ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಜನವರಿ 5, 6, 7 ರಂದು ಸಿರಿಧಾನ್ಯ ಮೇಳವನ್ನು ಏರ್ಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೊದಲನೇ ಸಿರಿಧಾನ್ಯ ಮೇಳ ನಡೆದಿದ್ದು ೨೦೧೭ ರಲ್ಲಿ. ಆಗ ಕೃಷ್ಣ ಬೈರೇಗೌಡರು ಕೃಷಿ ಸಚಿವರಾಗಿದ್ದರು.
೫ ವರ್ಷ ಸತತವಾಗಿ ಏರ್ಪಾಡು ಮಾಡಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಮಾಡಲಾಗಿರಲಿಲ್ಲ ಇತ್ತೀಚೆಗೆ ಸಿರಿಧಾನ್ಯಗಳು ಆರೋಗ್ಯಕ್ಕೆ ಒಳ್ಳೆಯದೆಂದು ಅರಿತಿರುವ ಜನ ಹೆಚ್ಚೆಚ್ಚು ಬಳಕೆ ಮಾಡುತ್ತಿದ್ದಾರೆ ಎಂದರು.
ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯವನ್ನು ಆಚರಿಸಲಾಗುತ್ತಿದೆ ಎಂದರು.


