ಸ್ಯಾಂಡಲ್ವುಡ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಮೈಸೂರಿನ ತೋಟದ ಮನೆಯಿಂದ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ದರ್ಶನ್ ಅವರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆ ತರಲಾಗುತ್ತಿದೆ.
ಕೊಲೆ ಆರೋಪದಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ದರ್ಶನ್‌ರನ್ನ ವಶಕ್ಕೆ ಪಡೆದಿದ್ದಾರೆ.
ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆದ ಘಟನೆಗೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ.ದರ್ಶನ್ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಎಸೆದಿದ್ದರು ಎಂದು ಆರೋಪವಿದೆ.
ಕೆಲವೇ ಕ್ಷಣಗಳಲ್ಲಿ ದರ್ಶನ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ನಂತರ ಅವರನ್ನು ನ್ಯಾಯಾಧೀಶರ ಮುಂದೆ ಪ್ರಡ್ಯೂಸ್ ಮಾಡಿ, ನಂತರ ವಶಕ್ಕೆ ಪಡೆಯಲಾಗುತ್ತದೆ.
ಈ ರೇಣುಕಾಸ್ವಾಮಿ ಯಾರು? ಆತ ಯಾಕೆ ಪವಿತ್ರಾಗೌಡ ಕುರಿತು ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಅಲ್ಲದೇ, ದರ್ಶನ್ ಯಾಕೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


