nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026
    Facebook Twitter Instagram
    ಟ್ರೆಂಡಿಂಗ್
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    • ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
    • ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
    • ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಪುರಸ್ಕೃತ ಯೋಜನೆಗಳು ಸರಿಯಾಗಿ ಅನುಷ್ಠಾನಗೊಳ್ಳಲಿ: ಸಚಿವ ಪ್ರಲ್ಹಾದ ಜೋಶಿ
    ಜಿಲ್ಲಾ ಸುದ್ದಿ September 14, 2024

    ಕೇಂದ್ರ ಪುರಸ್ಕೃತ ಯೋಜನೆಗಳು ಸರಿಯಾಗಿ ಅನುಷ್ಠಾನಗೊಳ್ಳಲಿ: ಸಚಿವ ಪ್ರಲ್ಹಾದ ಜೋಶಿ

    By adminSeptember 14, 2024No Comments3 Mins Read
    prahlad joshi

    ಧಾರವಾಡ: ಕೇಂದ್ರ ಪುರಸ್ಕೃತ ಜನಪರ ಕಲ್ಯಾಣ ಯೋಜನೆಗಳು ರೈತರಿಗೆ ಜನ ಸಾಮಾನ್ಯರಿಗೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ತಲುಪಿಸಲಿ ಎಂದು ಕೇಂದ್ರ ಗ್ರಾಹಕರ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಚಿವರಾದ ಪ್ರಲ್ಹಾದ ಜೋಶಿ ತಿಳಿಸಿದರು.

    ಧಾರವಾಡ ಜಿಲ್ಲಾ ಪಂಚಾಯತನಲ್ಲಿ ಇಂದು ಜರುಗಿದ ದಿಶಾ ಸಮಿತಿಯ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಬೆಳೆ ಪರಿಹಾರ ನರೇಗಾ ವಸತಿ, ಸ್ವಚ್ಛ ಭಾರತ, ಶಿಕ್ಷಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚಿಸಿದರು. ಕೇಂದ್ರ ಪುರಸ್ಕೃತ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕೆಂದರು.

    2023-24 ನೇ ಸಾಲಿನ ಹಿಂಗಾರು ಬೆಳೆ ಪರಿಹಾರ ದೊರೆಯದ ಕಾರಣ ಅನೇಕ ರೈತರು ಅಹವಾಲುಗಳನ್ನು ಸಲ್ಲಿಸುತ್ತಿದ್ದು ಈ ಬಗ್ಗೆ ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ರೈತರಿಗೆ ಸರಿಯಾಗಿ ಸ್ಪಂದಿಸುವಂತೆ ಅವರು ತಿಳಿಸಿದರು.

    ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಈ ಕುರಿತು ಮಾತನಾಡಿ 2023-24 ರಲ್ಲಿ ಬರಗಾಲ ಘೋಷಿಸಲಾಗಿದ್ದು ಜಿಲ್ಲೆಯಲ್ಲಿ 2.11 ಲಕ್ಷ ಹೆಕ್ಟರ್ ಹಾನಿ ಅಂದಾಜಿಸಲಾಗಿದೆ. ಅಧಿಕಾರಿಗಳು ವೈಯಕ್ತಿಕವಾಗಿಯೂ ಸಮೀಕ್ಷೆ ಮಾಡಿದ್ದಾರೆ. ಈ ವರ್ಷ ಕೇಂದ್ರಿಕೃತ ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ಕಡ್ಡಾಯವಾಗಿ ಐಡಿ ಹೊಂದಿರಬೇಕೆಂದರು. ಒಟ್ಟು 2.45 ಲಕ್ಷ ರೈತರು ಫ್ರುಟ್ಸ್ ಹೊಂದಿದ್ದಾರೆ. ಈ ತಂತ್ರಾಂಶದಲ್ಲಿ ಬೆಳೆ ಸಮೀಕ್ಷೆ ವಿವರ, ಭೂಮಿ ವಿವರ ದಾಖಲಾಗುತ್ತದೆ. 1.27 ಲಕ್ಷ ಹೆಕ್ಟೇರ್‍ಗೆ 1.11 ಲಕ್ಷ ರೈತರಿಗೆ 117 ಕೋಟಿ ರೂ.ಗಳನ್ನು ಹಂತದ ಪರಿಹಾರ ನೀಡಲಾಗಿದ್ದು ಈಗ 12 ನೇ ಹಂತದ ಬರಬೇಕಿದೆ ಎಂದರು. ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಉಪವಿಭಾಗಾಧಿಕಾರಿಗಳು, ಕಾಲ ಕಾಲಕ್ಕೆ ಉಸ್ತುವಾರಿ ಮಾಡುತ್ತಿದ್ದಾರೆ ಬೆಳೆ ಪರಿಹಾರ ಗೊಂದಲ ಪರಿಹರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು ಈವೆರೆಗೆ 2 ಸಾವಿರಕ್ಕೂ ಹೆಚ್ಚು ಕರೆಗಳನ್ನು ಆಲಿಸಲಾಗಿದೆಯೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯು ಬಹು ಬೇಡಿಕೆಯಲ್ಲಿದ್ದು ಕ್ರಿಯಾ ಯೋಜನೆಗಳು ಪೂರ್ಣಗೊಳಿಸಿ ಮತ್ತೆ ಉದ್ಯೋಗದ ಹಾಗೂ ಕಾಮಗಾರಿ ಬೇಡಿಕೆ ಇದ್ದಲ್ಲಿ ಪೂರೈಸುವಂತೆ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ ಸಚಿವರು ತಿಳಿಸಿದರು. ಉದ್ಯೋಗ ಖಾತರಿಗೆ ಅನುದಾನದ ಕೊರತೆಯಿಲ್ಲ. 60/40 ಕಾಮಗಾರಿ/ವಸ್ತು ಅನುಪಾತಕ್ಕನುಗುಣವಾಗಿ ಹೆಚ್ಚುವರಿ ಕ್ರಿಯಾಯೋಜನೆಗಳಿಗೆ ಮಂಜುರಾತಿ ನೀಡುವಂತೆ ಅವರು ತಿಳಿಸಿದರು. ಈವರೆಗೆ ಜಿಲ್ಲೆಯಲ್ಲಿ 1.70 ಲಕ್ಷ ಜಾಬ್‍ಕಾರ್ಡಗಳಿದ್ದು 3.76 ಲಕ್ಷ ಜನರಿಗೆ ಉದ್ಯೋಗ ನೀಡಲಾಗಿದೆ 25 ಲಕ್ಷ ಮಾನವ ದಿನಗಳ ಗುರಿ ಹಾಕಲಾಗಿದ್ದು ಈವರೆಗೆ 11.69 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆಯೆಂದರು ಉಪಕಾರ್ಯದರ್ಶಿ ಮೂಗನೂರಮಠ ತಿಳಿಸಿದರು.

    ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಜಿಲ್ಲೆಗೆ 6446 ಗುರಿ ಹೊಂದಲಾಗಿದೆ. ನರೇಗಾ ಅಡಿ ಹೆಚ್ಚು ಉದ್ಯೋಗಕ್ಕೆ ಹಾಜರಾದ ಫಲಾನುಭವಿಗಳಿಗೆ ತಂತ್ರಾಂಶದಲ್ಲಿ ಆದ್ಯತೆ ನೀಡಿದೆ ಎಂದು ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸಭೆಗೆ ತಿಳಿಸಿದರು. ವಸತಿ ಯೋಜನೆಯಡಿ ಕೇಂದ್ರ ಸರಕಾರವು ಪ್ರತಿ ಮನೆಗೆ 1.30 ಲಕ್ಷ ರೂ ನೀಡುತ್ತಿದ್ದು ಅನುದಾನವನ್ನು ಹೆಚ್ಚಿಸುವಂತೆ ಶಾಸಕ ಎನ್.ಎಚ್.ಕೋನರೆಡ್ಡಿ ಸಚಿವರಲ್ಲಿ ಮನವಿ ಮಾಡಿದರು. ಕುಂದಗೋಳದ ಮುಳ್ಳೊಳ್ಳಿ ಗ್ರಾಮ ಸ್ಥಳಾಂತರ ಮೂಲಭೂತ ಸೌಕರ್ಯ ಹಕ್ಕು ಪತ್ರ ವಿತರಣೆ ಕುರಿತು ಗಮನ ಹರಿಸುವಂತೆ ಸಚಿವರು ತಹಶೀಲ್ದಾರರಿಗೆ ಸೂಚಿಸಿದರು.

    ಸ್ವಚ್ಛ ಭಾರತ ಯೋಜನೆಯಡಿ ಅನುದಾನದ ಕೊರತೆ ಇಲ್ಲ. ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅಧಿಕಾರಿಗಳು ಒತ್ತು ನೀಡಲಿ ಎಂದು ಸಚಿವರು ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ 3003 ವೈಯಕ್ತಿ ಶೌಚಾಲಯಗಳನ್ನು ಕಟ್ಟಲಾಗಿದೆ. ಬೂದು ನೀರು ಕಾರ್ಯಕ್ರಮದಡಿ 268 ಕಾಮಗಾರಿ ಪೂರ್ಣಗೊಳಿಸಿದೆ. 115 ಘನ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಸ್ಥಾಪಿಸಲಾಗಿದೆಯೆಂದು ಅಧಿಕಾರಿಗಳು ಸಭೆಗೆ ತಿಳಿಸಿದರು. ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಕುರಿತು ಪತ್ರಿಕೆಯೊಂದರ ವರದಿಯನ್ನು ಅಧಿಕಾರಿಗಳ ಗಮನಕ್ಕೆ ಓದಿದ ಸಚಿವರು ಈ ಘಟಕಗಳನ್ನು ಸರಿಯಾಗಿ ನಿರ್ವಹಿಸುವಂತೆ ಸೂಚಿಸಿದರು.

    ಕೇಂದ್ರವು ಮೂಲಭೂತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಶಾಲಾ ಕಟ್ಟಡ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡುತ್ತಿದೆ. ಕಂಪನಿ ಸಾಮಾಜಿಕ ಜವಾಬ್ದಾರಿ ಸಿಎಸ್‍ಆರ್ ಅನುದಾನದಡಿ ಜಿಲ್ಲೆಗೆ 2022-23 ಸಾಲಿನಲ್ಲಿ 515 ಕೊಠಡಿಗಳನ್ನು ಮಂಜೂರು ಮಾಡಿದ್ದು ಸಂಬಂಧಿಸಿದ ಏಜೆನ್ಸಿಗಳು ವೇಗವಾಗಿ ಪಾರದರ್ಶಕವಾಗಿ ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದರು. ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ಶಾಲೆ ಸಮಗ್ರ ಅಭಿವೃದ್ಧಿ 5 ಕಟ್ಟಡಗಳನ್ನು ಮಂಜೂರು ಮಾಡಿದ್ದು, ಡಿಡಿಪಿಐ ಹಾಗೂ ಗ್ರಾಮೀಣ ಅಭಿವೃದ್ಧಿ ಇಂಜಿನೀಯರ್ ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು.

    ಸಭೆಯಲ್ಲಿ ಶಾಸಕರಾದ ಎಂ.ಆರ್.ಪಾಟೀಲ, ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಮಹಾಪೌರರಾದ ರಾಮಪ್ಪ ಬಡಿಗೇರ, ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ

    July 12, 2026

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    ನವದೆಹಲಿ: ಸಾಮಾನ್ಯವಾಗಿ ದಂಪತಿಗಳು ಮಗುವಿಗಾಗಿ ಪ್ರಯತ್ನಿಸುತ್ತಿರುವಾಗ (Trying for a baby) ಅವರ ಸಂಪೂರ್ಣ ಗಮನ ಒತ್ತಡ ಕಡಿಮೆ ಮಾಡಿಕೊಳ್ಳುವುದು,…

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.