ಆಕ್ಲೆಂಡ್: ನ್ಯೂಜಿಲೆಂಡ್ ದೇಶದಲ್ಲಿ ಗೇಬ್ರಿಯೆಲ್ ಚಂಡಮಾರುತದ ಆರ್ಭಟ ನಡೆದಿದ್ದು, ದೇಶದ ಹಲವು ಭಾಗಗಳಿಗೆ ಹಾನಿಯಾಗಿದೆ. ವಿದ್ಯುತ್ ಗ್ರಿಡ್ ವ್ಯವಸ್ಥೆ ಹಾಳಾಗಿದ್ದು ಲಕ್ಷಾಂತರ ಮನೆಗಳು ಕತ್ತಲಲ್ಲಿ ಮುಳುಗಿವೆ.
ಚಂಡಮಾರುತದಿಂದ ಅತಿಹೆಚ್ಚು ಹಾನಿಯಾಗಿದೆ. ಅದರಲ್ಲೂ ಆಕ್ಲೆಂಡ್, ನಾರ್ತ್ಲ್ಯಾಂಡ್, ಕೋರೋಮಂಡೆಲ್, ಗಿಸ್ಬೋರ್ನ್, ಟೈರಾವಿಟಿ, ಹಾಕ್ಸ್ ಬೇ ಮೊದಲಾದ ಕಡೆ ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮ ಆಕ್ಲೆಂಡ್ ಮತ್ತು ನಾರ್ತ್ಲ್ಯಾಂಡ್ನಲ್ಲಿ ಪ್ರವಾಹ ಮತ್ತು ಭೂಕುಸಿತ ಘಟನೆಗಳು ಬಹಳ ವರದಿಯಾಗಿವೆ. ಆದರೆ, ಗಿಸ್ಬೋರ್ನ್, ಕೋರೋಮಂಡೆಲ್, ಹಾಕ್ಸ್ ಬೇ ಪ್ರದೇಶಗಳು ಸಂಪೂರ್ಣ ಕಟ್ ಆಫ್ ಆಗಿವೆ.
ಗಾರ್ಡಿಯನ್ ವರದಿ ಪ್ರಕಾರ ಗೇಬ್ರಿಯೆಲ್ ಚಂಡಮಾರುತದ ಪರಿಣಾಮ ನ್ಯೂಜಿಲೆಂಡ್ನಲ್ಲಿ 1.5 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದು ನಾರ್ತ್ಲ್ಯಾಂಡ್, ಆಕ್ಲೆಂಡ್ ಮತ್ತು ಹಾಕ್ಸ್ಬೇ ಪ್ರದೇಶಗಳಿಂದ ಬಂದಿರುವ ಮಾಹಿತಿ. ಚಂಡಮಾರುತದಿಂದ ಬಹಳ ಹಾನಿಗೊಂಡಿರುವ ಗಿಸ್ಬೋರ್ನ್, ಟೈರಾವ್ಹಿಟಿ, ಬೇ ಆಫ್ ಪ್ಲೆಂಟಿ ಎಂಬ ಪ್ರದೇಶಗಳಲ್ಲಿ ವಿದ್ಯುತ್ ಗ್ರಿಡ್ ಕಾರ್ಯನಿರ್ವಹಣೆ ಎಷ್ಟು ಸ್ಥಗಿತಗೊಂಡಿದೆ.
ನ್ಯೂಜಿಲೆಂಡ್ನಲ್ಲಿ ಗೇಬ್ರಿಯೆಲ್ ಚಂಡಮಾರು ಅಪ್ಪಳಿಸಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ರಾಷ್ಟ್ರೀಯ ತುರ್ತುಸ್ಥಿತಿಯನ್ನು ಅಲ್ಲಿನ ಸರ್ಕಾರ ಘೋಷಿಸಿದೆ. ನಾರ್ತ್ಲೆಂಡ್, ಆಕ್ಲೆಂಡ್, ಟೈರಾವ್ಹಿಟಿ, ಬೇ ಆಫ್ ಪ್ಲೆಂಟಿ, ವೈಕಾಟೋ, ಹಾಕ್ಸ್ಬೇ ಮತ್ತು ಟರರುವಾ ಪ್ರದೇಶಗಳಲ್ಲಿ ತುರ್ತುಸ್ಥಿತಿ ಎಂದು ಘೋಷಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


