ತುಮಕೂರು: ಚರಂಡಿ ನೀರು ಹರಿದುಹೋಗುವ ವಿಚಾರದಲ್ಲಿ ಎರಡು ಕುಟುಂಬದ ಹೊಡೆದಾಟ ನಡೆದಿದ್ದು, ಈ ಗಲಾಟೆಯಲ್ಲಿ ಗಾಯಗೊಂಡ ಯುವಕ ಸಾವನ್ನಪ್ಪಿದ ಘಟನೆ ತಿಪಟೂರು ತಾಲೂಕಿನ ಕನ್ನುಘಟ್ಟ ಗ್ರಾಮದಲ್ಲಿ ನಡೆದಿದೆ.
ವಸಂತ ಕುಮಾರ್(24) ಮೃತ ಯುವಕನಾಗಿದ್ದಾನೆ. ಶಿವಬಸವಯ್ಯ ಮತ್ತು ಬಸವಲಿಂಗಯ್ಯರ ಕುಟುಂಬದ ನಡುವೆ ಗಲಾಟೆ ನಡೆದಿತ್ತು.
ಗಲಾಟೆ ವೇಳೆ ಶಿವಬಸವಯ್ಯರ ಕುಟುಂಬದ ಮೇಲೆ ಬಸವಲಿಂಗಯ್ಯ ಕುಟುಂಬ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಪರಿಣಾಮವಾಗಿ ಶಿವಬಸವಯ್ಯರ ಪುತ್ರ ವಸಂತ ಕುಮಾರ್ ಸಾವನ್ನಪ್ಪಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಬಸವಲಿಂಗಯ್ಯ, ಕುಮಾರ್, ವಿಜಯ್ ಸೇರಿದಂತೆ ಒಟ್ಟು 8 ಜನರ ವಿರುದ್ದ ದೂರು ದಾಖಲಾಗಿದ್ದು, ನೊಣವಿನಕೆರೆ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA