ಬೆಳಗಾವಿ : ನಗರದ ಚನ್ನಮ್ಮ ವೃತ್ತದಲ್ಲಿರುವ ರಾಣಿ ಚನ್ನಮ್ಮ ಪುತ್ಥಳಿಯ ಕಟ್ಟೆಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ.ತಡರಾತ್ರಿ 11.15ರ ಸುಮಾರಿಗೆ ಈ ಘಟನೆ ನಡೆದಿದೆ.
ಕೊಲ್ಲಾಪುರ ವೃತ್ತದ ಕಡೆಯಿಂದ ವೇಗವಾಗಿ ಬಂದ ಲಾರಿ ಪುತ್ಥಳಿಯ ಕಟ್ಟೆಯ ಸುತ್ತಲಿರುವ ಗ್ರಿಲ್ಸ್ ಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗ್ರಿಲ್ಸ್ ಗಳು ನಜ್ಜುಗುಜ್ಜಾಗಿವೆ.
ಚನ್ನಮ್ಮ ಪುತ್ಥಳಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz