ಕೃಷ್ಣರಾಜಪೇಟೆ: ಕೆಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಕೃಷ್ಣರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುರುಕನಹಳ್ಳಿ ಗ್ರಾಮದ ಬಳಿ ನಡೆದಿದೆ.

ಕೆಎ-09 F-5282 ನಂಬರ್ ನ ಕೆ ಎಸ್ ಆರ್ ಟಿ ಸಿ ಬಸ್ ಗದಗದಿಂದ-ಮೈಸೂರಿನ ಕಡೆಗೆ ಬರುತ್ತಿದ್ದಾಗ ಮರುಕನಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ.

ಘಟನೆಯ ವೇಳೆ ಬಸ್ಸಿನಲ್ಲಿ ಸುಮಾರು 32 ಪ್ರಯಾಣಿಕರಿದ್ದರು ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಕೃಷ್ಣರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಶ್ರೀನಿವಾಸ್, ಮಂಡ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


