ಚಲಿಸುವ ಕಾರಿನಲ್ಲಿ 19 ವರ್ಷದ ಯುವ ರೂಪದರ್ಶಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.
ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಎರ್ನಾಕುಲಂ ಪೊಲೀಸರು ಒಬ್ಬ ಮಹಿಳೆ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಕೊಚ್ಚಿನ್ ಶಿಪ್ ಯಾರ್ಡ್ ಬಳಿಯ ಪಬ್ ಗೆ ತೆರಳಿದ್ದು, ಮದ್ಯ ಸೇವಿಸಿದ್ದಳು. ಈ ವೇಳೆ ಕಾಕ್ಕನಾಡ್ ಗೆ ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ಯುವಾಗ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ರಾತ್ರಿಯೀಡಿ ರೂಪದರ್ಶಿ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಮನೆ ಬಳಿ ಬಿಟ್ಟ ದುಷ್ಕರ್ಮಿಗಳು ಹೋಗಿದ್ದಾರೆ. ರೂಪದರ್ಶಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆಕೆಯ ಮೇಲೆ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


