ಹಾವೇರಿ: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾಗಿದ್ದಾರೆ.
ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು, ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮದ ಕಲಿಕೆಗೆ ಬಹಳಷ್ಟು ಒತ್ತು ನೀಡಿದರು.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy