ತುರುವೇಕೆರೆ: ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೊವೊಂದು ಮಗುಚಿ ಬಿದ್ದಿದ್ದು, ಪರಿಣಾಮವಾಗಿ ವಾಹನ ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬದರಿಕಾಶ್ರಮ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಗ್ಗೇಜ್ ಟೆಂಪೋ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ತುರುವೇಕೆರೆಯಿಂದ ಮಾಯಸಂದ್ರಕ್ಕೆ ಕೊಬ್ಬರಿ ಚೀಲ ತುಂಬಿಕೊಂಡು ವಾಹನ ಹೋಗುತ್ತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ತುರುವೇಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz