ಬೆಂಗಳೂರು : ಬೆಂಗಳೂರಿನ ಕೋಣನಕುಂಟೆ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ವಿದ್ಯುತ್ ಶಾಕ್ ನಿಂದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಹಾಗೂ ಅಸ್ಸಾಂ ಮೂಲದ ದಿಲೀಪ್ ಮೃತ ಕಾರ್ಮಿಕರು.
ಕೋಣನಕುಂಟೆ ಬಳಿಯ ಪ್ರೆಸ್ಟೀಜ್ ಗ್ರೂಪ್ ನ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಬ್ಬರು ಕಾರ್ಮಿಕರು ಅಪಾರ್ಟ್ ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಎಸ್ ಟಿಪಿ ಸಂಪ್ ಬಳಿ ಕೆಲಸ ಮಾಡುತ್ತಿದ್ದರು. ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


