ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಹೆಡ್ ಕಾನ್ ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ ಗಳು ಬ್ರಿಟೀಷರ ಕಾಲದ ಟೋಪಿಯಿಂದ ಮುಕ್ತಿ ಪಡೆಯಲಿದ್ದಾರೆ.
ಈ ಬೇಡಿಕೆ ಬಹು ವರ್ಷಗಳ ಬೇಡಿಕೆಯಾಗಿತ್ತು. ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್ ಪೀಕ್ ಹ್ಯಾಟ್ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳ ತಲೆಯನ್ನು ಅಲಂಕರಿಸಲಿದೆ ಎಂದು ಹೇಳಲಾಗಿದೆ.
ಬ್ರಿಟೀಷರ ಕಾಲದ ಟೋಪಿಯಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಿತ್ತು. ಪ್ರತಿಭಟನೆಯ ಸಂದರ್ಭಗಳಲ್ಲಿ ಓಡುವಾಗ ಟೋಪಿ ಕೆಳಗೆ ಬಿದ್ದರೆ ಸಾರ್ವಜನಿಕವಾಗಿ ಅವಮಾನವಾಗುತ್ತಿತ್ತು. ಪ್ರಸ್ತುತ ಸ್ಮಾರ್ಟ್ ಪೀಕ್ ಹ್ಯಾಟ್ ಬದಲಾವಣೆ ಮಾಡಿದರೆ, ಈ ಸಮಸ್ಯೆಗಳಿಂದ ಪೊಲೀಸರಿಗೆ ಮುಕ್ತಿ ಸಿಗಲಿದೆ.
ಗ್ಲೋಚ್ ಟೋಪಿಯಿಂದ ಪೊಲೀಸ್ ಕಾನ್ಸ್ ಟೇಬಲ್ ಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ವರದಿ ನೀಡಿತ್ತು. ಈಗಾಗಲೇ ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳಿಗೆ ಪೀಕ್ ಕ್ಯಾಪ್ ಗಳನ್ನು ನೀಡಲಾಗಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಲು ಪರಿಶೀಲನೆ ನಡೆಸಿ ವರದಿ ನೀಡಲು ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4