nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ

    July 30, 2026

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯ ಹಲವು ಗ್ರಾ.ಪಂ. ವ್ಯಾಪ್ತಿಯ ಕಾಮಗಾರಿ ವೀಕ್ಷಿಸಿದ ಸಿಇಓ ಪ್ರಭು | ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ
    ಕೊರಟಗೆರೆ July 18, 2024

    ಕೊರಟಗೆರೆಯ ಹಲವು ಗ್ರಾ.ಪಂ. ವ್ಯಾಪ್ತಿಯ ಕಾಮಗಾರಿ ವೀಕ್ಷಿಸಿದ ಸಿಇಓ ಪ್ರಭು | ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

    By adminJuly 18, 2024No Comments3 Mins Read
    koratagere 1

    ಕೊರಟಗೆರೆ: ಮುಖ್ಯಮಂತ್ರಿಗಳು ಇತ್ತೀಚೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮುಖ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಲಾಗಿ ಎಲ್ಲಾ ಅಧಿಕಾರಿಗಳು ಕ್ಷೇತ್ರದಲ್ಲಿದ್ದು ಕೆಲಸ ಮಾಡಬೇಕು ಎಂಬ ನಿರ್ದೇಶನದ ಮೇಲೆಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣನವರ ಸಭೆ ನಡೆಸಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಅಧಿಕಾರಿಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚು ಹೊತ್ತು ನೀಡಬೇಕೆಂಬ ಆದೇಶದ ಅನ್ವಯ ಕೊರಟಗೆರೆ ತಾಲೂಕಿನ ಗ್ರಾಮೀಣ ಭಾಗದ ಎಲ್ಲಾ ಕಾಮಗಾರಿಗಳು ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಲು ಬಂದಿದ್ದೇನೆ, ತಾಲೂಕು ಮಟ್ಟದ ಅಧಿಕಾರಿಗಳು ಜನರ ಪರವಾಗಿ ನಿಂತು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

    ಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ನಿವೇಶನ ಹಂಚಿಕೆ ಪ್ರದೇಶ, ಬಿಸಿಎಂ ಹಾಸ್ಟೆಲ್ ಬಳಿ ಗಿಡ ನೆಟ್ಟು ಹಸಿರು ಗ್ರಾಮಕ್ಕೆ ಚಾಲನೆ, ಮಾವತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿ ಲಿಂಗಾಪುರ ಗ್ರಾಮದ ಸರ್ಕಾರಿ ಶಾಲಾ ಅಭಿವೃದ್ಧಿ ಕಾಮಗಾರಿ ವೀಕ್ಷಣೆ, ಹಂಚಳ್ಳಿ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿ ವೀಕ್ಷಣೆ, ಜೆಜೆ ಎಂ ಕಾಮಗಾರಿ ವೀಕ್ಷಣೆ, ಹಕ್ಕಿರಾಂಪುರ ಕೆ ಆರ್ ಡಿ ಎಲ್ ಶಾಲಾ ಕಾಮಗಾರಿ ಸ್ಥಳ ಪರಿಶೀಲನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳ ನಂತರ ಅಧಿಕಾರಿಗಳಿಗೆ ಕೇಂದ್ರ ಸ್ಥಾನದಲ್ಲಿದ್ದು ಅಭಿವೃದ್ಧಿ ಕಾರ್ಯಗಳಿಗೆ ಒಟ್ಟು ನೀಡುವಂತೆ ಎಚ್ಚರಿಕೆ ನೀಡಿದರು.

