ತುಮಕೂರು: ತುಮಕೂರಿನ ಎಂ.ಜಿ. ರಸ್ತೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ತುಮಕೂರು ಗ್ರಾಮಾಂತರ ಛಲವಾದಿ ಗ್ರಾಮೀಣಾಭಿವೃದ್ಧಿ ಸಂಘ (ರಿ ). ಸಂಘದ ವತಿಯಿಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಿರ್ದೇಶಕರುಗಳ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.
ಈ ಸಂದರ್ಭದಲ್ಲಿ ಸಮುದಾಯದ ವಿದ್ಯಾರ್ಥಿಗಳ ವಿಚಾರವಾಗಿ ಮತ್ತು ಸಮುದಾಯದ ಏಳಿಗೆಯ ವಿಚಾರವನ್ನು ಚರ್ಚಿಸಲಾಯಿತು.
ಸಭೆಯಲ್ಲಿ ಗೌರವಾಧ್ಯಕ್ಷರಾದ ಸಂಪತ್ ಕುಮಾರ್, ಉಪಾಧ್ಯಕ್ಷರಾದ ಯಲ್ಲಯ್ಯ, ಕಾರ್ಯದರ್ಶಿಗಳಾದ ಮಂಜುನಾಥ್ ಹೆಚ್, ಸಂಘಟನಾ ಕಾರ್ಯದರ್ಶಿಗಳಾದ ಸುರೇಶ್, ಸಹಕಾರ್ಯದರ್ಶಿ ಪ್ರವೀಣ್, ನಿರ್ದೇಶಕರುಗಳಾದ ರಾಜಣ್ಣ ಹೊನ್ನುಡಿಕೆ, ರಾಮಚಂದ್ರ ಆರ್., ಶ್ರೀನಿವಾಸ್ ಶಶಿಕುಮಾರ್, ಮಹೇಶ್, ಮಮತಾ ಗುರೂಜಿ, ಮಂಜುಳಾ ಹಾಗೂ ವೆಂಕಟೇಶ್ ರವರು ಭಾಗವಹಿಸಿದ್ದರು
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾದ ಪರಮೇಶ್ ರವರನ್ನು ಸನ್ಮಾನಿಸಲಾಯಿತು.
ವರದಿ: ಎ.ಎನ್.ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB