nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ

    November 19, 2025

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    • ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹ ಸಚಿವರಿಂದ “ಅಮಾಯಕರು” ಎಂಬ ಸರ್ಟಿಫಿಕೇಟ್: ಕಾರಜೋಳ
    ಜಿಲ್ಲಾ ಸುದ್ದಿ July 28, 2023

    ಗೃಹ ಸಚಿವರಿಂದ “ಅಮಾಯಕರು” ಎಂಬ ಸರ್ಟಿಫಿಕೇಟ್: ಕಾರಜೋಳ

    By adminJuly 28, 2023No Comments3 Mins Read
    karajola

    ಕೆ. ಜಿ. ಹಳ್ಳಿ- ಡಿ. ಜೆ. ಹಳ್ಳಿ ಗಲಭೆಯಲ್ಲಿ ಪಾಲ್ಗೊಂಡವರು ‘ಅಮಾಯಕರು’ ಎಂದು ರಾಜ್ಯದ ಗೃಹ ಸಚಿವರು ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಕ್ಷೇಪಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 2020ರ ಆಗಸ್ಟ್ 11ರಂದು ರಾತ್ರಿ 9. 30ರಿಂದ 12. 30ರವರೆಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆಯ ಮೇಲೆ ನಡೆದ ದಾಳಿಯ ಘಟನೆಯನ್ನು ಎಲ್ಲ ಮಾಧ್ಯಮದವರು ತಮ್ಮ ಪ್ರಾಣವನ್ನು ಒತ್ತೆ ಇಟ್ಟಾದರೂ ದೇಶದ ಎಲ್ಲರಿಗೆ ತಲುಪಿಸಿದ್ದರು. ಅಲ್ಲದೆ ಸಂತ್ರಸ್ತರ ನೆರವಿಗೆ ಧಾವಿಸಿದ್ದರು ಎಂದು ವಿವರಿಸಿದರು.


    Provided by
    Provided by

    ಪೊಲೀಸ್ ವಾಹನಗಳನ್ನು ಸುಡಲಾಗಿತ್ತು. ಪೊಲೀಸ್ ಅಧಿಕಾರಿಗಳಿಗೆ ಹೊಡೆಯಲಾಯಿತು. ಅಮಾಯಕ ಜನರ ಮೇಲೆ ಹಲ್ಲೆ ಮಾಡಿದ್ದರು. ಅಂಥವರ ಬಗ್ಗೆ ‘ಸುಳ್ಳು ಮೊಕದ್ದಮೆಯಲ್ಲಿ ಬಂಧಿತರಾದ ಅಮಾಯಕ ಯುವಕರು ಮತ್ತು ವಿದ್ಯಾರ್ಥಿಗಳು ಎಂದು ಗೃಹ ಸಚಿವ ಡಾ. ಪರಮೇಶ್ವರ ಅವರು ತಿಳಿಸಿ ಮೊಕದ್ದಮೆ ವಾಪಸಾತಿಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ’ ಎಂದು ಟೀಕಿಸಿದರು.

    ಕಾಂಗ್ರೆಸ್ಸಿನ ಶಾಸಕರಾದ ಅವರಿಗೆ ಯಾರೂ ಸಮಾಧಾನ ಹೇಳಿಲ್ಲ. ಅವರಿಗೆ ಟಿಕೆಟ್ ಕೊಡಲಿಲ್ಲ. ಇದೀಗ ಮೊಕದ್ದಮೆ ಹಿಂದಕ್ಕೆ ಪಡೆಯುವ ಮೂಲಕ ದಲಿತರಿಗೆ ಅನ್ಯಾಯ ಮಾಡಲು ಸಿದ್ದರಾಮಯ್ಯರ ಸರಕಾರ ಮುಂದಾಗಿದೆ ಎಂದು ನುಡಿದರು. ಇದು ಖಂಡನೀಯ; ಇಡೀ ರಾಜ್ಯದಲ್ಲಿ ಇದರ ವಿರುದ್ಧ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

    ತಸ್ವೀರ್ ಸೇ‌ಗೆ ಯಾಕೆ ಕೆಟ್ಟ ಬುದ್ಧಿ?                                                                                              ತನ್ವಿರ್ ಸೇರ್ ಅವರ ನಡವಳಿಕೆ ಆಶ್ಚರ್ಯ ತಂದಿದೆ. ಅವರ ಮೇಲೆ ಎಸ್‌ಡಿಪಿಐ ದಾಳಿ, ಚೂರಿ ಹಾಕಿ ಕೊಲೆ ಮಾಡುವ ಯತ್ನ ನಡೆದಿತ್ತು. ಆಗ ಕಾಂಗ್ರೆಸ್ ನಾಯಕರು ನೆರವಿಗೆ ಬಂದಿರಲಿಲ್ಲ; ಆಸ್ಪತ್ರೆಗೆ ಕರೆದೊಯ್ಯಲು ಬರಲಿಲ್ಲ. ನಮ್ಮ ಸರಕಾರದ ಉಸ್ತುವಾರಿ ಸಚಿವರು ಅವರಿಗೆ ನೆರವಾಗಿ ಭದ್ರತೆ ಕೊಡಲಾಗಿತ್ತು ಎಂದು ನೆನಪಿಸಿದರು. ಅವರು ಆರು ತಿಂಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡರು. ಅವರಿಗೆ ಯಾಕೆ ಈ ಕೆಟ್ಟ ಬುದ್ದಿ ಬಂತು? ಕ್ರಿಮಿನಲ್‌ ಗಳಿಗೆ ಅಮಾಯಕರೆಂದು ಸರ್ಟಿಫಿಕೇಟ್ ಕೊಡುವ ಪರಿಸ್ಥಿತಿ ಅವರಿಗೆ ಯಾಕೆ ಬಂತೋ ನನಗೆ ಗೊತ್ತಿಲ್ಲ ಎಂದು ಗೋವಿಂದ ಕಾರಜೋಳ ತಿಳಿಸಿದರು.

    ಕಾಂಗ್ರೆಸ್ ಆಡಳಿತದಲ್ಲಿ ದೀನದಲಿತರಿಗೆ ಅನ್ಯಾಯ ಆಗುತ್ತಿದೆ. ಅವರು ಸುರಕ್ಷಿತರಾಗಿಲ್ಲ. ಅವರ ಅನುದಾನವನ್ನು ಕಾಂಗ್ರೆಸ್ಸಿನವರು ಬೇರೆ ಯೋಜನೆಗೆ ಬಳಸುತ್ತಿದ್ದಾರೆ ಎಂದು ದೂರಿದರು. ಬೇರೆ ಉದ್ದೇಶದ 11 ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸುತ್ತಿದ್ದಾರೆ. ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲು ಅನುದಾನವನ್ನು ಶಿಕ್ಷಣ, ಉದ್ಯೋಗ, ಭೂಮಿ ನೀಡಿಕೆ, ನೀರಾವರಿ ಸೌಲಭ್ಯ, ಹಾಸ್ಟೆಲ್ ನಿರ್ಮಾಣ, ವಸತಿ ಶಾಲೆ ನಿರ್ಮಿಸಲು ಖರ್ಚು ಮಾಡಬೇಕೇ ಹೊರತು ಇವರು ವೋಟ್‌ ಬ್ಯಾಂಕ್ ರಾಜಕಾರಣಕ್ಕಾಗಿ ಗ್ಯಾರಂಟಿಗೆ ಬಳಸುವುದನ್ನು ಖಂಡಿಸುತ್ತೇನೆ. ಇದು ಕಾನೂನು ದೃಷ್ಟಿಯಿಂದ ಅಪರಾಧ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

    ನಾವು ನಿರ್ಮಿಸುತ್ತಿದ್ದ 156 ಹಾಸ್ಟೆಲ್‌ ಗಳು ಅರ್ಧಕ್ಕೇ ನಿಂತಿವೆ. 75 ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದು, ಅರ್ಧಕ್ಕೇ ನಿಲ್ಲಿಸಿದ್ದಾರೆ. 3 ತಿಂಗಳಿಂದ ಕೆಲಸ ಬಂದ್ ಆಗಿದೆ. ಹಾಸ್ಟೆಲ್ ನಿರ್ಮಾಣ, ವಸತಿ ಶಾಲೆಗೆ 2, 500 ಕೋಟಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಲು ಅವರು ಆಗ್ರಹಿಸಿದರು. 30 ಶಾಸಕರು ಸಹಿ ಮಾಡಿದ ಪತ್ರಕ್ಕೆ ಸಂಬಂಧಿಸಿ ಬಿ. ಆರ್. ಪಾಟೀಲ್ ರಂತಹ ಹಿರಿಯ ರಾಜಕಾರಣಿ ಯು ಟರ್ನ್ ಹೊಡೆದು ನನ್ನದಲ್ಲ ಅದು ಫೇಕ್ ಎಂದು ತಿಳಿಸಿದ್ದಾರೆ. ಆದರೆ, ಸಹಿ ಮಾಡಿದ ಹಲವರು ಅನ್ಯಾಯ ಆದುದರಿಂದ ಸಹಿ ಮಾಡಿದ್ದಾಗಿ ಹೇಳುತ್ತಾರೆ. ಕ್ಷೇತ್ರಕ್ಕೆ ಅನ್ಯಾಯ ಆಗಿದೆ. ಕೆಲಸ ಕಾರ್ಯಗಳು ಅರ್ಧಕ್ಕೇ ನಿಂತಿವೆ ಎಂದು ಹೇಳುತ್ತಿದ್ದಾರೆ. ವರ್ಗಾವಣೆಯಲ್ಲಿ ಮಧ್ಯವರ್ತಿಗಳ ಮೂಲಕ ಲಂಚ ಕೇಳುವ ಕುರಿತು ಅವರೇ ಆರೋಪ ಮಾಡುತ್ತಿದ್ದಾರೆ ಎಂದು ವಿವರಿಸಿದರು.

    ರಾಜ್ಯದಲ್ಲಿ ಶೇ 58 ಲಂಚದ ಸರಕಾರ ಇವರದು ನಮ್ಮ ಮೇಲೆ ಶೇ 40 ರ ಸುಳ್ಳು ಆರೋಪ ಇತ್ತು. ಅದು ಆಧಾರರಹಿತವಾಗಿತ್ತು. ಕೆಂಪಣ್ಣನ ಹಳೆಯ ಲೆಟ‌ಾಡ್ ಬಳಸಿ ಪತ್ರ ಬರೆದು ಮೋಸ ಮಾಡಿದ್ದರು. ಇವತ್ತು ಶೇ 58 ಲಂಚ ಎಂದು ಅವರ ಪಕ್ಷದವರೇ ಹೇಳುತ್ತಿದ್ದಾರೆ ಎಂದು ಗೋವಿಂದ ಕಾರಜೋಳ ಅವರು ಆರೋಪಿಸಿದರು.

    ಶಿವಮೊಗ್ಗದ ಹರ್ಷ ಹತ್ಯೆ, ಸುಳ್ಯ ಸಮೀಪದ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳನ್ನೂ ಅಮಾಯಕರು ಎನ್ನುತ್ತಾರೆ. ಕಾಂಗ್ರೆಸ್ಸಿನ ದೃಷ್ಟಿಯಲ್ಲಿ ಯಾರು ಅಮಾಯಕರಲ್ಲ ಎನ್ನುವುದೇ ಗೊತ್ತಾಗುತ್ತಿಲ್ಲ ಎಂದು ನುಡಿದರು. ಇವರು ಮುಸ್ಲಿಮರ ಮತಕ್ಕಾಗಿ ಅಂಜಿಕೆಯಿಂದ ಹೀಗೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದರ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತೇವೆ ಎಂದು ಪ್ರಕಟಿಸಿದರು.

    ಉಡುಪಿಯಲ್ಲಿ ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಚಿತ್ರಣ ವಿಚಾರದಲ್ಲಿ ಪೊಲೀಸರಿಂದ ಸುಳ್ಳು ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ. ಮಹಿಳಾ ಆಯೋಗದವರಿಗೂ ತಪ್ಪು ಮಾಹಿತಿ ಕೊಟ್ಟು ಹೇಳಿಕೆ ಕೊಡಿಸಿದ್ದಾರೆ ಎಂದು ಟೀಕಿಸಿದರು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಕುಸಿದಿದೆ ಎಂದು ದೂರಿದರು. ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆಕ್ಷೇಪಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ಶ್ರೀಕ್ಷೇತ್ರ ಕಾಗಿನೆಲೆ: ಇಲ್ಲಿನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ವತಿಯಿಂದ ನ.22 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1…

    ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ

    November 19, 2025

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.