ಬೆಂಗಳೂರು: ಮುಸ್ಲಿಮರ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಇದೀಗ ವಿಚಾರಣೆಗೆ ಹಾಜರಾಗಲು ಅನಾರೋಗ್ಯದ ಕಾರಣ ನೀಡಿದ್ದಾರೆ.
ಸ್ವಾತಂತ್ರ್ಯ ಉದ್ಯಾನವನದ ಬಳಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಸಮುದಾಯದವರಿಗೆ ಮತದಾನದ ಹಕ್ಕು ರದ್ದುಪಡಿಸಬೇಕೆಂದು ಶ್ರೀಗಳು ಮಾತನಾಡಿದ್ದರು.
ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇಂದು ಠಾಣೆಗೆ ಬಂದು ವಿಚಾರಣೆಗೆ ಹಾಜರಾಗಲು ಪೊಲೀಸರು ಸ್ವಾಮೀಜಿವರಿಗೆ ನೋಟೀಸ್ ನೀಡಿದ್ದರು.
ಆದರೆ ಆರೋಗ್ಯ ಸರಿ ಇಲ್ಲದಿರುವುದರಿಂದ ವಿಚಾರಣೆಗೆ ಹಾಜರಾಗಲು ಆಗುತ್ತಿಲ್ಲ ಎಂದು ಶ್ರೀಗಳು ಪೊಲೀಸ್ ಅಧಿಕಾರಿಗಳಿಗೆ ಪತ್ರದ ಮೂಲಕ ತಿಳಿಸಿದ್ದಾರೆ.
ಬಾಯಿ ತಪ್ಪಿನಿಂದ ತಾವು ಹೇಳಿಕೆ ನೀಡಿದ್ದಾಗಿ ಹಾಗೂ ಅದಕ್ಕೆ ವಿಷಾದವನ್ನು ವ್ಯಕ್ತಪಡಿಸುವುದಾಗಿ ಸ್ವಾಮೀಜಿ ಹೇಳಿದ್ದರು. ಅಲ್ಲದೆ ಈ ವಿಚಾರವನ್ನು ಬೆಳೆಸದಂತೆ ಮುಕ್ತಾಯಗೊಳಿಸಬೇಕೆಂದು ಕೋರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx