nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಚಂದ್ರಶೇಖರ್ ಗುರೂಜಿ ಹತ್ಯೆ: ಹತ್ಯೆಗೆ ಕಾರಣ ಏನು?
    ರಾಜ್ಯ ಸುದ್ದಿ July 5, 2022

    ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಚಂದ್ರಶೇಖರ್ ಗುರೂಜಿ ಹತ್ಯೆ: ಹತ್ಯೆಗೆ ಕಾರಣ ಏನು?

    By adminJuly 5, 2022No Comments2 Mins Read

    ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿ ಹತ್ಯೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಭಕ್ತರ ಸೋಗಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುರೂಜಿಗೆ ಮನಬಂದಂತೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

    ಹತ್ಯೆಗೆ ಸಂಬಂಧಿಸಿದ ಇಬ್ಬರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾಂತೇಶ್ ಶಿರೋಳ್ ಮತ್ತು ಮಂಜುನಾಥ್ ದುಮ್ಮವಾಡ ಬಂಧಿತ ಆರೋಪಿ ಆಗಿದ್ದಾರೆ. ಇಬ್ಬರೂ ಆರೋಪಿಗಳು ಧಾರವಾಡ ಜಿಲ್ಲೆಯ ತಲಘಟಗಿ ತಾಲೂಕಿನ ದುಮ್ಮವಾಡ ನಿವಾಸಿಗಳು ಎಂದು ತಿಳಿದು ಬಂದಿದೆ.


    Provided by
    Provided by

    ನಗರದ ಉಣಿಕಲ್ ರಸ್ತೆಯಲ್ಲಿರುವ ಪ್ರೆಸಿಡೆಂಟ್ ಹೋಟೆಲ್‌ ನಲ್ಲಿ ಗುರೂಜಿ ಹತ್ಯೆ ಮಾಡಿದವರ ಬಂಧನಕ್ಕೆ ಎಸಿಪಿ ವಿನೋದ್ ಮುಕ್ತೇದಾರ್ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿತ್ತು. ನಗರ ನಾಲ್ಕೂ ದಿಕ್ಕಿನಲ್ಲಿ ನಾಕಾಬಂಧಿ ಹಾಕಿದ ಪೊಲೀಸರು ಘಟನೆ ನಡೆದು ನಾಲ್ಕು ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ.

    ಹುಬ್ಬಳ್ಳಿ ಉಣಕಲ್ ರಸ್ತೆಯಲ್ಲಿ ಇರುವ ಪ್ರೆಸಿಡೆಂಟ್ ಹೋಟೆಲ್‌ ನಲ್ಲಿ ಮಧ್ಯಾಹ್ನ 12:23ರ ಹೊತ್ತಿಗೆ ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿಯ ಹತ್ಯೆ ನಡೆಯಿತು. ಭಕ್ತರ ಸೋಗಿನಲ್ಲಿ ಬಂದಿದ್ದ ಆರೋಪಿಗಳು ರಿಸೆಪ್ಷನ್ ಬಳಿ ಆಗಮಿಸುವಂತೆ ಗುರೂಜಿಗೆ ಕರೆ ಮಾಡಿದ್ದಾರೆ. 30 ನಿಮಿಷಗಳ ನಂತರ ಸ್ಥಳಕ್ಕೆ ಗುರೂಜಿ ಆಗಮಿಸಿದರು. ಒಬ್ಬರು ಅವರ ಕಾಲಿಗೆ ಬಿದ್ದು ನಮಿಸುತ್ತಿದ್ದ ಸಂದರ್ಭದಲ್ಲಿ ಮತ್ತೊಬ್ಬರು ಗುರೂಜಿ ಎದೆಗೆ ಚಾಕುವಿನಿಂದ ಇರಿದಿದ್ದಾರೆ. ನೋಡ ನೋಡುತ್ತಿದ್ದಂತೆ ಇಬ್ಬರೂ ಚಾಕುವಿನಿಂದ ಬರ್ಬರವಾಗಿ ಇರಿಯುವುದಕ್ಕೆ ಪ್ರಾರಂಭಿಸಿದ್ದಾರೆ. 40 ಸೆಕೆಂಡುಗಳಲ್ಲಿ 60 ಬಾರಿ ಗುರೂಜಿಯನ್ನು ಚುಚ್ಚಿ ಕೊಂದಿದ್ದಾರೆ.

    ಆಸ್ತಿ, ಹಣಕಾಸಿನ ವ್ಯವಹಾರವೇ ಕೊಲೆಗೆ ಕಾರಣವಾಯ್ತೆ?

    ಚಂದ್ರಶೇಖರ ಗುರೂಜಿ ಅವರ ಬರ್ಬರ ಹತ್ಯೆ ಪ್ರಕರಣದ ಹಿಂದೆ ಅವರು ಮಾಡಿರುವ ಆಸ್ತಿ ಹಾಗೂ ಹಣಕಾಸಿನ ವ್ಯವಹಾರವೇ ಕಾರಣವಾಯ್ತೆ ಎನ್ನುವ ಅನುಮಾನ ಹುಟ್ಟಿಕೊಂಡಿದೆ.

    ಹತ್ಯೆ ಆರೋಪಿಗಳಾದ ಮಹಾಂತೇಶ ಮತ್ತು ಮಂಜುನಾಥ ಗುರೂಜಿ ಅವರ ಸರಳ ವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿಗಳು. ಅಲ್ಲಿಯೇ ಉದ್ಯೋಗ ಮಾಡುತ್ತಿದ್ದ ವನಜಾಕ್ಷಿ ಜೊತೆ ಮಹಾಂತೇಶ ಮದುವೆಯಾಗಿದ್ದ. ಗುರೂಜಿ ಅವರ ಎಲ್ಲ ವ್ಯವಹಾರಗಳು ಮೂವರಿಗೂ ತಿಳಿದಿತ್ತು. ಅಲ್ಲದೆ, ವನಜಾಕ್ಷಿ ಗುರೂಜಿಗೆ ಆಪ್ತಳಾಗಿದ್ದು, ಅವರ ಹೆಸರಲ್ಲಿ ಗೋಕುಲ ರಸ್ತೆಯ ಗುರೂಜಿ ಅಪಾರ್ಟ್‌ಮೆಂಟ್‌ ಸೇರಿದಂತೆ ಹಲವು ಆಸ್ತಿಗಳನ್ನು ನೋಂದಣಿ ಮಾಡಿಸಿದ್ದರು. ಆಸ್ತಿಯನ್ನು ಬೇರೆಯವರಿಗೆ ಮಾರಾಟ ಮಾಡಿರುವ ಕುರಿತು ಪ್ರಶ್ನಿಸಿದಾಗ ಭಿನ್ನಾಭಿಪ್ರಾಯ ಏರ್ಪಟ್ಟಿತ್ತು ಎನ್ನಲಾಗುತ್ತಿದೆ.

    ಆರೋಪಿಗಳು ಸರಳ ವಾಸ್ತು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾಗ ಹಣಕಾಸಿನ ವಿಷಯದಲ್ಲಿ ಅವ್ಯವಹಾರ ನಡೆಸಿದ್ದರು. ಇದರಿಂದ ಗುರೂಜಿ ಅವರನ್ನು ಕೆಲಸದಿಂದ ತೆಗೆದುಹಾಕಿ, ಹಣ ಮರಳಿಸುವಂತೆ ಹೇಳಿದ್ದರು. ಈ ಕೋಪದಿಂದಲೂ ಹತ್ಯೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ಅಸಲಿ ವಿಚಾರ ಏನು ಎನ್ನುವುದು ಪೊಲೀಸರ ತನಿಖೆಯಿಂದ ಬಯಲಾಗ ಬೇಕಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

     

     

    admin
    • Website

    Related Posts

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.