ಪಾವಗಡ: ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಆರೋಗ್ಯ ತಪಾಸಣಾ ಅಭಿಯಾನ ಯೋಜನೆ ಮತ್ತು ಗರ್ಭಿಣಿ ಮಹಿಳೆಯ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಸಿ.ಕೆ.ಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.
ಇದೇ ವೇಲೆ ಆಸ್ಪತ್ರೆಯಲ್ಲಿ ಇರುವಂತಹ ವ್ಯವಸ್ಥೆಯನ್ನು ಕಂಡು ತಾಲೂಕು ವೈದ್ಯಾಧಿಕಾರಿ ಡಾ.ಕಿರಣ್ ಗೆ ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಇಷ್ಟು ಉತ್ತಮ ಸೌಲಭ್ಯಗಳಿದ್ದರೂ ಜನರಿಗೆ ಸೇವೆ ಮಾಡುವುದಕ್ಕೆ ಏನಾಗಿದೆ ಎಂದು ಪ್ರಶ್ನಿಸಿದರು. ಅದೇ ರೀತಿ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೆ ಜನರು ಸಮಸ್ಯೆಯನ್ನು ಅನುಭವಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು ಶೀಘ್ರವಾಗಿ ಸಮಸ್ಯೆಗಳನ್ನು ಬಗೆಹರಿಸಿ ಮಾಹಿತಿ ನೀಡುವಂತೆ ಸೂಚಿಸಿದರು
ಬಳಕೆ ಇಲ್ಲದ ಆಸ್ಪತ್ರೆಯ ಶೌಚಾಲಯ:
ಸಿ.ಕೆ.ಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಶೌಚಾಲಯವನ್ನು ಗಮನಿಸಿದ ನಾಗಲಕ್ಷ್ಮೀ ಅವರು, ದಂಗಾಗಿದ್ದಾರೆ. ಆಸ್ಪತ್ರೆ ಪ್ರಾರಂಭವಾದಾಗಿಂದ ಇಲ್ಲಿಯವರೆಗೂ ಆಸ್ಪತ್ರೆಯ ಶೌಚಾಲಯ ಬಳಸಿಯೇ ಇಲ್ಲ. ಈ ಬಗ್ಗೆ ಎಚ್ಚರಿಕೆ ನೀಡಿದ ಅವರು, ಇದೇ ಹಾದಿಯಲ್ಲಿ ಮುಂದುವರಿಸಿದರೆ ಎಲ್ಲಾ ಅಧಿಕಾರಿಗಳನ್ನು ಅಮಾನತುಗೊಳಿಸಲು ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರಲ್ಲದೇ, ಸ್ಥಳದಲ್ಲಿದ್ದ ತಹಶೀಲ್ದಾರ್ ವರದರಾಜು ಹಾಗೂ ಇ.ಓ. ಜಾನಕಿರಾಮ್ ಅವರನ್ನು ತಾವು ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವುದಿಲ್ಲವೇ ಎಂದು ತರಾಟೆಗೆತ್ತಿಕೊಂಡರು.
ಇತ್ತೀಚಿಗೆ ಇಲ್ಲಿನ ಸರ್ಕಾರಿ ಶಾಲೆಯ ಮಗು ಗಾಯಗೊಂಡು ಆಸ್ಪತ್ರೆಗೆ ಬಂದಿದ್ದರೆ, ಸರಿಯಾಗಿ ಚಿಕಿತ್ಸೆ ನೀಡದೆ ಇರುವುದರಿಂದ ಮಗುವಿಗೆ ಗಾಯ ತೀವ್ರವಾಗಿರುವುದನ್ನು ಕಂಡು, ಅಲ್ಲಿಯೇ ಇದ್ದ ಆಸ್ಪತ್ರೆಯ ಸಿಬ್ಬಂದಿ ನಾಗರಾಜುನ ಮೇಲೆ ಸಿಡಿಮಿಡಿಗೊಂಡು ಮಗುವಿಗೆ ಉತ್ತಮ ಚಿಕಿತ್ಸೆ ಕೊಟ್ಟು ವಾಸಿಯಾದ ಬಳಿಕ ಫೋಟೋ ಕಳಿಸಿ ಅಂದರು.
ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ನಡೆದ ಮಹಿಳೆಯರನ್ನ ಉದ್ದೇಶಿಸಿ ನಾಗಲಕ್ಷ್ಮಿ ಚೌದರಿ ಅವರು ಮಾತನಾಡಿದರು
ನಂತರ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸೌಲಭ್ಯದ ಇಲ್ಲದೆ ಇರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಆಸ್ಪತ್ರೆಗೆ ಕನಿಷ್ಠ ಕುಡಿಯುವ ನೀರಿನ ಸೌಲಭ್ಯವನ್ನು ಮಾಡದೇ ಇದ್ದರೆ ತಾವೆಲ್ಲ ಇರುವುದು ಏನಕ್ಕೆ ಎಂದು ಪ್ರಶ್ನಿಸಿದರು.
ಜೊತೆಗೆ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡ ಅವರು ಈ ಬಗ್ಗೆ ಸ್ಥಳದಲ್ಲಿಯೇ ಜಿಲ್ಲಾ ವೈದ್ಯಾಧಿಕಾರಿಗೆ ಕರೆ ಮಾಡಿ ಮಾಹಿತಿಯನ್ನು ಪಡೆದರು, ನಂತರ ಆಸ್ಪತ್ರೆಯ ಪ್ರಸವ ನಂತರದ ಕೊಠಡಿಗೆ ಭೇಟಿ ನೀಡಿದ ಅವರು ಬಾಣಂತಿಯರ ಆರೋಗ್ಯವನ್ನು ವಿಚಾರಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸದ್ಯ ಪಾವಗಡ ತಾಲೂಕಿನ ಅಧಿಕಾರಿಗಳು ಬೇಜವಾಬ್ದಾರಿತನದಿಂದ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಬೃಹತಾದ ಆಸ್ಪತ್ರೆಯಲ್ಲಿ ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎನ್ನುವುದಾದರೆ ಇವರು ಆಸ್ಪತ್ರೆನ ಎಷ್ಟರಮಟ್ಟಿಗೆ ನಿಭಾಯಿಸುತ್ತಿದ್ದಾರೆ ಎನ್ನುವುದು ಇಲ್ಲಿಯೇ ಕಂಡುಬರುತ್ತದೆ, ವೈದ್ಯರು ಕೊರತೆ ಇರುವುದರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿ ಸಮಸ್ಯೆಗಳನ್ನ ಬಗೆಹರಿಸಲು ಮುಂದಾಗುತ್ತೇನೆ ಎಂದರು.
ನಂತರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ಹೆಣ್ಣು ಮಕ್ಕಳು ಹೋರಾಟದ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ತಪ್ಪನ್ನು ಪ್ರಶ್ನಿಸುವಂತಹ ಧೈರ್ಯ ತಮ್ಮಲ್ಲಿ ಬರಬೇಕು ಮತ್ತು ಸಮಾಜದಲ್ಲಿ ಎದುರಾಗುವಂತಹ ದೌರ್ಜನ್ಯಗಳು ಮತ್ತು ಶೋಷಣೆಗಳಿಗೆ ತಾವು ತಲೆಬಾಗದೆ ಧೈರ್ಯದಿಂದ ಹೋರಾಟ ಮಾಡುವಂತಹ ಮನಸ್ಥಿತಿ ಬಳಸಿಕೊಳ್ಳಬೇಕು, ಇತ್ತೀಚಿನ ದಿನಗಳಲ್ಲಿ ಬೆಳೆಯುತ್ತಿರುವಂತಹ ಮಾದಕ ವ್ಯಾಸಂಗಗಳಾಗಿ ಯಾರು ದಾಸರಾಗದಂತೆ ತಮ್ಮ ಮುಂದಿನ ಭವಿಷ್ಯವನ್ನು ಉತ್ತಮಗೊಳಿಸಿಕೊಳ್ಳುವಂತೆ ಸಲಹೆ ಸೂಚನೆಗಳನ್ನು ನೀಡಿದರು
ಈ ಸಂದರ್ಭದಲ್ಲಿ ಡಿಎನ್ ವರದರಾಜು, ಇ.ಓ.ಜಾನಕಿರಾಮ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ, ಸಿಪಿಐ ಸುರೇಶ್ ಸಿಡಿಪಿಓ ಸುನಿತಾ, ತಾಲೂಕು ವೈದ್ಯಾಧಿಕಾರಿ ಡಾ.ಕಿರಣ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್, ಪಶುಪಾಲನಾ ಇಲಾಖೆಯ ಹೊರಕೆರಪ್ಪ, ತೋಟಗಾರಿಕಾ ಇಲಾಖೆಯ ವಿಶ್ವನಾಥ್ ಗೌಡ, ಬೆಸ್ಕಾಂ ಎಇಇ ಕೃಷ್ಣಮೂರ್ತಿ, ಬಿಇಓ ಇಂದ್ರನಮ್ಮ, ಆರೋಗ್ಯ ಅಧಿಕಾರಿ ಶಂಸುದ್ದೀನ್, ಆಡಳಿತ ವೈದ್ಯಧಿಕಾರಿ ಎಎಸ್ ಎಲ್ ಬಾಬು, ಬಿಸಿಎಂ ಅಧಿಕಾರಿ ಗೋಪಾಲಪ್ಪ, ಯಮುನಾ, ಅಧಿಕಾರಿಗಳು ಇನೊಂದು ಪರಿವೀಕ್ಷಣೆಯಲ್ಲಿ ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296