    ಜಿಲ್ಲಾ ಪಂಚಾಯತ್ ಜಿ. ಪ್ರಭು ಕ್ಯಾಮೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಸಿಎಂ ಹಾಸ್ಟೆಲ್ ಬೇಟಿ ನೀಡಿ ಹಾಜರಾತಿ ಪರಿಶೀಲಿಸಿ 15 ದಿನಗಳ ಒಳಗೆ 50 ವಿದ್ಯಾರ್ಥಿಗಳನ್ನು ದಾಖಲಿಸಿ ಹಾಸ್ಟೆಲ್ ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಬಿಸಿಎಂ ಅಧಿಕಾರಿ ಅನಂತರಾಮು ಹಾಗೂ ವಾರ್ಡನ್ ಗೆ ವಾರ್ನಿಂಗ್ ಮಾಡಿದ್ರು, ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಎಲ್ಲಾ ಸದಸ್ಯರು ಸಭೆ ಕರೆದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹೆಚ್ಚು ಕಾಮಗಾರಿ ಹೊತ್ತು ನೀಡಬೇಕು, ರೈತರುಗಳನ್ನು ಕರೆದು ಪ್ರತಿ ರೈತರಿಗೆ 5 ಲಕ್ಷದಂತೆ ಜಮೀನಿನಲ್ಲಿ ಬದು ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗೆ ಹೆಚ್ಚು ಹೊತ್ತು ನೀಡಬೇಕು, ಕನಿಷ್ಠ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 5 ಕೋಟಿಗೂ ಹೆಚ್ಚು ಕಾಮಗಾರಿ ನಿರ್ವಹಣೆ ಮಾಡಬೇಕು, ಗ್ರಾಮೀಣ ಪ್ರದೇಶಗಳ ಅಂಗನವಾಡಿ ಹಾಗೂ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು, ಗ್ರಾಮ ನೈರ್ಮಲ್ಯ ದೃಷ್ಟಿಯಿಂದ ಒಳಚರಂಡಿ ವ್ಯವಸ್ಥೆಗೆ ಹೆಚ್ಚು ಅನುದಾನ ಬಳಕೆ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ನರೇಗಾ ಸಮ್ಮಂದಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಲಿಂಗಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಿ ಇ ಓ ಪ್ರಭು ಆಂಗ್ಲ ಮಾಧ್ಯಮದ ಕೆಲವೊಂದು ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳಿಂದ ಉತ್ತರ ಬಾರದಿದ್ದಾಗ ಶಿಕ್ಷಕರನ್ನ ತರಾಟೆಗೆ ತೆಗೆದುಕೊಂಡು…. ನಂತರ ವಿದ್ಯಾರ್ಥಿಗಳ ಹಾಜರಾತಿ ಪರೀಕ್ಷಿಸಿ ವಿದ್ಯಾರ್ಥಿ ಇರುವ ಕಳೆದ ಎರಡು ದಿನಗಳಿಂದ ಶಾಲೆಗೆ ಬಾರದೆ ಗೈರು ಹಾಜರಿದ್ದರು ಹಾಜರಾತಿ ತೋರಿಸಿದ ಶಿಕ್ಷಕ ಹಾಗೂ ಬಿಒ ನಟರಾಜಣ್ಣ ತರಾಟೆಗೆ ತೆಗೆದುಕೊಂಡು ಬಾರದ ವಿದ್ಯಾರ್ಥಿಗೆ ಹೇಗೆ ಅಟೆಂಡೆನ್ಸ್ ನೀಡುತ್ತೀರಾ ಎಂದು ಶಿಕ್ಷಕರು ಹಾಗೂ ಬಿಒ ಗೆ ತರಟಿಗೆ ತೆಗೆದುಕೊಂಡು, ಶಾಲೆಗೆ ಬಾರದ ವಿದ್ಯಾರ್ಥಿಗಳನ್ನು ಗುರುತಿಸಿ ಪೋಷಕರನ್ನ ಓಲೈಸಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವ ಕೆಲಸ ಮಾಡಿ ಅಕ್ಷರ ದಾಸೋಹಕ್ಕೆ ಹಾಜರಾತಿ ಬುಕ್ಕಿನಲ್ಲಿ ಹಾಜರಾತಿ ತೋರಿಸುವುದು ಸಮಂಜಸವಲ್ಲ ಎಂದು ತರಾಟೆಗೆ ತೆಗೆದುಕೊಂಡರು…

    ಕೂಸಿನ ಮನೆ ವೀಕ್ಷಿಸಿದ ಸಿಇಒ:

    ಕೂಸಿನ ಮನೆ ವೀಕ್ಷಿಸಿ ಅಲ್ಲಿನ ಪುಟಾಣಿ ಮಕ್ಕಳ ನಲಿ ಕಲಿ ಕಂಡು ಕೂಸಿನ ಮನೆ ಕಾರ್ಯಕ್ರಮ ಯಶಸ್ವಿಗೆ ಸಂಬಂಧಪಟ್ಟಂತ ಅಧಿಕಾರಿ ವರ್ಗ ಶ್ರಮವಹಿಸಬೇಕು ಎಂದು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದ ಲಿಂಗಪುರ ಕೂಸಿನ ಮನೆಗೆ ಸಮರ್ಪಕ ನಿರ್ವಹಣೆಗೆ ಪ್ರಶಂಸೆ ವ್ಯಕ್ತಪಡಿಸಿದರು.

    ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣನವರ ಮಾರ್ಗದರ್ಶನದಂತೆ ಪ್ರತಿ ಒಬ್ಬ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದು ಒಂದೆಡೆಯಾದರೆ ಗ್ರಾಮೀಣ ಪ್ರದೇಶದ ಕ್ಷೇತ್ರದಲ್ಲಿದ್ದು ಕೆಲಸ ಮಾಡಬೇಕು, ನೈಜವಾಗಿ ಕ್ಷೇತ್ರದಲ್ಲಿದ್ದು ಸಾರ್ವಜನಿಕರಿಗೆ ನಾಗರಿಕರಿಗೆ ಸೇವೆಗಳು ಕಾರ್ಯಕರ್ತವಾಗುತ್ತಿದ್ದು ಮೇಲುಸ್ತುವಾರಿ ನೋಡಿಕೊಳ್ಳುವುದು ಅನಿವಾರ್ಯ ಅದೇ ಮಾರ್ಗದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಪ್ರತಿ ತಿಂಗಳು ಕ್ಷೇತ್ರ ಭೇಟಿ ಕಡ್ಡಾಯ ಮಾಡಲಾಗಿದೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಇದನ್ನ ಕಡ್ಡಾಯಗೊಳಿಸಲಾಗಿದೆ, ಕನಿಷ್ಠ 25,000 ನಿವೇಶನಗಳನ್ನ ಜಿಲ್ಲಾದ್ಯಂತ ಏಕಕಾಲದಲ್ಲಿ ಹಂಚಿಕೆ ಮಾಡಲು 1000 ಪ್ರಕರಣದಲ್ಲಿ 2300 ಎಕ್ರೆಗೂ ಹೆಚ್ಚು ಜಮೀನನ್ನ ಗುರುತಿಸಲು ಸೂಚಿಸಲಾಗಿದೆ. ಸುಸಜ್ಜಿತ ನಿವೇಶನ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಇದೇ ವೇಳೆ ಅವರು ತಿಳಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ

    July 30, 2026

    ಔರಾದ್: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು…

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.