ಚಾಮರಾಜನಗರ: ಜಿಲ್ಲೆಯ ನಂಜೇದೇವನಪುರ ಗ್ರಾಮದ ಬಳಿ ಏಕಕಾಲಕ್ಕೆ ಐದು ಹುಲಿಗಳು ಕಾಣಿಸಿಕೊಂಡಿದ್ದು, ಸ್ಥಳೀಯ ಜನರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮಗಳ ಜಮೀನುಗಳಲ್ಲಿ ಹುಲಿಗಳ ಓಡಾಟ ಪತ್ತೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಾಮರಾಜನಗರ ತಹಶೀಲ್ದಾರ್ ಗಿರಿಜಾ ಅವರು ಈ ಭಾಗದಲ್ಲಿ ಸೆಕ್ಷನ್ 144 ರಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಬಳಕೆಯಾಗದ ಕಲ್ಲು ಕ್ವಾರಿಗಳನ್ನು ಹುಲಿಗಳು ತಮ್ಮ ಆವಾಸಸ್ಥಾನವನ್ನಾಗಿ ಮಾಡಿಕೊಂಡಿರುವುದು ಡ್ರೋನ್ ಕ್ಯಾಮೆರಾ ಕಾರ್ಯಾಚರಣೆಯಲ್ಲಿ ದೃಢಪಟ್ಟಿದೆ. ತಾಯಿ ಹುಲಿ ಮತ್ತು ಮರಿಗಳಿರುವ ಸಾಧ್ಯತೆಯಿದ್ದು, ಅರಣ್ಯ ಇಲಾಖೆಯು ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ನಡೆಸಲು ಸಿದ್ಧತೆ ನಡೆಸಿದೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಲಿಗಳನ್ನು ತಕ್ಷಣ ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಾಳೆ ಸಂಜೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


