್ಕೂ ಸಮಸ್ಯೆ ಆಗುತ್ತಿದೆ. ರಜೆ ದಿನಗಳನ್ನೂ ವಿಸ್ತರಿಸಿದ್ದರಿಂದ ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಸಮಸ್ಯೆ ಆಗಲಿದೆ ಎಂದರು.
ಸರಕಾರಿ ಶಾಲೆಯಲ್ಲಿ ಓದುವ ಗ್ರಾಮೀಣ ಭಾಗದ ಮಕ್ಕಳಿಗೆ ಒಂದೊಂದು ದಿನವೂ ಅಷ್ಟೇ ಮಹತ್ವದ್ದು. ಶಾಲೆಗೆ ರಜೆ ಘೋಷಿಸಿ ಶಾಲಾ ಮಕ್ಕಳಿಗೂ ತೊಂದರೆ ನೀಡುತ್ತಿದ್ದಾರೆ ಎಂದು ಆಕ್ಷೇಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC