ಅಮಿತಾ ಜಿಂದಾಲ್ ಎಂಬ ಮಹಿಳೆಗೆ ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣ, ರಾಜ್ಯದಲ್ಲಿ ಸಾಕಷ್ಟು ಚರ್ಚೆ ಆಗಿತ್ತು. ಉದ್ದೇಶ ಪೂರ್ವಕವಾಗಿ ನಾಯಿಯನ್ನು ಭೂ ಬಿಡಲಾಗಿದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದರು.
ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಕೂಲಂಕುಷವಾಗಿ ವಿಚಾರಣೆ ನಡೆಸಿದ್ದು, ಇದರಲ್ಲಿ ದರ್ಶನ್ ಪಾತ್ರ ಇಲ್ಲದೇ ಇರುವುದು ತನಿಖೆಯಲ್ಲಿ ಸಾಬೀತಾಗಿದೆ.
ಹೀಗಾಗಿ, ದೋಷಾರೋಪ ಪಟ್ಟಿಯಲ್ಲಿ ನಟನ ಹೆಸರು ಸೇರಿಸದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.


