ಚಾಮುಂಡಿ ಬೆಟ್ಟದಲ್ಲಿ ಇಂದು ಚಾಮುಂಡೇಶ್ವರಿ ದೇವಿಯ ದಿವ್ಯ ರಥೋತ್ಸವ ಸಂಭ‍್ರಮದಿಂದ ನಡೆದಿದ್ದು ಆಶ್ವಯುಜ ಶುಕ್ಲ ಪೂರ್ಣಮಿ ಉತ್ತರ ಭಾದ್ರ ನಕ್ಷತ್ರ ಬೆಳಗ್ಗೆ 7.50 ರಿಂದ 8.10 ರ ಒಳಗೆ ಸಲ್ಲುವ ಶುಭ ಮಹೂರ್ತದಲ್ಲಿ ರಥಾರೋಹಣ ಮಂಟಪೋತ್ಸವ ನಡೆಯಿತು. ಸಾವಿರಾರು ಭಕ್ತರು ಪಾಲ್ಗೊಂಡು ದೇವಿ ದರ್ಶನ ಪಡೆದರು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎಸ್.ಎ.ರಾಮದಾಸ್ ಇತರರು ಭಾಗವಹಿಸಿದ್ದರು.
ಇನ್ನು ಧಾರ್ಮಿಕ ದತ್ತಿ ಇಲಾಖೆ ಹಾಗೂ ಚಾಮುಂಡೇಶ್ವರಿ ದೇವಸ್ಥಾನದ ವತಿಯಿಂದ ಈ ಸಾಲಿನಲ್ಲಿ ಅ. 8 ರಿಂದ 14 ರವರೆಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಮಹಾ ರಥೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಭಾಗವಾಗಿ ಶನಿವಾರ ದೇವಿಯ ದೇವಾ ಲಯದಲ್ಲಿ ಬೆಳಗ್ಗೆಯಿಂದಲೇ ಆಶ್ವಯುಜ ಶುಕ್ಲ ಚತುರ್ದಶಿ ಪೂರ್ವಭಾದ್ರ ನಕ್ಷತ್ರ, ಕಳಶಾರೋಹಣದ, ಗಜಾರೋಹಣ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮ ನಡೆದಿದ್ದವು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


