ರಾಜ್ಯವನ್ನೇ ತಲ್ಲಣಗೊಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪೊಲೀಸರು ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ದೋಷಾರೋಪನ ಪಟ್ಟಿಯಲ್ಲಿ ಇರುವ ಮಾಹಿತಿಗಳು ದರ್ಶನ್ ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದನ್ನು ದೃಢ ಪಡಿಸಿವೆ ಎನ್ನಲಾಗಿದೆ. ದರ್ಶನ್ ಎ2 ಆರೋಪಿ ಆಗಿ ಮುಂದುವರಿದಿದ್ದಾರೆ. ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಡೆದ ಬಳಿಕ ಅದನ್ನು ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.
ದರ್ಶನ್ ಕೊಲೆ ನಡೆದ ಸ್ಥಳದಲ್ಲಿ ಇರುವುದು ಹಾಗೂ ಕೊಲೆ ಬಳಿಕ ಸ್ಥಳದಿಂದ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ರಕ್ತ ಇರುವುದು ಪತ್ತೆ ಆಗಿದೆ. ಇದಕ್ಕೆ ಸಾಕ್ಷ್ಯಗಳು ಕೂಡ ಸಿಕ್ಕಿವೆ. ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ್ದು ಚಾರ್ಜ್ಶೀಟ್ ನಲ್ಲಿ ದೃಢಪಟ್ಟಿದೆ. ಚಾರ್ಜ್ ಶೀಟ್ ನಲ್ಲಿ 231ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆಗಳ ಉಲ್ಲೇಖ ಮಾಡಲಾಗಿದೆ.
ಪವಿತ್ರಾ ಗೌಡ ಕೊಲೆ ಮಾಡಲು ಮೂಲ ಕಾರಣ ಅನ್ನೋದು ಚಾರ್ಜ್ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಹಲ್ಲೆ ನಡೆಸುವ ಸ್ಥಳದಲ್ಲಿ ಹಾಜರಿದ್ದರು ಮತ್ತು ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ ಅಂತ ವರದಿಗಳಿಂದ ತಿಳಿದು ಬಂದಿದೆ.
ಕೊಲೆ ನಡೆಸ ಸ್ಥಳದಲ್ಲಿ ಪವಿತ್ರ ಗೌಡ ಮೊಬೈಲ್ ಆ್ಯಕ್ಟಿವ್ ಆಗಿತ್ತು. ಉಳಿದಂತೆ ಇಬ್ಬರ ಪಾತ್ರ ನೇರ ಪಾತ್ರದ ಬಗ್ಗೆ ಕೊಲೆಯಲ್ಲಿ ಸಾಕ್ಷಿಗಳು ಸಿಕ್ಕಿವೆ ಅಂತ ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q