ಬೆಂಗಳೂರು: ರಾಜಕೀಯವಾಗಿ ಸಂಕಷ್ಟ ಬಂದಾಗಲೆಲ್ಲ ಜಾತಿ ಗಣತಿ ವರದಿ ಜಾರಿ ವಿಚಾರ ಪ್ರಸ್ತಾಪಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದ ದಾರಿ ತಪ್ಪಿಸುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚಟವಾಗಿ ಬಿಟ್ಟಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯನವರಿಗೆ ಜಾತಿ ಗಣತಿ ವರದಿ ಎನ್ನುವುದು ಖುರ್ಚಿ ಭದ್ರಪಡಿಸಿ ಕೊಳ್ಳುವುದಕ್ಕಾಗಿನ ಮಹಾನ್ ಅಸ್ತ್ರವಾಗಿದೆ ಎಂದು ಅವರು ಟೀಕಿಸಿದ್ದಾರೆ.
ಸಿದ್ದರಾಮಯ್ಯನವರು ಹಾದಿ ತಪ್ಪಿಸುವುದರಲ್ಲಿ ಎಕ್ಸ್ ಪರ್ಟ್, ಇಡೀ ಕರ್ನಾಟಕವನ್ನು ನಾಲ್ಕು ದಶಕಗಳಿಂದ ಹಾದಿ ತಪ್ಪಿಸುತ್ತಲೇ ಬಂದಿದ್ದೀರಿ. ರಾಮಕೃಷ್ಣ ಹೆಗಡೆ, ದೇವೇಗೌಡ, ಎಸ್.ಎಂ.ಕೃಷ್ಣರಂಥ ಘಟಾನುಘಟಿಗಳ ಪಥವನ್ನೇ ಬದಲಿಸಿದ ನಿಮಗೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದಾದರೂ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಬೇಕಿದೆ ಎಂದು ಟೀಕಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296