ತುಮಕೂರು: ಗುಬ್ಬಿ ತಾಲೂಕು ನಿಟ್ಟೂರು ಹೋಬಳಿಪುರ ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿ ರಥಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಉದಾರಿ ಬಿನ್ ರಾಧೇಶಾಂ ಘೋರಕ್(35) ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಉತ್ತರ ಪ್ರದೇಶದ ರಾಜ್ಯ ಮೂಲದವನು ಎಂದು ತಿಳಿದು ಬಂದಿದೆ.
ಮಾರ್ಚ್ 11ರ ಮಧ್ಯಾಹ್ನ ಆರೋಪಿ ರಥಕ್ಕೆ ಬೆಂಕಿ ಹಚ್ಚಿದ್ದ. ಪರಿಣಾಮವಾಗಿ ದೇವರ ರಥವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296